Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬಿಎಸ್‌ಎಸ್‌ಕೆ ದುಸ್ಥಿತಿಗೆ ಹಿಂದಿನ...

ಬಿಎಸ್‌ಎಸ್‌ಕೆ ದುಸ್ಥಿತಿಗೆ ಹಿಂದಿನ ಆಡಳಿತ ಕಾರಣ: ಶಾಸಕ ಸಿದ್ಧು ಪಾಟೀಲ್ ಆರೋಪ

ವಾರ್ತಾಭಾರತಿವಾರ್ತಾಭಾರತಿ22 Aug 2026 7:18 PM IST
share
ಬಿಎಸ್‌ಎಸ್‌ಕೆ ದುಸ್ಥಿತಿಗೆ ಹಿಂದಿನ ಆಡಳಿತ ಕಾರಣ: ಶಾಸಕ ಸಿದ್ಧು ಪಾಟೀಲ್ ಆರೋಪ
ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಪುನರಾರಂಭಕ್ಕೆ ಒತ್ತಾಯ

ಹುಮನಾಬಾದ್: ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ (ಬಿಎಸ್‌ಎಸ್‌ಕೆ) ದುಸ್ಥಿತಿಗೆ ಹಿಂದಿನ ಆಡಳಿತವೇ ನೇರ ಹೊಣೆಗಾರವಾಗಿದೆ ಎಂದು ಹುಮನಾಬಾದ್ ಶಾಸಕ ಸಿದ್ಧು ಪಾಟೀಲ್ ಆರೋಪಿಸಿದರು.

ಹುಮನಾಬಾದ್‌ನಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ರೈತರ ಜೀವನಾಡಿಯಾಗಿರುವ ಬಿಎಸ್‌ಎಸ್‌ಕೆ ಕಾರ್ಖಾನೆಯನ್ನು ಲೀಸ್ ಆಧಾರದ ಮೇಲೆ ಟೆಂಡರ್ ಕರೆದು ಪುನರಾರಂಭಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಬಹಳ ಹಳೆಯದಾದ ಬಿಎಸ್‌ಎಸ್‌ಕೆ ಕಾರ್ಖಾನೆ ಸಾಲದ ಸುಳಿಗೆ ಸಿಲುಕಿ ಹಲವು ವರ್ಷಗಳಿಂದ ಸ್ಥಗಿತಗೊಂಡಿದೆ. ಕಾರ್ಖಾನೆ ಪುನಶ್ಚೇತನಗೊಳಿಸುವ ಕುರಿತು ಹಲವು ಬಾರಿ ಸರ್ಕಾರದ ಮಟ್ಟದಲ್ಲಿ ಸಭೆಗಳು ನಡೆದಿದ್ದರೂ, ಸಕ್ಕರೆ ಸಚಿವರು ಹಾಗೂ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದರೂ ಯಾವುದೇ ಕ್ರಮವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾರ್ಖಾನೆ ಪಡೆದ ಸಾಲ ಮರುಪಾವತಿಯಾಗದ ಕಾರಣ ಬೀದರ್ ಡಿಸಿಸಿ ಬ್ಯಾಂಕ್ ಸುಮಾರು 145 ಎಕರೆ ಜಾಗ ಹಾಗೂ ಕಾರ್ಖಾನೆಯನ್ನು ತನ್ನ ಹೆಸರಿಗೆ ಮಾಡಿಕೊಂಡಿದ್ದು, ಇದರ ಪರಿಣಾಮ ಕಾರ್ಖಾನೆ ಸಂಪೂರ್ಣ ಸ್ಥಗಿತಗೊಂಡಿದೆ. ಈ ಕಾರ್ಖಾನೆಯನ್ನು 29 ಸಾವಿರ ಷೇರುದಾರರು, 600 ಕಾರ್ಮಿಕರು ಹಾಗೂ 5 ಸಾವಿರಕ್ಕೂ ಹೆಚ್ಚು ಕೃಷಿ ಕಾರ್ಮಿಕರು ಅವಲಂಬಿಸಿದ್ದಾರೆ ಎಂದು ಹೇಳಿದರು.

2015ರಿಂದ 2020ರವರೆಗೆ ಕಾರ್ಖಾನೆಯಲ್ಲಿ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರ ಜೊತೆಗೆ ಮಾಜಿ ಶಾಸಕರ ಸಹೋದರ ಭೀಮರಾವ್ ಪಾಟೀಲ್ ಅವರ ಸಹಿಯೂ ಕಡ್ಡಾಯವಾಗಿತ್ತು. ಈ ಟ್ರಿಪಲ್ ಸಹಿ ಪದ್ಧತಿ ಯಾಕೆ ಜಾರಿಯಲ್ಲಿತ್ತು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಅವರು ಆರೋಪಿಸಿದರು.

2015–16ರಲ್ಲಿ ಕೇವಲ 55 ದಿನ ಕಾರ್ಖಾನೆ ನಡೆಸಿ 67,669 ಮೆಟ್ರಿಕ್ ಟನ್ ಕಬ್ಬು ನುರಿಸಲಾಗಿದ್ದು, 2016–17ರಲ್ಲಿ 39 ದಿನ ಕಾರ್ಯನಿರ್ವಹಿಸಿ 42,129 ಮೆಟ್ರಿಕ್ ಟನ್ ಮಾತ್ರ ಕ್ರಶಿಂಗ್ ಮಾಡಲಾಗಿದೆ. ವರ್ಷಕ್ಕೆ 5 ಲಕ್ಷ ಟನ್ ಸಾಮರ್ಥ್ಯದ ಕಾರ್ಖಾನೆಯನ್ನು ಕೇವಲ 40 ಸಾವಿರ ಟನ್ ಮಟ್ಟಕ್ಕೆ ಇಳಿಸಿ ನಷ್ಟಕ್ಕೆ ದೂಡಿದವರಿಗೆ ಈಗ ಹರಾಜಿನ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಕಿಡಿಕಾರಿದರು.

ಕಾರ್ಖಾನೆ ಸ್ಥಗಿತದಿಂದ ರೈತರು ತಮ್ಮ ಕಬ್ಬನ್ನು ಖಾಸಗಿ ಕಾರ್ಖಾನೆಗಳಿಗೆ ಕಡಿಮೆ ದರಕ್ಕೆ ಮಾರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಸರ್ಕಾರ ಮಧ್ಯಪ್ರವೇಶಿಸಿ ಕಾರ್ಖಾನೆಯನ್ನು ಡಿಸಿಸಿ ಬ್ಯಾಂಕ್ ಸಾಲದಿಂದ ಮುಕ್ತಗೊಳಿಸಿ ಪುನರಾರಂಭಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಸಿದ್ಧು ಪಾಟೀಲ್ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಅನಿಲ್ ಪಸಾರ್ಗಿ, ಬಿಜೆಪಿ ಮುಖಂಡ ಬಸವರಾಜ್ ಆರ್ಯ, ರವಿ ಹೊಸಳ್ಳಿ‌, ಶಿವರಾಜ್ ಚಿನಿಕೆರಾ ಹಾಗೂ ಗೌತಮ್ ಸೇಡೊಳ್ ಉಪಸ್ಥಿತರಿದ್ದರು.

Tags

Siddu Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X