Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಭಾರತವನ್ನು ಅಖಂಡ ರಾಷ್ಟ್ರವನ್ನಾಗಿ...

ಭಾರತವನ್ನು ಅಖಂಡ ರಾಷ್ಟ್ರವನ್ನಾಗಿ ರೂಪಿಸುವಲ್ಲಿ ಪಟೇಲರ ಪಾತ್ರ ಐತಿಹಾಸಿಕ : ಶಿವಶರಣಪ್ಪ ವಾಲಿ

ವಾರ್ತಾಭಾರತಿವಾರ್ತಾಭಾರತಿ31 Oct 2026 8:40 PM IST
share
ಭಾರತವನ್ನು ಅಖಂಡ ರಾಷ್ಟ್ರವನ್ನಾಗಿ ರೂಪಿಸುವಲ್ಲಿ ಪಟೇಲರ ಪಾತ್ರ ಐತಿಹಾಸಿಕ : ಶಿವಶರಣಪ್ಪ ವಾಲಿ

ಬೀದರ್ : ಸ್ವಾತಂತ್ರ್ಯಾನಂತರ ದೇಶದ 565 ಸಂಸ್ಥಾನಗಳನ್ನು, ರಾಜ, ಮಹಾರಾಜರನ್ನು ಒಗ್ಗೂಡಿಸಿ, ಭಾರತವನ್ನು ಅಖಂಡ ರಾಷ್ಟ್ರವನ್ನಾಗಿ ರೂಪಿಸುವಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲರು ಐತಿಹಾಸಿಕ ಪಾತ್ರವಹಿಸಿದ್ದರು. ಇಂತಹ ಮಹಾಪುರುಷರ ಪುತ್ಥಳಿ ಸ್ಥಾಪನೆಗೆ ಸರಕಾರಿ ಅಧಿಕಾರಿಗಳೇ ವಿನಾಕಾರಣ ಅಡ್ಡಿಪಡಿಸುತ್ತಿರುವುದು ಸರ್ಕಾರಕ್ಕೂ, ಸಮಾಜಕ್ಕೂ ನಾಚಿಕೆಗೇಡಿನ ಸಂಗತಿ ಎಂದು ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಷ್ಠಾನದ ಅಧ್ಯಕ್ಷ ಶಿವಶರಣಪ್ಪ ವಾಲಿ ವಿಷಾದ ವ್ಯಕ್ತಪಡಿಸಿದರು.

ನಗರದ ಅಂಬೇಡ್ಕರ್ ವೃತ್ತದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಷ್ಠಾನ, ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿಕ ಇಲಾಖೆ, ಸರ್ವೋದಯ ನ್ಯಾಸ್, ಭಾರತ ಸೇವಾದಳ, ಭಾರತ ಸಂರಕ್ಷಣಾ ಸಮಿತಿ, ಸರ್ಕಾರಿ ಮತ್ತು ಅರೆ ಸರ್ಕಾರಿ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಶನಿವಾರ ನಡೆದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲರ 152ನೇ ಜಯಂತಿ ಮತ್ತು 13ನೇ ರಾಷ್ಟ್ರೀಯ ಏಕತಾ ಪ್ರತಿಜ್ಞೆ ಸ್ವೀಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಳೆದ ಎರಡು ದಶಕಗಳಿಂದ ನಗರದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲರ ಪುತ್ಥಳಿ ಸ್ಥಾಪನೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದು, ಈ ಹಾದಿಯಲ್ಲಿ ವಿನಾಕಾರಣ ಅಡೆತಡೆ ಎದುರಿಸಬೇಕಾಯಿತು. ಕೆಲ ಅಧಿಕಾರಿಗಳು ಪಟೇಲರ ಮೂರ್ತಿ ಸ್ಥಾಪನೆ ಕಾರ್ಯಕ್ಕೂ ಅಡ್ಡಿಪಡಿಸಿದರು. ಆದರೆ, ಗೌರವಾನ್ವಿತ ನ್ಯಾಯಾಲಯದ ಸಹಾಯದಿಂದ ಸದ್ಯ ಪುತ್ಥಳಿ ಸ್ಥಾಪನೆ ಕಾರ್ಯ ಅಂತಿಮ ಹಂತ ತಲುಪಿದ್ದು, ಶೀಘ್ರದಲ್ಲೇ ನಗರದ ಶಿವನಗರ ಸಿಗ್ನಲ್ ಬಳಿ ಸರ್ದಾರ್ ಪಟೇಲರ ಪುತ್ಥಳಿ ಪ್ರತಿಷ್ಠಾಪನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಕೇಂದ್ರ ಸಚಿವ ಭಗವಂತ್‌ ಖೂಬಾ ಅವರು ಮಾತನಾಡಿ, ಸ್ವಾತಂತ್ರ್ಯಾನಂತರ ಸಾಮ, ದಾನ, ದಂಡ, ಭೇದ ನೀತಿಗಳ ಮೂಲಕ ಸಂಸ್ಥಾನಗಳನ್ನು ಒಗ್ಗೂಡಿಸಿ ದೇಶದ ಏಕತೆಯನ್ನು ಸಾಕಾರಗೊಳಿಸಿದ ಕೀರ್ತಿ ಪಟೇಲರಿಗೆ ಸಲ್ಲುತ್ತದೆ. ಧರ್ಮ, ಭಾಷೆ ಹಾಗೂ ಸಂಸ್ಕೃತಿಗಳು ವಿಭಿನ್ನವಾಗಿದ್ದರೂ ರಾಷ್ಟ್ರದ ವಿಷಯ ಬಂದಾಗ ಎಲ್ಲರೂ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಒಗ್ಗಟ್ಟಿನಿಂದ ನಿಲ್ಲಬೇಕು. ದೇಶದ ಅಖಂಡತೆ ಕಾಪಾಡಲು ಯುವಜನತೆ ಬದ್ಧರಾಗಬೇಕು ಎಂದು ಕರೆ ನೀಡಿದರು.

ಶಾಸಕ ಶೈಲೇಂದ್ರ ಬೆಲ್ದಾಳೆ ಅವರು ಮಾತನಾಡಿ, ಹೈದರಾಬಾದ್ ನಿಜಾಮನ ಆಡಳಿತದಿಂದ ನಲುಗಿದ್ದ ಈ ಭಾಗದ ಜನರಿಗೆ ಮುಕ್ತಿ ದೊರಕಿಸಿಕೊಡುವಲ್ಲಿ ಪಟೇಲರ ಪಾತ್ರ ಮಹತ್ವದ್ದಾಗಿದೆ. ಅವರ ರಾಷ್ಟ್ರಸೇವೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು.

ಮಾಜಿ ವಿಧಾನ ಪರಿಷತ್ ಸದಸ್ಯ ಅರವಿಂದ್‌ ಅರಳಿ ಅವರು ಮಾತನಾಡಿ, ಹೈದರಾಬಾದ್ ಸಂಸ್ಥಾನವನ್ನು ಭಾರತದ ಒಕ್ಕೂಟಕ್ಕೆ ಸೇರಿಸುವಲ್ಲಿ ಅವರು ಕೈಗೊಂಡ ಐತಿಹಾಸಿಕ ನಿರ್ಧಾರಗಳ ಕುರಿತು ಯುವಪೀಳಿಗೆಗೆ ತಿಳಿಸಬೇಕಿದೆ ಎಂದು ಸಲಹೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಚನ್ನಬಸವೇಶ್ವರ ಜ್ಞಾನಪೀಠದ ಚನ್ನಬಸವಾನಂದ್‌ ಸ್ವಾಮೀಜಿ, ಬಿಜೆಪಿ ಮುಖಂಡ ಈಶ್ವರ್‌ಸಿಂಗ್ ಠಾಕೂರ್, ಬುಡಾ ಅಧ್ಯಕ್ಷ ವಿನೋದ್‌ ಅಪ್ಪೆ, ಮಾಜಿ ಬುಡಾ ಅಧ್ಯಕ್ಷ ಬಾಬು ವಾಲಿ, ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸವರಾಜ್‌ ಜಾಬಶೆಟ್ಟಿ, ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಬಿ.ಜಿ.ಶೆಟಗಾರ್, ಶಕುಂತಲಾ ಬೆಲ್ದಾಳೆ, ರೇವಣಸಿದ್ದಪ್ಪ ಜಲಾದೆ, ದೀಪಕ್ ವಾಲಿ, ಆದಿಶ್ ವಾಲಿ, ಕರ್ನಲ್ ಶರಣಪ್ಪ ಸಿಕೆನಪುರ್‌, ಬಸವರಾಜ್‌ ಧನ್ನೂರ್‌, ಫೆರ್ನಾಂಡಿಸ್ ಹಿಪ್ಪಳಗಾಂವ್‌, ಸುರೇಶ್‌ ಚನ್ನಶೆಟ್ಟಿ ಹಾಗೂ ವಿಜಯಕುಮಾರ್ ಸೋನಾರೆ ಸೇರಿ ಹಲವರಿದ್ದರು.

Tags

Shiv Sharanappa Walibidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X