Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಗೃಹಲಕ್ಷ್ಮಿ ಸಂಘಗಳ ಮೂಲಕ ಮಹಿಳೆಯರಿಗೆ...

ಗೃಹಲಕ್ಷ್ಮಿ ಸಂಘಗಳ ಮೂಲಕ ಮಹಿಳೆಯರಿಗೆ ಆರ್ಥಿಕ ಬಲ ತುಂಬಲು ಯೋಜನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ವಾರ್ತಾಭಾರತಿವಾರ್ತಾಭಾರತಿ5 July 2025 7:22 PM IST
share
ಗೃಹಲಕ್ಷ್ಮಿ ಸಂಘಗಳ ಮೂಲಕ ಮಹಿಳೆಯರಿಗೆ ಆರ್ಥಿಕ ಬಲ ತುಂಬಲು ಯೋಜನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೀದರ್: ರಾಜ್ಯದಲ್ಲಿ 30 ರಿಂದ 40 ಲಕ್ಷ ಗೃಹಲಕ್ಷ್ಮಿ ಸಂಘಗಳನ್ನು ರಚಿಸುವ ಯೋಜನೆಯಿದ್ದು, ಈ ಮೂಲಕ ಯಜಮಾನಿಯರಿಗೆ ಆರ್ಥಿಕವಾಗಿ ಬಲ ತುಂಬಲು ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹೇಳಿದರು.

ಇಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಲಬುರಗಿ ವಿಭಾಗ ಮಟ್ಟದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎರಡನೇ ದಿನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಈ ವರ್ಷ ಅಂಗನವಾಡಿ ಆರಂಭವಾಗಿ 50 ವರ್ಷ ತುಂಬುತ್ತಿದ್ದು, ಅಕ್ಟೋಬರ್ ನಲ್ಲಿ ಸುವರ್ಣ ಮಹೋತ್ಸವ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಗೃಹಲಕ್ಷ್ಮಿ ಸಂಘಗಳ ಘೋಷಣೆ ಮಾಡಿ ಇನ್ನಷ್ಟು ಬಲ ತುಂಬಲಾಗುವುದು. ಇಲಾಖೆಯಲ್ಲಿ ಸಾಕಷ್ಟು ಯೋಜನೆಗಳಿದ್ದು, ಜನರಿಗೆ ತಿಳುವಳಿಕೆ ಮೂಡಿಸಲು ಇನ್ನೂ ಹೆಚ್ಚಿನ ಕ್ರಮ ಕೈಗೊಳ್ಳಬೇಕು. ನಮ್ಮ ಇಲಾಖೆಯು ಜನರ ಬದುಕಿಗೆ ಹತ್ತಿರವಾದ ಇಲಾಖೆಯಾಗಿದೆ. ಅಧಿಕಾರಿಗಳು ಹೆಚ್ಚು ಕಾಳಜಿಯಿಂದ ಕೆಲಸ ಮಾಡಬೇಕು ಎಂದರು.

ಬಾಲ್ಯ ವಿವಾಹವನ್ನು ತಡೆಯಲು ಅಧಿಕಾರಿಗಳು ವಿಶೇಷ ಕ್ರಮಕೈಗೊಳ್ಳಬೇಕು. ಸ್ವತಃ ಕರೆ ಮಾಡಿ ತನ್ನ ವಿವಾಹವನ್ನು ತಪ್ಪಿಸುವಂತೆ ಅಧಿಕಾರಿಗಳನ್ನು ಕೋರಿದ್ದ ಜಿಲ್ಲೆಯ ಬಾಲಕಿಯನ್ನು ಕರೆಸಿ ಸನ್ಮಾನಿಸಬೇಕು. ಜೊತೆಗೆ ಆರ್ಥಿಕ ಸಹಾಯ ಮಾಡಬೇಕು. ಇದರಿಂದ ಬೇರೆಯವರಿಗೂ ಕೂಡ ಸಹಾಯವಾಗುತ್ತದೆ. ಎಲ್ಲಾ ಇಲಾಖೆಗಳು ಕೈಜೋಡಿಸಿದಾಗ ಅನಿಷ್ಠ ಪದ್ಧತಿಗಳನ್ನು ತಡೆಯಲು ಸಾಧ್ಯ. ಜಾಗೃತಿ ಮೂಡಿಸುವುದರ ಜೊತೆಗೆ ಕಠಿಣ ಕ್ರಮ ಕೈಗೊಳ್ಳುವ ಮೂಲಕ ಭಯ ಹುಟ್ಟಿಸಿದರೆ ಅನಿಷ್ಠ ಪದ್ಧತಿ ನಿಲ್ಲಲು ಸಾಧ್ಯ. ಕೇಂದ್ರ ಹಾಗೂ ರಾಜ್ಯದಿಂದ ಕಾಲ ಕಾಲಕ್ಕೆ ನೀಡಲಾಗುವ ಗುರಿಯನ್ನು ತಲುಪಲೇಬೇಕು. ಇಲಾಖೆ ಯೋಜನೆಯ ಅನುಷ್ಠಾನದಲ್ಲಿ ಹಿಂದೆ ಬಿದ್ದಲ್ಲಿ ಅಧಿಕಾರಿ, ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಅಂಗನವಾಡಿ ಕಟ್ಟಡಗಳ ದುರಸ್ತಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಅಂಗನವಾಡಿ ಕೇಂದ್ರಗಳಿಗೆ ಆಗಾಗ ಭೇಟಿ ನೀಡುತ್ತಿರಬೇಕು. ಎಲ್ಲಾ ಇಲಾಖೆಯ ಅಧಿಕಾರಿಗಳು ಸಾಮಾಜಿಕ ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಬೇಕು. ಆಗ ಮಾತ್ರ ಸರ್ಕಾರಕ್ಕೂ ಒಳ್ಳೆ ಹೆಸರು ಬರುತ್ತದೆ. ಸಮಾಜಕ್ಕೂ ಸಹಾಯವಾಗುತ್ತದೆ. ಇಲಾಖೆಯಲ್ಲಿ ಸಾಕಷ್ಟು ಯೋಜನೆಗಳಿವೆ. ಅವುಗಳ ಕುರಿತು ಜನರಿಗೆ ಸರಿಯಾದ ಅರಿವಿಲ್ಲ. ಯೋಜನೆಗಳನ್ನು ಜನರಿಗೆ ತಲುಪಿಸಬೇಕು. ಮಹಿಳೆಯರಿಗೆ ಸಹಾಯ ಮಾಡಲು ಬೇಕಾದಷ್ಟು ಅವಕಾಶಗಳಿವೆ. ಈ ಮೂಲಕ ಹೆಚ್ಚು ಹೆಚ್ಚು ಜನರನ್ನು ತಲುಪಬೇಕು ಎಂದು ಕರೆ ನೀಡಿದರು.

ಕಲಬುರಗಿ ವಿಭಾಗದಲ್ಲಿ ಗೃಹಲಕ್ಷ್ಮಿ ಯೋಜನೆಗೆ 10 ಸಾವಿರ ಕೋಟಿ ರೂ. : ಈ ಭಾಗಕ್ಕೆ ಗೃಹ ಲಕ್ಷ್ಮೀ ಯೋಜನೆ ಮೂಲಕ 10 ಸಾವಿರ ಕೋಟಿ ರೂ. ನೀಡಲಾಗಿದೆ. ಯಾರಿಗೂ ಯೋಜನೆ ಕೈ ತಪ್ಪದಂತೆ ಕ್ರಮ ಕೈಗೊಳ್ಳಬೇಕು. ಗೃಹಲಕ್ಷ್ಮೀ ಹಣದಿಂದ ಮಹಿಳೆಯರು ಸಾಕಷ್ಟು ಕಾರ್ಯಕ್ರಮ ಮಾಡುತ್ತಿದ್ದಾರೆ. ಅವುಗಳನ್ನು ಪ್ರಚಾರ ಮಾಡುವುದರಿಂದ ಇತರರಿಗೂ ಲಾಭವಾಗುತ್ತದೆ ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಇಲಾಖೆಯ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಸಿಇಒ ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಪ್ರದೀಪ್ ಗುಂಟಿ, ಇಲಾಖೆಯ ನಿರ್ದೇಶಕ ರಾಘವೇಂದ್ರ, ಜಂಟಿ ಕಾರ್ಯದರ್ಶಿ ಹಾಗೂ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್ ಹಾಗೂ ಅಂಗವಿಕಲ ವ್ಯಕ್ತಿಗಳ ಹಕ್ಕು ಅಧಿನಿಯಮದ ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ ಸೇರಿದಂತೆ ಇಲಾಖೆಯ ಜಂಟಿ ನಿರ್ದೇಶಕರು, ಉಪ ನಿರ್ದೇಶಕರು, ಅಧಿಕಾರಿ ವರ್ಗದವರು ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X