Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ತಾಂಡಾಗಳಿಗೆ ನಿವೇಶನ ಹಕ್ಕು ಪತ್ರ...

ತಾಂಡಾಗಳಿಗೆ ನಿವೇಶನ ಹಕ್ಕು ಪತ್ರ ನೀಡದಿದ್ದರೆ ನ.18 ರಂದು ಔರಾದ್ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ : ಶಿವಾಜಿ ರಾಠೋಡ್

ವಾರ್ತಾಭಾರತಿವಾರ್ತಾಭಾರತಿ7 Nov 2025 9:49 PM IST
share
ತಾಂಡಾಗಳಿಗೆ ನಿವೇಶನ ಹಕ್ಕು ಪತ್ರ ನೀಡದಿದ್ದರೆ ನ.18 ರಂದು ಔರಾದ್ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ : ಶಿವಾಜಿ ರಾಠೋಡ್

ಬೀದರ್ : ನ.18ರ ಒಳಗಡೆ ಬಸವನವಾಡಿ ತಾಂಡಾ ಸೇರಿದಂತೆ ನಿವೇಶನ ಹಕ್ಕು ಪತ್ರ ಪಡೆಯದೆ ವಂಚಿತವಾದ ಒಟ್ಟು 12 ತಾಂಡಾಗಳಿಗೆ ನಿವೇಶನ ಹಕ್ಕು ಪತ್ರ ನೀಡದಿದ್ದರೆ ನ.18 ರಂದು 12 ತಾಂಡಾಗಳ ಸಾವಿರಾರು ನಿವಾಸಿಗಳಿಂದ ಔರಾದ್ ತಹಶೀಲ್ದಾರ್‌ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಲಾಗುವುದು ಎಂದು ಔರಾದ್ ಪುರಸಭೆ ಸದಸ್ಯ ಶಿವಾಜಿ ರಾಠೋಡ್ ಅವರು ಎಚ್ಚರಿಸಿದರು.

ಇಂದು ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಔರಾದ್ (ಬಿ) ಪಟ್ಟಣದ ಬಸವನವಾಡಿ ತಾಂಡಾದಲ್ಲಿ ವಾಸಿಸುತ್ತಿರುವ ನಿವಾಸಿಗರ ಆಸ್ತಿ ನಿವೇಶನ ಮನೆಗಳನ್ನು ಸಕ್ರಮಗೊಳಿಸಲಿಲ್ಲ. ಆ.18 ಮತ್ತು 19 ರಂದು ಎರಡು ದಿನ ಮೂಲಭೂತ ಸೌಕರ್ಯ ಹಾಗೂ ಈ ಖಾತಾ ನಕಲು ಪಡೆಯಲು 9 ತಾಂಡಗಳ ಬೇಡಿಕೆ ಈಡೇರಿಸುವಂತೆ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿತ್ತು. ಆದರೂ ಅದು ಉಪಯೋಗವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಬಸವನವಾಡಿ ತಾಂಡದಲ್ಲಿ 2 ರಿಂದ 3 ತಲೇಮಾರಿನಿಂದ ಜನರು ವಾಸಿಸುತ್ತಿದ್ದಾರೆ. ತಾಂಡ ನಿವಾಸಿಗರ ನಿವೇಶನಗಳ ಭೂಮಿಯನ್ನು ಸಕ್ರಮಗೊಳಿಸಲು ವಿಳಂಬ ನೀತಿ ಅನುಸರಿಸಲಾಗುತ್ತಿದೆ. ಇಲ್ಲಿಯ ನಿವಾಸಿಗರು 3 ವರ್ಷಗಳ ಹಿಂದೆ ಭೂಮಿಯನ್ನು ಸಕ್ರಮಗೊಳಿಸಲು ಒಟ್ಟು 111 ಫಲಾನುಭವಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದರು. ಆದರೆ ಉದ್ದೇಶಪೂರ್ವಕವಾಗಿ ಗ್ರಾಮ ನಿವೇಶನ ಮಂಜುರಾತಿ ಪ್ರಮಾಣ ಪತ್ರ ನೀಡಲಿಲ್ಲ. ಇದಕ್ಕೆ ಸಂಭದಪಟ್ಟ ಅಧಿಕಾರಿಗಳು ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಸರ್ಕಾರ ಅನಧಿಕೃತವಾಗಿ ನಿರ್ಮಾಣಿಸಿರುವ ಮನೆಗಳನ್ನು ಸಕ್ರಮಗೊಳಿಸಲು ಆದೇಶ ನೀಡಿದ್ದರು, ಕೂಡ ಸಂಭಂಧಪಟ್ಟ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಇದರಿಂದ ಫಲಾನುಭವಿಗಳು ಯೋಜನೆಗಳಿಂದ ವಂಚಿತರಾಗಿದ್ದಾರೆ. ನಿವಾಸಿಗರ ವಿಳಾಸ ಇನ್ನಿತರ ಮೂಲ ನಿವೇಶನದ ದಾಖಲಾತಿಗಳು ಇರಲಾರದ ಕಾರಣಕ್ಕೆ ಸರ್ಕಾರದ ಯೋಜನೆಗಳಿಂದ ವಂಚಿತರಾಗುತ್ತಿದ್ದಾರೆ. ಈ ವಿಚಾರವಾಗಿ ಔರಾದ್ ತಹಶೀಲ್ದಾರ್ ಹಾಗೂ ಔರಾದ್ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು ನಮ್ಮೆಲ್ಲ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದ್ದರು. ಅವರು ಭರವಸೆ ನೀಡಿ ಕೆಲ ತಿಂಗಳಾದರೂ ಕೂಡ ಯಾವುದೇ ಕ್ರಮ ವಹಿಸದೇ ನಮಗೆ ಅನ್ಯಾಯ ಎಸಗಿದ್ದಾರೆ ಎಂದು ಹರಿಹಾಯ್ದರು.

ಮಾಜಿ ಸಚಿವ ಹಾಗೂ ಹಾಲಿ ಶಾಸಕ ಪ್ರಭು ಚೌವ್ಹಾಣ್ ಅವರಿಗೂ ಈ ವಿಚಾರವನ್ನು ತಿಳಿಸಲಾಗಿದೆ. ಅವರು ಕೂಡ ಯಾವುದೇ ಕ್ರಮ ವಹಸದಿರುವುದು ವಿಪರ್ಯಾಸವಾಗಿದೆ. ಹಾಗಾಗಿ ನ.18 ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಭೀಮರಾವ್ ರಾಠೋಡ್, ಸಂಜು ಚೌವ್ಹಾಣ, ದಿನೇಶ್ ರಠೋಡ್, ರಾಹುಲ್ ಚೌವ್ಹಾಣ ಹಾಗೂ ಸುಧಾಕರ್ ರಠೋಡ್ ಸೇರಿದಂತೆ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X