Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಎಸ್ಐಆರ್ : ಬೀದರ್ ಜಿಲ್ಲೆಯಲ್ಲಿ ಒಟ್ಟು...

ಎಸ್ಐಆರ್ : ಬೀದರ್ ಜಿಲ್ಲೆಯಲ್ಲಿ ಒಟ್ಟು 14,61,959 ಅರ್ಜಿ ವಿತರಣೆ, 12,15,656 ಅರ್ಜಿ ಸ್ವೀಕಾರ

ವಾರ್ತಾಭಾರತಿವಾರ್ತಾಭಾರತಿ6 Aug 2026 5:59 PM IST
share
ಎಸ್ಐಆರ್ : ಬೀದರ್ ಜಿಲ್ಲೆಯಲ್ಲಿ ಒಟ್ಟು 14,61,959 ಅರ್ಜಿ ವಿತರಣೆ, 12,15,656 ಅರ್ಜಿ ಸ್ವೀಕಾರ

ಬೀದರ್: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಅಂಗವಾಗಿ ಬೀದರ್ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಆಗಸ್ಟ್‌ 5ರವರೆಗೆ ಒಟ್ಟು 14,61,959 ಮತದಾರರ ಗಣತಿ ನಮೂನೆಗಳನ್ನು ವಿತರಿಸಲಾಗಿದ್ದು, 12,15,656 ನಮೂನೆಗಳು ಸ್ವೀಕೃತಗೊಂಡಿವೆ. ಒಟ್ಟು 2,46,298 ಎಣಿಕೆ ನಮೂನೆಗಳು ಸಂಗ್ರಹವಾಗಿವೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ 2,57,095 ಗಣತಿ ನಮೂನೆಗಳನ್ನು ವಿತರಿಸಲಾಗಿದ್ದು, 2,22,445 ಅರ್ಜಿಗಳು ಸ್ವೀಕೃತಗೊಂಡಿವೆ. 34,650 ಎಣಿಕೆ ನಮೂನೆಗಳನ್ನು ಸಂಗ್ರಹಿಸಲಾಗಿದೆ. ಹುಮನಾಬಾದ್ ವಿಧಾನಸಭಾ ಕ್ಷೇತ್ರದಲ್ಲಿ 2,62,818 ಗಣತಿ ನಮೂನೆಗಳನ್ನು ವಿತರಿಸಿದ್ದು, 2,20,072 ಅರ್ಜಿಗಳು ಸ್ವೀಕೃತಗೊಂಡಿವೆ. 42,746 ಎಣಿಕೆ ನಮೂನೆಗಳು ಸಂಗ್ರಹವಾಗಿವೆ.

ಭಾಲ್ಕಿ ವಿಧಾನಸಭಾ ಕ್ಷೇತ್ರದಲ್ಲಿ 2,43,811 ಗಣತಿ ನಮೂನೆಗಳನ್ನು ವಿತರಿಸಲಾಗಿದ್ದು, 2,11,462 ಅರ್ಜಿಗಳು ಸ್ವೀಕೃತಗೊಂಡಿವೆ. 32,349 ಎಣಿಕೆ ನಮೂನೆಗಳನ್ನು ಸಂಗ್ರಹಿಸಲಾಗಿದೆ. ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 2,19,880 ಗಣತಿ ನಮೂನೆಗಳನ್ನು ವಿತರಿಸಿದ್ದು, 1,80,995 ಅರ್ಜಿಗಳು ಸ್ವೀಕೃತಗೊಂಡಿವೆ. 38,880 ಎಣಿಕೆ ನಮೂನೆಗಳು ಸಂಗ್ರಹವಾಗಿವೆ.

ಬೀದರ್ ವಿಧಾನಸಭಾ ಕ್ಷೇತ್ರದಲ್ಲಿ 2,48,809 ಗಣತಿ ನಮೂನೆಗಳನ್ನು ವಿತರಿಸಲಾಗಿದ್ದು, 1,84,408 ಅರ್ಜಿಗಳು ಸ್ವೀಕೃತಗೊಂಡಿವೆ. 64,401 ಎಣಿಕೆ ನಮೂನೆಗಳನ್ನು ಸಂಗ್ರಹಿಸಲಾಗಿದೆ. ಔರಾದ್ (ಬಿ) ವಿಧಾನಸಭಾ ಕ್ಷೇತ್ರದಲ್ಲಿ 2,29,546 ಗಣತಿ ನಮೂನೆಗಳನ್ನು ವಿತರಿಸಿದ್ದು, 1,96,274 ಅರ್ಜಿಗಳು ಸ್ವೀಕೃತಗೊಂಡಿವೆ. 33,272 ಎಣಿಕೆ ನಮೂನೆಗಳು ಸಂಗ್ರಹವಾಗಿವೆ.

ಜಿಲ್ಲೆಯಾದ್ಯಂತ ಒಟ್ಟು 14,61,959 ಗಣತಿ ನಮೂನೆಗಳನ್ನು ವಿತರಿಸಲಾಗಿದ್ದು, 12,15,656 ಅರ್ಜಿಗಳು ಸ್ವೀಕೃತಗೊಂಡಿವೆ. 2,46,298 ಎಣಿಕೆ ನಮೂನೆಗಳನ್ನು ಸಂಗ್ರಹಿಸಲಾಗಿದ್ದು, ಈ ಮಾಹಿತಿಯನ್ನು ಸಾರ್ವಜನಿಕರ ಗಮನಕ್ಕಾಗಿ ಪ್ರಕಟಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Tags

BidarSIR
share
ವಾರ್ತಾಭಾರತಿ
ವಾರ್ತಾಭಾರತಿ
Next Story
X