Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಔರಾದ್, ಕಮಲನಗರ ತಾಲೂಕುಗಳನ್ನು ಬರಗಾಲ...

ಔರಾದ್, ಕಮಲನಗರ ತಾಲೂಕುಗಳನ್ನು ಬರಗಾಲ ಪಟ್ಟಿಗೆ ಸೇರಿಸಲು ಆಗ್ರಹಿಸಿ ರೈತರಿಂದ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ7 Sept 2026 7:04 PM IST
share
ಔರಾದ್, ಕಮಲನಗರ ತಾಲೂಕುಗಳನ್ನು ಬರಗಾಲ ಪಟ್ಟಿಗೆ ಸೇರಿಸಲು ಆಗ್ರಹಿಸಿ ರೈತರಿಂದ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಔರಾದ್ : ಕಮಲನಗರ ಹಾಗೂ ಔರಾದ್ ಎರಡೂ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಸೋಮವಾರ ಪಟ್ಟಣದ ಎಪಿಎಂಸಿ ವೃತ್ತದಲ್ಲಿ ಬೀದರ್–ನಾಂದೇಡ್ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾಕಾರರು ತಹಶೀಲ್ದಾರ್ ಮಹೇಶ್ ಪಾಟೀಲ್ ಅವರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ, ಮುಂಗಾರು ಹಂಗಾಮು ಆರಂಭವಾದ ದಿನದಿಂದ ಇಲ್ಲಿಯವರೆಗೆ ವಾಡಿಕೆಯಷ್ಟು ಮಳೆಯಾಗದ ಕಾರಣ ಬೆಳೆಗಳು ಒಣಗುತ್ತಿವೆ ಎಂದು ದೂರಿದರು.

ಆಗಸ್ಟ್ ಮೊದಲ ವಾರದಲ್ಲಿ ಬಿತ್ತನೆಯಾದ ಬೆಳೆಗಳೂ ಮಳೆ ಕೊರತೆಯಿಂದ ಒಣಗುತ್ತಿರುವುದರಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಸರ್ಕಾರ ಕೂಡಲೇ ಕಮಲನಗರ ಮತ್ತು ಔರಾದ್ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಬೇಕು. ಪ್ರತಿ ಎಕರೆಗೆ ಬರ ಪರಿಹಾರ ನೀಡುವುದರ ಜೊತೆಗೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ರೈತ ಸಂಘ ಆಗ್ರಹಿಸಿದೆ.

ರೈತರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ತುರ್ತು ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ರೈತರು ಜಾನುವಾರು ಹಾಗೂ ಎತ್ತಿನ ಬಂಡಿಗಳೊಂದಿಗೆ ರಸ್ತೆಗಿಳಿದು ಉಗ್ರ ಹೋರಾಟ ನಡೆಸಲಾಗುವುದು. ಯಾವುದೇ ಅಹಿತಕರ ಘಟನೆಗಳಿಗೆ ಸರ್ಕಾರವೇ ಹೊಣೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಮಂತ್‌ ಬಿರಾದಾರ್‌, ಔರಾದ್‌ ತಾಲೂಕಾಧ್ಯಕ್ಷ ಪ್ರಕಾಶ್ ಬಾವಗೆ, ಪ್ರಧಾನ ಕಾರ್ಯದರ್ಶಿ ಸಂಜೀವ್‌ ರೆಡ್ಡಿ, ಗೌರವಾಧ್ಯಕ್ಷ ಸತ್ಯವಾನ್ ಪಾಟೀಲ್, ಬಾಬುರಾವ್ ಬಿರಾದಾರ್, ವಿಠ್ಠಲರಾವ್ ಪಾಟೀಲ್, ಕಲ್ಲಪ್ಪ ದೇಶಮುಖ್, ಝರಣಪ್ಪಾ ದೇಶಮುಖ್, ಹಣಮಂತ್ ಬಿರಾದಾರ್, ವಿಜಯಕುಮಾರ್ ಶೇಟಕಾರ್, ರಾಜಹಂಸ್‌ ಶೇಟಕಾರ್, ಶಿವಾನಂದ್‌ ಹಂಗರಗೆ, ಗೊವಿಂದ್‌ ಇಂಗಳೆ, ಪ್ರಶಾಂತ್‌ ಖಾನಾಪುರೆ, ಗೊವಿಂದ್‌ ಲೋಣೆ ಹಾಗೂ ಭಾಗ್ಯಶ್ರೀ ದೇಶಮುಖ ಸೇರಿದಂತೆ ತಾಲೂಕಿನ ರೈತರು ಉಪಸ್ಥಿತರಿದ್ದರು.

Tags

drought-hitKamalanagarAuradprotest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X