Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ತೆಲಂಗಾಣದ ಜಹೀರಾಬಾದ್ ಬಳಿ ಭೀಕರ ರಸ್ತೆ...

ತೆಲಂಗಾಣದ ಜಹೀರಾಬಾದ್ ಬಳಿ ಭೀಕರ ರಸ್ತೆ ಅಪಘಾತ : ಬೀದರ್ ಮೂಲದ ಐವರು ಮೃತ್ಯು

ವಾರ್ತಾಭಾರತಿವಾರ್ತಾಭಾರತಿ12 Aug 2026 8:44 AM IST
share
ತೆಲಂಗಾಣದ ಜಹೀರಾಬಾದ್ ಬಳಿ ಭೀಕರ ರಸ್ತೆ ಅಪಘಾತ : ಬೀದರ್ ಮೂಲದ ಐವರು ಮೃತ್ಯು

ಬೀದರ್ : ನೆರೆಯ ತೆಲಂಗಾಣದ ಜಹೀರಾಬಾದ್ ಬಳಿ ಮಂಗಳವಾರ ಸಾಯಂಕಾಲ ಲಾರಿ ಹಾಗೂ ಟಂಟಂ ವಾಹನದ ನಡುವೆ ಭೀಕರ ಭೀಕರ ಅಪಘಾತ ಸಂಭವಿಸಿದ್ದು, ಬೀದರ್ ಜಿಲ್ಲೆಯ ಸಿಂಧೋಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಜಗೀರಾ ಗ್ರಾಮದ ಐವರು ಮೃತಪಟ್ಟಿರುವ ಘಟನೆ ನಡೆದಿದೆ.

ಹುಮನಾಬಾದ್ ತಾಲೂಕಿನ ರಾಜಗಿರಾ ಗ್ರಾಮಸ್ಥರಾದ ಆಟೋ ಚಾಲಕ ದೇವಿದಾಸ್, ಕವಿತಾ, ರೇಖಾ, ರೇಷ್ಮಾ ಹಾಗೂ ಶ್ರೀದೇವಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಆಟೋದಲ್ಲಿದ್ದ ಇನ್ನುಳಿದ 7ರಿಂದ 8 ಜನರು ಗಂಭಿರವಾಗಿ ಗಾಯಗೊಂಡಿದ್ದು, ಕೆಲವರನ್ನು ತೆಲಂಗಾಣದ ಸಂಗಾರೆಡ್ಡಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕಳುಹಿಸಲಾಗಿದ್ದು, ಉಳಿವರಿಗೆ ಬೀದರ್ ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ರಾಜಗಿರಾ ಗ್ರಾಮದಿಂದ ಪಕ್ಕದ ತೆಲಂಗಾಣ ರಾಜ್ಯದ ಹಳ್ಳಿಗಳಲ್ಲಿ ಇವರು ದಿನಾಲೂ ಕೂಲಿ ಕೆಲಸ ಮಾಡಲು ಹೋಗುತ್ತಿದ್ದರು. ಎಂದಿನಂತೆ ಮಂಗಳವಾರ ಕೂಡ ಕೂಲಿ ಕೆಲಸಕ್ಕೆ ತೆರಳಿದ್ದರು. ಕೂಲಿ ಕೆಲಸ ಮುಗಿಸಿಕೊಂಡು ಮರಳಿ ಮನೆಕಡೆಗೆ ಬರುತ್ತಿದ್ದಾಗ ಮಾರ್ಗ ಮಧ್ಯೆ ಅಪಘಾತ ಸಂಭವಿಸಿದೆ.

ಸಚಿವ ಈಶ್ವರ್ ಖಂಡ್ರೆ ಸಂತಾಪ :

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಅವರು ಈ ಘಟನೆ ಕುರಿತು ಸಂತಾಪ ಸೂಚಿಸಿದ್ದು, ರಾಜಗೀರಾ ಗ್ರಾಮದ 5 ಮಂದಿ ಮೃತಪಟ್ಟಿರುವ ಸುದ್ದಿ ಅತ್ಯಂತ ದುಃಖ ತಂದಿದೆ. ಈ ಹೃದಯವಿದ್ರಾವಕ ಘಟನೆಯಿಂದ ತೀವ್ರ ದಿಗ್ಭ್ರಮೆಗೊಂಡಿದ್ದೇನೆ.

ಮೃತರ ಕುಟುಂಬದವರಿಗೆ ಈ ದುಃಖ ಭರಿಸುವ ಶಕ್ತಿ ನೀಡಲಿ. ಹಾಗೆಯೇ ಗಾಯಗೊಂಡಿರುವ ಎಲ್ಲರೂ ಶೀಘ್ರ ಗುಣಮುಖರಾಗಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ದೊರೆಯುವಂತೆ ಹಾಗೂ ಮೃತದೇಹಗಳ ಮರಣೋತ್ತರ ಪರೀಕ್ಷೆ ಪೂರ್ಣಗೊಳಿಸಿ ಕುಟುಂಬಸ್ಥರಿಗೆ ಹಸ್ತಾಂತರಿಸುವ ಕುರಿತು ತೆಲಂಗಾಣದ ಆಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿರಲು ಬೀದರ್ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದ ಅವರು, ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಭರಿಸುವಂತೆ ಬೀದರ್ ಜಿಲ್ಲಾಡಳಿತಕ್ಕೂ ಸೂಚನೆ ನೀಡಿದ್ದೇನೆ ಎಂದು ಅವರು ಹೇಳಿದ್ದಾರೆ.

ಈ ದುಃಖದ ಸಂದರ್ಭದಲ್ಲಿ ಮೃತರ ಕುಟುಂಬಗಳೊಂದಿಗೆ ಸರ್ಕಾರ ಹಾಗೂ ನಾನು ಸದಾ ನಿಲ್ಲುತ್ತೇವೆ ಎನ್ನುವ ಭರವಸೆ ಅವರು ನೀಡಿದ್ದಾರೆ.

Tags

road accidentZaheerabadTelanganaBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X