Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಈಶಾನ್ಯ ಶಿಕ್ಷಕರ ಕ್ಷೇತ್ರದ...

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಶಶೀಲ್ ನಮೋಶಿಗೆ ಗೆಲುವು ಖಚಿತ : ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ

ವಾರ್ತಾಭಾರತಿವಾರ್ತಾಭಾರತಿ18 Oct 2026 7:13 PM IST
share
ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಶಶೀಲ್ ನಮೋಶಿಗೆ ಗೆಲುವು ಖಚಿತ : ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ

ಬೀದರ್ : ವಿಧಾನ ಪರಿಷತ್‌ನ ಈಶಾನ್ಯ ಶಿಕ್ಷಕರ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಶಶೀಲ್ ಜಿ. ನಮೋಶಿ ಅವರು ಭಾರಿ ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಪತ್ರಿಕಾ ಭವನದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ವತಿಯಿಂದ ಆಯೋಜಿಸಿದ್ದ ರವಿವಾರ ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿ ಹಾಗೂ ಅತಿಥಿ ಉಪನ್ಯಾಸಕರ ಸೇವೆ ಖಾಯಂಗೊಳಿಸುವ ಭರವಸೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಒಪಿಎಸ್ ಜಾರಿಗೊಳಿಸುವುದಾಗಿ ಹಾಗೂ ಪದವಿ ಮತ್ತು ಪದವಿಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವುದಾಗಿ ಭರವಸೆ ನೀಡಿತ್ತು. ಆದರೆ, ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದರೂ ಆ ಭರವಸೆಗಳು ಈಡೇರಿಲ್ಲ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಸುಮಾರು 20ರಿಂದ 25 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ರಾಜ್ಯದ ಸುಮಾರು 8,500 ಶಾಲೆಗಳಲ್ಲಿ ಒಬ್ಬರೇ ಶಿಕ್ಷಕರು ಹಲವು ತರಗತಿಗಳ ಮಕ್ಕಳಿಗೆ ಪಾಠ ಮಾಡುವ ಪರಿಸ್ಥಿತಿಯಿದೆ ಎಂದು ದೂರಿದರು.

ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್‌ ಅವರು ಮಾತನಾಡಿ, ಹೆಚ್.ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿತ್ತು. ಶಾಲೆಗಳ ಅಭಿವೃದ್ಧಿ ಹಾಗೂ ಕರ್ನಾಟಕ ಪಬ್ಲಿಕ್ ಶಾಲೆಗಳ ಆರಂಭಕ್ಕೆ ಕ್ರಮ ಕೈಗೊಳ್ಳಲಾಗಿತ್ತು. ಆದರೆ, ಈಗಿನ ಸರ್ಕಾರ ಶಿಕ್ಷಕರ ನೇಮಕಾತಿ ಮತ್ತು ಶಾಲಾ ಮೂಲ ಸೌಕರ್ಯ ಅಭಿವೃದ್ಧಿಗೆ ಸಮರ್ಪಕ ಗಮನ ನೀಡುತ್ತಿಲ್ಲ’ ಎಂದು ದೂರಿದ ಅವರು, ಮುಂದಿನ ಚುನಾವಣೆಗಳಲ್ಲಿಯೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯಲಿದೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ್‌ ಪಾಟೀಲ್‌ ಅವರು ಮಾತನಾಡಿ, ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ–ಜೆಡಿಎಸ್ ಕಾರ್ಯಕರ್ತರು ಶಾಲಾ–ಕಾಲೇಜುಗಳಿಗೆ ಭೇಟಿ ನೀಡಿ ಶಿಕ್ಷಕರೊಂದಿಗೆ ಸಂವಾದ ನಡೆಸಿದ್ದಾರೆ. ದಸರಾ ರಜೆಯ ಅವಧಿಯಲ್ಲಿಯೂ ಮತದಾರರ ಮನೆಗಳಿಗೆ ತೆರಳಿ ಪ್ರಚಾರ ನಡೆಸಲಾಗಿದೆ ಎಂದು ತಿಳಿಸಿದರು.

ಮಾಜಿ ವಿಧಾನ ಪರಿಷತ್ ಸಭಾಪತಿ ರಘುನಾಥರಾವ್‌ ಮಲ್ಕಾಪುರೆ ಅವರು ಮಾತನಾಡಿ, ಕಳೆದ ಎರಡು-ಎರಡೂವರೆ ವರ್ಷಗಳಿಂದ ಕಾಂಗ್ರೆಸ್‌ನವರು ಕುರ್ಚಿಗಾಗಿ ನಡೆಸಿದ ಪ್ರಯತ್ನವನ್ನು ನಾಡಿನ ಸಮಸ್ತ ಜನರ ಸರ್ವಾಂಗೀಣ ಅಭಿವೃದ್ಧಿಗಾಗಿ ಮಾಡಿದ್ದರೆ ಜನರು ನೆಮ್ಮದಿಯಿಂದ ಇರುತ್ತಿದ್ದರು. ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಮೇಲೂ ರಾಜ್ಯದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಜನರು ನೋಡುತ್ತಿದ್ದಾರೆ ಎಂದು ಟೀಕಿಸಿದರು.

ಈ ಸಂದರ್ಭದಲ್ಲಿ ಮಾಜಿ ಕೇಂದ್ರ ಸಚಿವ ಭಗವಂತ್‌ ಖುಬಾ, ಬಿಜೆಪಿ ಮುಖಂಡ ಈಶ್ವರ್ ಸಿಂಗ್ ಠಾಕೂರ್, ಮಹಾನಗರ ಪಾಲಿಕೆ ಸದಸ್ಯ ಶಶಿ ಹೊಸಳ್ಳಿ, ಪಕ್ಷದ ಜಿಲ್ಲಾ ಪ್ರಧಾನ‌ ಕಾರ್ಯದರ್ಶಿ ಪೀರಪ್ಪ ಔರಾದೆ, ಮಾಧ್ಯಮ ಪ್ರತಿನಿಧಿ ಶ್ರೀನಿವಾಸ್‌ ಚೌದ್ರಿ, ಜೆಡಿಎಸ್ ಜಿಲ್ಲಾಧ್ಯಕ್ಷ ರಮೇಶ್‌ ಪಾಟೀಲ್‌ ಸೋಲಪುರ್‌, ಪ್ರಧಾನ ಕಾರ್ಯದರ್ಶಿ ಅಶೋಕ್‌ ಕೋಡಗೆ ಹಾಗೂ ರಾಜಕುಮಾರ್‌ ಕಡ್ಯಾಳ್‌ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.

Tags

Shasheel NamoshielectionMLA Dr. Shailendra Beldale
share
ವಾರ್ತಾಭಾರತಿ
ವಾರ್ತಾಭಾರತಿ
Next Story
X