ಮಹಾರಾಷ್ಟ್ರದಲ್ಲಿ ಎರಡು ಕಾರುಗಳು ಮುಖಾಮುಖಿ ಢಿಕ್ಕಿ : ಬೀದರ್ ಮೂಲದ ನಾಲ್ವರು ಸ್ಥಳದಲ್ಲೇ ಮೃತ್ಯು

ಬೀದರ್: ಮಹಾರಾಷ್ಟ್ರದ ಸೋಲಾಪುರ್ ಜಿಲ್ಲೆಯ ಹುಲಜಂತಗಿ ಮಹಾಳಿಂಗರಾಯ ದೇವಸ್ಥಾನಕ್ಕೆ ದರ್ಶನಕ್ಕೆ ತೆರಳಿ, ವಾಪಸಾಗುತ್ತಿದ್ದ ವೇಳೆ ಎರಡು ಕಾರುಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿ ಬೀದರ್ ಮೂಲದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಬೀದರ್ ತಾಲೂಕಿನ ಖಾಶೆಂಪೂರ್ (ಪಿ) ಗ್ರಾಮದ ನಿವಾಸಿಗಳಾದ ರತಿಕಾಂತ್ (30), ಶಿವಕುಮಾರ್ (26), ಸಂತೋಷ್ (20) ಹಾಗೂ ಸದಾನಂದ್ (19) ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಮತ್ತೊಬ್ಬರನ್ನು ಉಮ್ಮರ್ಗಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಮಹಾರಾಷ್ಟ್ರದ ಮುರುಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
Next Story





