ಹುಲಸೂರ್ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ರಾಜಕುಮಾರ್ ಹೊನ್ನಾಡೆ, ಪ್ರಧಾನ ಕಾರ್ಯದರ್ಶಿಯಾಗಿ ಗುರುಪ್ರಸಾದ್ ಮೆಂಟೇ ಆಯ್ಕೆ

ಹುಲಸೂರ್ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಅಧ್ಯಕ್ಷರಾಗಿ ರಾಜಕುಮಾರ್ ಹೊನ್ನಾಡೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಗುರುಪ್ರಸಾದ್ ಮೆಂಟೇ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಪಟ್ಟಣದ ಶ್ರೀ ಗುರು ಬಸವೇಶ್ವರ ಸಂಸ್ಥಾನ ಮಠದ ಆವರಣದಲ್ಲಿ ರವಿವಾರ ನಡೆದ ಸಭೆಯಲ್ಲಿ ಜಿಲ್ಲಾಧ್ಯಕ್ಷ ಆನಂದ್ ದೇವಪ್ಪ ಅವರು ನೂತನ ಪದಾಧಿಕಾರಿಗಳ ಆಯ್ಕೆಯನ್ನು ಘೋಷಿಸಿದರು.
ಬಳಿಕ ಮಾತನಾಡಿದ ಅವರು, ಯಾವುದೇ ಸಂಘ-ಸಂಸ್ಥೆ ಬೆಳೆಯಬೇಕಾದರೆ ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಾಗುವುದು ಅಗತ್ಯವಾಗಿದೆ. ಸಂಘದ ನಿಯಮಗಳನ್ನು ಚಾಚೂತಪ್ಪದೆ ಪಾಲಿಸುವುದರ ಜತೆಗೆ ನಿಯಮಿತವಾಗಿ ಸಭೆ-ಸಮಾರಂಭಗಳನ್ನು ನಡೆಸಬೇಕು ಎಂದು ಹೇಳಿದರು.
ಈ ವೇಳೆ ಗುರು ಬಸವೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಡಾ.ಶಿವಾನಂದ್ ಸ್ವಾಮೀಜಿ ಆಶೀರ್ವಚನ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಪ್ರಥ್ವಿರಾಜ್ ಎಸ್., ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಸ್ವಾಮಿ, ಖಜಾಂಚಿ ಸುನೀಲ್ ಕುಲಕರ್ಣಿ, ಕಾರ್ಯದರ್ಶಿ ಸಂತೋಷ್ ಚೆಟ್ಟೆ, ಕಾರ್ಯಕಾರಿಣಿ ಸದಸ್ಯ ಶ್ರೀಕಾಂತ್ ಪಾಟೀಲ್, ವ್ಯವಸ್ಥಾಪಕ ರಾಜಕುಮಾರ್ ಸಾಗರ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸುರೇಶ್ ಚನ್ನಶೆಟ್ಟಿ, ಸಾಹಿತಿ ಡಾ. ಬಸವರಾಜ್ ಬಲ್ಲೂರ್, ಶಿವರಾಜ್ ಖಪಲೆ, ಮಹೇಶ್ ಹುಲಸೂರಕರ್, ಬಸವಕುಮಾರ್ ಕೌಟೆ, ವೀರಶೆಟ್ಟಿ ಕರಕಲ್ಲೆ ಹಾಗೂ ದತ್ತಾತ್ರಿ ಸಾಬನೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.






