Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. SIR ರದ್ದುಗೊಳಿಸುವಂತೆ ಒತ್ತಾಯಿಸಿ...

SIR ರದ್ದುಗೊಳಿಸುವಂತೆ ಒತ್ತಾಯಿಸಿ ಸೆ.1ರಂದು ರಾಜ್ಯ ಚುನಾವಣಾ ಆಯೋಗದ ಕಚೇರಿ ಮುತ್ತಿಗೆ: ಓಂಪ್ರಕಾಶ್‌ ರೊಟ್ಟೆ

ವಾರ್ತಾಭಾರತಿವಾರ್ತಾಭಾರತಿ31 Aug 2026 10:49 PM IST
share
SIR ರದ್ದುಗೊಳಿಸುವಂತೆ ಒತ್ತಾಯಿಸಿ ಸೆ.1ರಂದು ರಾಜ್ಯ ಚುನಾವಣಾ ಆಯೋಗದ ಕಚೇರಿ ಮುತ್ತಿಗೆ: ಓಂಪ್ರಕಾಶ್‌ ರೊಟ್ಟೆ

ಬೀದರ್‌ : ಎಸ್‌ಐಆರ್‌ ರದ್ದುಗೊಳಿಸುವಂತೆ ಒತ್ತಾಯಿಸಿ ಎಸ್‌ಐಆರ್‌ ವಿರೋಧಿ ಕರ್ನಾಟಕ, ಎದ್ದೇಳು ಕರ್ನಾಟಕ ಹಾಗೂ ಜನಪರ ಸಂಘಟನೆಗಳ ಒಕ್ಕೂಟದಿಂದ ಸೆ.1 ರಂದು ಬೆಂಗಳೂರಿನ ಫ್ರೀಡ್ಂ ಪಾರ್ಕ್‌ನಿಂದ ಪಾದಯಾತ್ರೆ ಹೊರಟು ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಸಂಘಟನಾ ಸಂಚಾಲಕ ಓಂಪ್ರಕಾಶ್‌ ರೊಟ್ಟೆ ಅವರು ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಎಸ್‌ಐಆರ್‌ ಪ್ರಕ್ರಿಯೆ ಸಂಪೂರ್ಣವಾಗಿ ಸಂವಿಧಾನದ ವೀರೋಧಿಯಾಗಿದ್ದು, ಲಕ್ಷಾಂತರ ಜನರನ್ನು ಮತದಾನದಿಂದ ವಂಚಿತರನ್ನಾಗಿ ಮಾಡಲಾಗುತ್ತಿದೆ. ಹಾಗಾಗಿ ಸೆ.1 ರಂದು ರಾಜ್ಯ ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕಲಾಗುತ್ತಿದೆ ಎಂದರು.

ಬಿಎಲ್‌ಒ ಗಳಿಗೆ ಸರಿಯಾಗಿ ತರಬೇತಿ ನೀಡಲಿಲ್ಲ. ಆದ್ದರಿಂದ ಎನ್ಯುಮರೇಷನ್‌ ಫಾರಮ್‌ ಅನ್ನು ಅದೆಷ್ಟೋ ಜನರು ಸರಿಯಾಗಿ ತುಂಬಲು ಸಾಧ್ಯವಾಗಲಿಲ್ಲ. ಎಸ್‌ಐಆರ್‌ ನಿಂದಾಗಿ ಬಡವರು, ಶೋಷಿತರು ವಂಚನೆಗೆ ಒಳಗಾಗಿದ್ದಾರೆ. ಹಾಗಾಗಿ ರಾಜ್ಯ ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕಲಾಗುತ್ತಿದೆ. ಅದೇ ರೀತಿ ನಮ್ಮ ಮನವಿಗೆ ಸ್ಪಂದನೆ ಮಾಡದಿದ್ದರೆ ಅ.2 ರ ಗಾಂಧಿ ಜಯಂತಿಯ ದಿನದಂದು ದೆಹಲಿಯ ಕೇಂದ್ರ ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಅವರು ಎಚ್ಚರಿಸಿದರು.

ಮುಹಮ್ಮದ್‌ ನಿಝಾಮುದ್ದಿನ್ ಅವರು ಮಾತನಾಡಿ, ಎಸ್‌ಐಆರ್‌ನಿಂದ ಬೆಂಗಳೂರಿನಂಥ ನಗರಗಳಲ್ಲಿ ಶೇ.50 ಕ್ಕಿಂತಲೂ ಹೆಚ್ಚಿನ ಜನರು ಮತದಾನದ ಪಟ್ಟಿಯಿಂದ ಹೊರ ಬಿದ್ದಿದ್ದಾರೆ. ರಾಜ್ಯದಲ್ಲಿ 43 ಲಕ್ಷಕ್ಕಿಂತಲೂ ಹೆಚ್ಚಿನ ಜನರಿಗೆ ನೋಟಿಸ್‌ ಜಾರಿ ಮಾಡಲಾಗುತ್ತಿದೆ. ನೋಟಿಸ್‌ ನೀಡದೇ ಇನ್ನು 6 ತಿಂಗಳ ಕಾಲ ಕಾಲಾವಕಾಶ ನೀಡಬೇಕು. ಹಾಗೆಯೇ ಗ್ರಾಮ ಸಭೆಗಳನ್ನು ಮಾಡುವ ಮೂಲಕ ನಿಜವಾದ ಮತದಾರರನ್ನು ಮತದಾನದ ಪಟ್ಟಿಯಿಂದ ಕೀ ಬಿಡದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ವಿಠ್ಠಲದಾಸ್‌ ಪ್ಯಾಗೆ ಅವರು ಮಾತನಾಡಿ, ಕೇಂದ್ರ ಚುನಾವಣಾ ಆಯೋಗವು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ಕೆಲಸ ಮಾಡುತ್ತಿದೆ. ಸಂವಿಧಾನದ ಸಮಾನತೆಯ ಸಿದ್ಧಾಂತ ನಾಶ ಮಾಡಿ ಹಿಂದುತ್ವದ ಸಿದ್ಧಾಂತ ಜಾರಿಗೊಳಿಸಲು ಹೊರಟಿದೆ. ಆದ್ದರಿಂದಾಗಿ ಎಸ್‌ಐಆರ್‌ ರದ್ದುಗೊಳಿಸಬೇಕು ಎಂದು ಮುತ್ತಿಗೆ ಹಾಕಲಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಡಿಎಸ್‌ಎಸ್‌ ರಾಜ್ಯ ಕಾರ್ಯದರ್ಶಿ ಮಾರುತಿ ಬೌದ್ಧೆ, ಆರ್‌ಪಿಐ ಪಕ್ಷದ ಮಹೇಶ್‌ ಗೋರನಾಳಕರ್‌, ಆಪ್‌ ಪಕ್ಷದ ಜಿಲ್ಲಾಧ್ಯಕ್ಷ ಸಿದ್ಧು ಫುಲಾರಿ ಹಾಗೂ ಸಂತೋಷ್ ಜೋಳದಾಪಕೆ ಉಪಸ್ಥಿತರಿದ್ದರು.

Tags

Election OfficeSIROmprakash RotteBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X