Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಡಿ.ದೇವರಾಜ ಅರಸು ಅವರು ತಂದ ಉಳುವನೇ...

ಡಿ.ದೇವರಾಜ ಅರಸು ಅವರು ತಂದ ಉಳುವನೇ ಭೂಮಿಯ ಒಡೆಯ ಕಾಯ್ದೆಯಿಂದ ಬಡ ಕುಟುಂಬಗಳಿಗೆ ಆಧಾರ : ಡಿಸಿ ಶಿಲ್ಪಾ ಶರ್ಮಾ

ವಾರ್ತಾಭಾರತಿವಾರ್ತಾಭಾರತಿ20 Aug 2025 6:25 PM IST
share
ಡಿ.ದೇವರಾಜ ಅರಸು ಅವರು ತಂದ ಉಳುವನೇ ಭೂಮಿಯ ಒಡೆಯ ಕಾಯ್ದೆಯಿಂದ ಬಡ ಕುಟುಂಬಗಳಿಗೆ ಆಧಾರ : ಡಿಸಿ ಶಿಲ್ಪಾ ಶರ್ಮಾ

ಬೀದರ್ : ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಆಡಳಿತಾವಧಿಯಲ್ಲಿ ಜಾರಿಗೆ ತಂದ ಉಳುವವನೇ ಭೂಮಿಯ ಒಡೆಯ ಕಾಯ್ದೆಯಿಂದ ಲಕ್ಷಾಂತರ ಬಡ ಕುಟುಂಬಗಳಿಗೆ ಆಧಾರವಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಿಳಿಸಿದರು.

ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಡಿ.ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಡಿ. ದೇವರಾಜ ಅರಸು ಅವರು ದೀನದಲಿತರ ಹಿಂದುಳಿದ ವರ್ಗಗಳ, ಬಡವರ ಪರವಾಗಿ ಸಮಾಜಮುಖಿ ಕಾರ್ಯಗಳನ್ನು ಮಾಡುವ ಮೂಲಕ ಇತಿಹಾಸದಲ್ಲಿ ಶಾಶ್ವತವಾಗಿ ಉಳಿದಿದ್ದಾರೆ. ಅವರು ಇಂದಿನ ಯುವ ಪೀಳಿಗೆಗೆ ಪ್ರೇರಣಾ ಶಕ್ತಿಯಾಗಿದ್ದಾರೆ ಎಂದರು.

ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಮೂಲ ಸೌಕರ್ಯ ಒದಗಿಸಲು ಅವರು ಹೋರಾಡಿದಕ್ಕಾಗಿ ಇಂದಿನ ಹಿಂದುಳಿದ ವಿದ್ಯಾರ್ಥಿ ನಿಲಯಗಳಲ್ಲಿ ಸಕಲ ಸೌಲಭ್ಯ ಲಭ್ಯವಾಗುತ್ತಿವೆ. ಈ ವಸತಿ ನಿಲಯಗಳ ವಾತಾವರಣದಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿ ನಿಲಯದಲ್ಲಿ ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿ ಗುರಿ ಸಾಧಿಸಲು ಮುಂದಾಗಬೇಕು. ಸಮಸ್ಯೆಗಳು ಎದುರಿಸಿ ಗುರಿಯತ್ತ ಸಾಗಬೇಕು ಎಂದು ವಿದ್ಯಾರ್ಥಿಗಳಿಗೆ ಸಂದೇಶ ನೀಡಿದರು.

ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್ ಅವರು ಮಾತನಾಡಿ, ಕರ್ನಾಟಕ ರಾಜ್ಯ ಕಂಡಂತ ಅಪರೂಪ ಮತ್ತು ಸಮಾಜಮುಖಿ ಆಡಳಿತ ನೀಡಿದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ಹಿಂದುಳಿದ ವರ್ಗಗಳ ಕಲ್ಯಾಣ, ಸಾಮಾಜಿಕ ನ್ಯಾಯ ಹಾಗೂ ದೀನ ದಲಿತರ ಏಳಿಗೆಗಾಗಿ ಶ್ರಮಿಸಿದ್ದಾರೆ. ಸಮಾಜದ ಎಲ್ಲಾ ವರ್ಗಗಳ ನಡುವೆ ಸಮಾನತೆ ತಂದುಕೊಟ್ಟಿದ್ದಾರೆ ಎಂದು ಹೇಳಿದರು.

ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಅಪ್ಪುಗೆರೆ ಸೋಮಶೇಖರ್ ಅವರು ಉಪನ್ಯಾಸ ನೀಡಿ, ಹಿಂದುಳಿದ ವರ್ಗಗಳ ಹರಿಕಾರ ಎಂದೇ ಖ್ಯಾತರಾಗಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ್ ಅರಸ್ ಅವರ ಉಳುವವನಿಗೆ ಭೂಮಿ, ಹಾವನೂರು ಆಯೋಗದಂತಹ ಪ್ರಮುಖ ನಿರ್ಧಾರಗಳ ಪ್ರತಿಫಲ ಇಂದಿನ ಪೀಳಿಗೆಗೆ ಸಿಗುತ್ತಿದೆ. ಜೀತ ಪದ್ದತಿ ನಿರ್ಮೂಲನೆ ಕಾಯ್ದೆ ಜಾರಿಗೆ ತಂದು ಶೋಷಿತ ವರ್ಗಗಳನ್ನ ಉಳ್ಳವರ ಕೈಯಿಂದ ವಿಮೋಚನೆಗೊಳಿಸಿದರು ಎಂದು ನುಡಿದರು.

ಉಳುವವನೇ ಭೂಮಿ ಒಡೆಯ ಕಾನೂನಿನ ಅನಿಷ್ಠಾನದ ಮೂಲಕ ಗೇಣಿದಾದರರ ಹಿತ ರಕ್ಷಿಸಿದರು. ಶಿಕ್ಷಣ ಮತ್ತು ಉದ್ಯೋಗದಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿಗಾಗಿ ಹಾವನೂರು ಆಯೋಗ ಜಾರಿಗೆ ತಂದು ಸಮಸಮಾಜ ನಿರ್ಮಾಣಕ್ಕೆ ಮುನ್ನುಡಿ ಬರೆದು, ಇಡೀ ದೇಶಕ್ಕೆ ಮಾದರಿಯಾಗಿದ್ದಾರೆ. ಮೈಸೂರು ರಾಜ್ಯವನ್ನು ಕರ್ನಾಟಕ ರಾಜ್ಯ ಎಂದು ಮರುನಾಮಕರಣ ಮಾಡಿ ಕನ್ನಡಿಗರ ಬಹುದಿನದ ಕನಸು ನನಸಾಗಿಸಿದರು. ಇಂದಿರಾ ಗಾಂಧಿ ಅವರ ಗರೀಬಿ ಹಠಾವೋ ಮತ್ತು 20 ಅಂಶಗಳ ಕಾರ್ಯಕ್ರಮಗಳು ಜಾರಿಗೆ ತರುವುದರ ಮೂಲಕ ಬಡವರ ಜೀವನಕ್ಕೆ ಆಶಾಕಿರಣರಾದರು. ವೃಕ್ಷ ಸಂರಕ್ಷಣಾ ಕಾಯ್ದೆ ತರುವುದರ ಮೂಲಕ ಪರಿಸರದ ರಕ್ಷಣೆ ಬಗ್ಗೆ ಅರಿವು ಮೂಡಿಸಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ್ ಕರಾಳೆ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸಂಗೀತಾ ಬಿರಾದಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜೆ.ಎಂ ಕರಿಬಸಮ್ಮ, ಮುಖಂಡರಾದ ಅಶೋಕ್ ಶೇರಿಕರ್ ಹಾಗೂ ನೀಲಕಂಠ ಸೇರಿದಂತೆ ವಿದ್ಯಾರ್ಥಿಗಳು ಮತ್ತು ಅನೇಕ ಜನರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X