Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆ...

ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆ ಅಗತ್ಯ: ಸಚಿವ ಈಶ್ವರ್ ಖಂಡ್ರೆ

ಬೀದರ್ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ -2026ಕ್ಕೆ ಚಾಲನೆ

ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ25 Nov 2026 6:22 PM IST
share
ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆ ಅಗತ್ಯ: ಸಚಿವ ಈಶ್ವರ್ ಖಂಡ್ರೆ

ಬೀದರ್: ನಾವೆಲ್ಲ ಮಾನಸಿಕವಾಗಿ ಪ್ರಬುದ್ಧರಾಗಿದ್ದರೆ ಸಾಲದು, ದೈಹಿಕವಾಗಿಯೂ ಬಲಶಾಲಿಗಳಾಗಬೇಕು. ಶಾರೀರಿಕವಾಗಿ ಸದೃಢರಾಗಿರಲು ವ್ಯಾಯಾಮ, ಯೋಗ ಮಾಡುವುದರ ಜೊತೆಗೆ ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹೇಳಿದರು.

ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಬುಧವಾರ ನಡೆದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ-2026ರ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಕ್ರೀಡೆಗೆ ಹೆಚ್ಚಿನ ಮಹತ್ವವಿದೆ. ಕ್ರೀಡಾಪಟುಗಳು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆದು ರಾಜ್ಯ ಮತ್ತು ದೇಶಕ್ಕೆ ಕೀರ್ತಿ ತರುತ್ತಾರೆ ಎಂದು ಹೇಳಿದರು.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಕೋಮು ಗಲಭೆಗಳು ನಡೆಯದಂತೆ ನೋಡಿಕೊಳ್ಳುವುದು, ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷತೆ ಒದಗಿಸುವುದು ಸೇರಿದಂತೆ ಹಲವು ಜವಾಬ್ದಾರಿಗಳು ಪೊಲೀಸರ ಮೇಲಿದೆ. ಸರ್ಕಾರದಲ್ಲಿ ಅನೇಕ ಇಲಾಖೆಗಳಿದ್ದರೂ, ಬಹುತೇಕ ಇಲಾಖೆಗಳ ಸಿಬ್ಬಂದಿಗೆ ಬೆಳಗ್ಗೆ 10ರಿಂದ ಸಂಜೆ 4 ಅಥವಾ 5 ಗಂಟೆಯವರೆಗೆ ಕೆಲಸದ ಅವಧಿ ಇರುತ್ತದೆ. ಆದರೆ, ಪೊಲೀಸರು ದಿನದ 24 ಗಂಟೆಗಳ ಕಾಲ ಕರ್ತವ್ಯ ನಿರ್ವಹಿಸಬೇಕಾಗುತ್ತದೆ ಎಂದು ತಿಳಿಸಿದರು.

ಭಾಲ್ಕಿಯಲ್ಲಿ 18 ಎಕರೆ ಪ್ರದೇಶದಲ್ಲಿ ವಿಶಿಷ್ಟ ಕ್ರೀಡಾಂಗಣ ನಿರ್ಮಿಸಲಾಗುತ್ತಿದೆ. ಇದರ ಜೊತೆಗೆ ವಿಬಿ-ಜಿ ರಾಮ್‌ಜಿ ಯೋಜನೆಯಡಿ ಎಲ್ಲೆಲ್ಲಿ ನಿವೇಶನ ಲಭ್ಯವಿದೆಯೋ ಅಲ್ಲೆಲ್ಲ ಆಟದ ಮೈದಾನ ನಿರ್ಮಿಸಲು ತೀರ್ಮಾನಿಸಲಾಗಿದೆ. ಒಂದು ವರ್ಷದೊಳಗೆ ಎಲ್ಲ ಕಡೆ ಕ್ರೀಡಾಂಗಣ ನಿರ್ಮಿಸುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಜಾಂಟಿ ರೋಡ್ಸ್, ಕೆಲಸದ ವಾತಾವರಣದಲ್ಲಿ ಎದುರಾಗುವ ಒತ್ತಡದ ಪರಿಸ್ಥಿತಿಯನ್ನು ನಿಭಾಯಿಸಲು ಕ್ರೀಡೆ ಉತ್ತಮ ಮಾರ್ಗವಾಗಿದೆ. ಹೀಗಾಗಿ, ಇಂದು ವಾರ್ಷಿಕ ಕ್ರೀಡಾಕೂಟದ ಮೂಲಕ ಆರಂಭಿಸಿರುವ ಕ್ರೀಡಾ ಚಟುವಟಿಕೆಗಳು ನಿರಂತರವಾಗಿ ಮುಂದುವರಿಯಬೇಕು. ಇದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ಕ್ರಿಕೆಟ್ ವೀಕ್ಷಣೆಗಾಗಿ ಭಾರತದಾದ್ಯಂತ ವಿವಿಧ ಸ್ಥಳಗಳಿಗೆ ಪ್ರಯಾಣಿಸಿದ್ದೇನೆ. ಆದರೆ, ಇದೇ ಮೊದಲ ಬಾರಿಗೆ ಬೀದರ್‌ಗೆ ಭೇಟಿ ನೀಡಿದ್ದೇನೆ. ನನ್ನ ಸ್ವಂತ ದೇಶವಾದ ದಕ್ಷಿಣ ಆಫ್ರಿಕಾಕ್ಕಿಂತಲೂ ಹೆಚ್ಚು ಬಾರಿ ಭಾರತವನ್ನು ಸುತ್ತಾಡಿದ್ದೇನೆ. 2015ರಲ್ಲಿ ಜನಿಸಿದ ನನ್ನ ಮಗಳಿಗೆ ‘ಇಂಡಿಯಾ’ ಎಂದು ಹೆಸರಿಟ್ಟಿದ್ದೇನೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಸಕ ರಹೀಂ ಖಾನ್, ಬುಡಾ ಅಧ್ಯಕ್ಷ ವಿನೋದ್ ಅಪ್ಪೆ, ರಾಜ್ಯ ಕ್ರಿಕೆಟ್ ಸಂಸ್ಥೆಯ ರಾಯಚೂರು ವಲಯದ ಸಂಚಾಲಕ ಕುಶಾಲರಾವ್ ಪಾಟೀಲ್ ಗಾದಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಅಕ್ಕ ಪಡೆಯ ರಾಜ್ಯ ಸಂಯೋಜಕಿ ಶೈನಿ ಪ್ರದೀಪ್ ಗುಂಟಿ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಪೂಜಾರಿ ಸೇರಿದಂತೆ ಜಿಲ್ಲೆಯ ವಿವಿಧ ಠಾಣೆಗಳ ಪಿಎಸ್‌ಐಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Tags

SportsphysicalEshwar Khandre
share
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ

ಚಿತ್ರಶೇನ ವ್ಹಿ. ಫುಲೆ ಅವರು 2023ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ. 2025ರಿಂದ ವಾರ್ತಾಭಾರತಿ ಪತ್ರಿಕೆಯ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಬೀದರ್ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X