Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಜಿಲ್ಲೆಯ ಪ್ರತಿ ಮನೆಗೆ ಸರಕಾರದ ಯೋಜನೆ...

ಜಿಲ್ಲೆಯ ಪ್ರತಿ ಮನೆಗೆ ಸರಕಾರದ ಯೋಜನೆ ತಲುಪಲು ಪ್ರಜಾಸೇವಾ ಅಭಿಯಾನ : ಶಾಸಕ ರಹೀಮ್‌ ಖಾನ್

ವಾರ್ತಾಭಾರತಿವಾರ್ತಾಭಾರತಿ5 Sept 2026 6:30 PM IST
share
ಜಿಲ್ಲೆಯ ಪ್ರತಿ ಮನೆಗೆ ಸರಕಾರದ ಯೋಜನೆ ತಲುಪಲು ಪ್ರಜಾಸೇವಾ ಅಭಿಯಾನ : ಶಾಸಕ ರಹೀಮ್‌ ಖಾನ್

ಬೀದರ್: ಜಿಲ್ಲೆಯ ಪ್ರತಿ ತಾಲೂಕಿನ ಪ್ರತಿ ಗ್ರಾಮದ ಜನರ ಮನೆ ಬಾಗಿಲಿಗೆ ಜಿಲ್ಲಾಡಳಿತ ತಲುಪಿ, ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಒದಗಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಸಭೆಗಳನ್ನು ಆಯೋಜಿಸಲಾಗುತ್ತಿದೆ ಎಂದು ಶಾಸಕ ರಹೀಮ್ ಖಾನ್ ಹೇಳಿದರು.

ಬೀದರ್ ತಾಲೂಕಿನ ಜನವಾಡದಲ್ಲಿ ಶನಿವಾರ ಪ್ರಜಾಸೇವಾ ಆಂದೋಲನ ಸಭೆಗೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರದ ಪ್ರತಿಯೊಂದು ಯೋಜನೆ ಹಾಗೂ ಸೌಲಭ್ಯಗಳನ್ನು ಗ್ರಾಮಸ್ಥರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಡಳಿತ ಕಚೇರಿಗಳಿಗೆ ಗ್ರಾಮಸ್ಥರು ಅಲೆದಾಡುವುದನ್ನು ತಪ್ಪಿಸಲು ಅಧಿಕಾರಿಗಳೇ ಜನರ ಬಳಿಗೆ ಬಂದಿದ್ದಾರೆ ಎಂದರು.

ಜಿಲ್ಲೆಯ 40ಕ್ಕೂ ಹೆಚ್ಚು ಇಲಾಖೆಗಳ ಅಧಿಕಾರಿಗಳು ಸ್ಥಳದಲ್ಲೇ ಲಭ್ಯವಿದ್ದು, ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು. ಸ್ಥಳದಲ್ಲೇ ಇತ್ಯರ್ಥಪಡಿಸಬಹುದಾದ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಲಾಗುವುದು. ಉಳಿದ ಅಹವಾಲುಗಳ ಕುರಿತು ಅಧಿಕಾರಿಗಳು 15 ದಿನಗಳೊಳಗೆ ಜಿಲ್ಲಾಡಳಿತ ಹಾಗೂ ಸಾರ್ವಜನಿಕರಿಗೆ ವರದಿ ಸಲ್ಲಿಸಬೇಕು. ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿ, ಕಳೆದ ವರ್ಷವೂ ಇದೇ ಗ್ರಾಮದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದೀಗ ಪ್ರಜಾಸೇವಾ ಅಭಿಯಾನದಡಿ ವಿವಿಧ ಸರ್ಕಾರಿ ಯೋಜನೆಗಳು ಗ್ರಾಮಸ್ಥರ ಮನೆ ಬಾಗಿಲಿಗೆ ತಲುಪಿವೆ. ಗ್ರಾಮೀಣ ಪ್ರದೇಶದ ರಸ್ತೆ, ಚರಂಡಿ, ಹೊಲಗಳಿಗೆ ರಸ್ತೆ, ಸರ್ವೇ ಸೇರಿದಂತೆ ವಿವಿಧ ಸಮಸ್ಯೆಗಳನ್ನು 15 ದಿನಗಳೊಳಗೆ ಇತ್ಯರ್ಥಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರತಿದಿನ ಬೆಳಿಗ್ಗೆ ಒಂದೊಂದು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮೀಣ ಭಾಗದ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. ಶನಿವಾರ ಬೆಳಿಗ್ಗೆ ಕಮಲನಗರ ಗ್ರಾಮಕ್ಕೆ ಭೇಟಿ ನೀಡಿ ಬಳಿಕ ಜನವಾಡದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕೆ ಕ್ರಮವಹಿಸಿದ್ದಾರೆ. ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಅವರು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲರಾವ್ ಮಾತನಾಡಿ, ಸರ್ಕಾರದ ಮಹತ್ವಾಕಾಂಕ್ಷಿ ಹಾಗೂ ವಿನೂತನ ಪ್ರಜಾಸೇವಾ ಅಭಿಯಾನವನ್ನು ಸಾರ್ವಜನಿಕರು ಜಿಲ್ಲಾ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಅವರ ಬಳಿಗೆ ತೆರಳಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅಹವಾಲು ಸಲ್ಲಿಸಿ ಪರಿಹಾರ ಪಡೆದುಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಬರದ ಛಾಯೆ ಆವರಿಸಿದ್ದು, ಕಳೆದ ಒಂದು ವಾರದಿಂದ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ್ದೇನೆ. ಸೆ.4ರಂದು ಜಿಲ್ಲೆಯಲ್ಲಿ ಸುಮಾರು 38 ಸಾವಿರ ಉದ್ಯೋಗಗಳನ್ನು ಸೃಷ್ಟಿಸಲಾಗಿದೆ. ಸಾರ್ವಜನಿಕರು ಗುಳೆ ಹೋಗದೆ ತಮ್ಮ ತಮ್ಮ ಗ್ರಾಮಗಳಲ್ಲಿಯೇ ವಿಬಿ-ಜಿ ರಾಮ್ ಜಿ ಯೋಜನೆಯಡಿ ಕಾಮಗಾರಿಗಳನ್ನು ಕೈಗೊಳ್ಳಬೇಕು. ಪ್ರಜಾಸೇವಾ ಅಭಿಯಾನದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಸಮರ್ಪಕವಾಗಿ ಸ್ಪಂದಿಸಬೇಕು. ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಸಾರ್ವಜನಿಕರು ಹಾಗೂ ಅಧಿಕಾರಿಗಳು ಕೈಜೋಡಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸುಮಾರು 40 ಇಲಾಖೆಗಳು ಅಹವಾಲು ಸ್ವೀಕಾರ ಮಳಿಗೆಗಳನ್ನು ಸ್ಥಾಪಿಸಿದ್ದವು. ಒಟ್ಟು 400 ಅಹವಾಲುಗಳು ಸ್ವೀಕೃತವಾದವು. ಜಿಲ್ಲೆಯ ಔರಾದ್ ತಾಲೂಕಿನ ಸಂತಪೂರ್, ಚಿಟಗುಪ್ಪಾದ ಬೆಳಮಖೇಡ, ಬೀದರ್‌ನ ಜನವಾಡ, ಹುಮನಾಬಾದ್‌ನ ಹಳ್ಳಿಖೇಡ, ಬಸವಕಲ್ಯಾಣದ ಮುಡಬಿ, ಕಮಲನಗರ ಹಾಗೂ ಹುಲಸೂರು ಹೋಬಳಿಗಳಲ್ಲಿ ಪ್ರಜಾಸೇವಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಬಾಲ್ಕಿ ತಾಲೂಕಿನ ಮೆಹಕರ್ ಗ್ರಾಮದಲ್ಲಿ ಸೆ.8ರಂದು ಸಚಿವ ಈಶ್ವರ ಖಂಡ್ರೆ ಅವರ ನೇತೃತ್ವದಲ್ಲಿ ಪ್ರಜಾಸೇವಾ ಆಂದೋಲನ ನಡೆಯಲಿದೆ.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸುರೇಖಾ, ಎಸ್ಪಿ ಪ್ರದೀಪ್‌ ಗುಂಟಿ, ಅರಣ್ಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags

rahim khan
share
ವಾರ್ತಾಭಾರತಿ
ವಾರ್ತಾಭಾರತಿ
Next Story
X