Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಅವೈಜ್ಞಾನಿಕ ಮೀಸಲಾತಿಯಿಂದ ಬಂಜಾರಾ...

ಅವೈಜ್ಞಾನಿಕ ಮೀಸಲಾತಿಯಿಂದ ಬಂಜಾರಾ ಸಮಾಜಕ್ಕೆ ಅನ್ಯಾಯ : ಶಾಸಕ ಪ್ರಭು ಚವ್ಹಾಣ ಆರೋಪ

ವಾರ್ತಾಭಾರತಿವಾರ್ತಾಭಾರತಿ29 Jun 2026 6:20 PM IST
share
ಅವೈಜ್ಞಾನಿಕ ಮೀಸಲಾತಿಯಿಂದ ಬಂಜಾರಾ ಸಮಾಜಕ್ಕೆ ಅನ್ಯಾಯ : ಶಾಸಕ ಪ್ರಭು ಚವ್ಹಾಣ ಆರೋಪ
ಒಳ ಮೀಸಲಾತಿ ಹಂಚಿಕೆ ವಿರುದ್ಧ ಬಂಜಾರಾ ಸಮಾಜದ ಬೃಹತ್ ಪ್ರತಿಭಟನೆ

ಬೀದರ್: ಒಳ ಮೀಸಲಾತಿಯ ಅವೈಜ್ಞಾನಿಕ ಹಂಚಿಕೆಯ ಮೂಲಕ ಬಂಜಾರಾ ಸಮಾಜಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿ ಶಾಸಕ ಪ್ರಭು ಚವ್ಹಾಣ ಅವರ ನೇತೃತ್ವದಲ್ಲಿ ಸೋಮವಾರ ನಗರದಲ್ಲಿ ಬೃಹತ್ ಜನಜಾಗೃತಿ ಸಮಾವೇಶ ಹಾಗೂ ಪ್ರತಿಭಟನಾ ಮೆರವಣಿಗೆ ನಡೆಯಿತು.

ನಗರದ ಬಂಜಾರಾ ಸಮುದಾಯ ಭವನದಿಂದ ಝೀರಾ ಫಂಕ್ಷನ್ ಹಾಲ್‌ವರೆಗೆ ಸಾವಿರಾರು ಸಂಖ್ಯೆಯ ಬಂಜಾರಾ ಸಮಾಜದ ಮುಖಂಡರು, ಮಹಿಳೆಯರು ಹಾಗೂ ಯುವಕರು ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಝೀರಾ ಫಂಕ್ಷನ್ ಹಾಲ್‌ನಲ್ಲಿ ಸಮಾವೇಶ ನಡೆಯಿತು.

ಸಮಾವೇಶದಲ್ಲಿ ಮಾತನಾಡಿದ ಶಾಸಕ ಪ್ರಭು ಚವ್ಹಾಣ, ಕಾಂಗ್ರೆಸ್ ಸರ್ಕಾರ ಬಂಜಾರಾ ಸಮಾಜಕ್ಕೆ ಮೋಸ ಹಾಗೂ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು. ಒಳ ಮೀಸಲಾತಿಯನ್ನು ಸಂಪೂರ್ಣ ಅವೈಜ್ಞಾನಿಕವಾಗಿ ಜಾರಿಗೊಳಿಸಲಾಗಿದ್ದು, ಬಂಜಾರಾ ಸಮಾಜದ ಜನಸಂಖ್ಯೆ, ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಗತಿಗಳನ್ನು ಪರಿಗಣಿಸಿಲ್ಲ ಎಂದು ಹೇಳಿದರು.

ಈ ಹಿಂದೆ ಬಂಜಾರಾ, ಭೋವಿ, ಕೊರಮ ಹಾಗೂ ಕೊರಚ ಸಮಾಜಗಳಿಗೆ ಶೇ.4.5ರಷ್ಟು ಮೀಸಲಾತಿ ನೀಡಲಾಗಿತ್ತು. ಆದರೆ ಈಗ ಈ ಸಮಾಜಗಳೊಂದಿಗೆ ಇನ್ನೂ 59 ಜಾತಿಗಳನ್ನು ಸೇರಿಸುವ ಮೂಲಕ ಎಲ್ಲ ಸಮಾಜಗಳ ಹಕ್ಕುಗಳನ್ನು ಕಸಿದುಕೊಳ್ಳಲಾಗಿದೆ ಎಂದು ಆರೋಪಿಸಿದರು.

ರಾಜ್ಯಾದ್ಯಂತ ಜನಜಾಗೃತಿ ಸಮಾವೇಶಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಈಗಾಗಲೇ ಕಲಬುರಗಿಯಲ್ಲಿ ಯಶಸ್ವಿಯಾಗಿ ಕಾರ್ಯಕ್ರಮ ನಡೆದಿದೆ. ಬೀದರ್ ಬಳಿಕ ಯಾದಗಿರಿ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ತಿಳಿಸಿದರು.

ಈ ಹೋರಾಟ ರಾಜಕೀಯ ಉದ್ದೇಶಕ್ಕಾಗಿ ಅಲ್ಲ, ಸಮಾಜದ ಮಕ್ಕಳ ಭವಿಷ್ಯಕ್ಕಾಗಿ ನಡೆಯುತ್ತಿದೆ. ಸಮಾಜದ ಮಕ್ಕಳು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕಾದರೆ ನ್ಯಾಯಯುತ ಮೀಸಲಾತಿ ದೊರೆಯಬೇಕು. ನಾವು ಯಾರ ಬಳಿಯೂ ಭಿಕ್ಷೆ ಕೇಳುತ್ತಿಲ್ಲ; ಸಂವಿಧಾನಬದ್ಧ ಹಕ್ಕನ್ನು ಕೇಳುತ್ತಿದ್ದೇವೆ ಎಂದು ಅವರು ಹೇಳಿದರು.

ಸರ್ಕಾರ ಒಳ ಮೀಸಲಾತಿಯನ್ನು ಕೂಡಲೇ ಮರುಪರಿಶೀಲಿಸಿ ಎಲ್ಲ ಸಮಾಜಗಳಿಗೆ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ಜಿಲ್ಲಾಧಿಕಾರಿಗಳ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಕಚೇರಿಗಳಿಗೆ ಮುತ್ತಿಗೆ, ರಸ್ತೆ ತಡೆ ಸೇರಿದಂತೆ ರಾಜ್ಯಾದ್ಯಂತ ಉಗ್ರ ಹೋರಾಟಗಳನ್ನು ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕಲಬುರಗಿಯ ಮಾಜಿ ಸಂಸದ ಡಾ. ಉಮೇಶ್ ಜಾಧವ್ ಮಾತನಾಡಿ, ಬಂಜಾರಾ ಸಮಾಜ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿದ್ದು, ಕಾಂಗ್ರೆಸ್ ನಾಯಕರು ಸಮಾಜದ ಬಗ್ಗೆ ಅಪಪ್ರಚಾರ ನಡೆಸಿದ್ದಾರೆ ಎಂದು ಆರೋಪಿಸಿದರು. ಬಂಜಾರಾ ಸಮಾಜ ಸ್ವಾತಂತ್ರ್ಯ ಪೂರ್ವದಿಂದಲೂ ಪರಿಶಿಷ್ಟ ಜಾತಿ ಪಟ್ಟಿಯಲ್ಲಿಯೇ ಇದ್ದು, ಅದನ್ನು ತೆಗೆದುಹಾಕುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಶಿರಹಟ್ಟಿ ಕ್ಷೇತ್ರದ ಶಾಸಕ ಡಾ. ಚಂದ್ರು ಲಮಾಣಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಪದೇ ಪದೇ ಬಂಜಾರಾ ಸಮಾಜವನ್ನು ನಿರ್ಲಕ್ಷಿಸುತ್ತಿದ್ದು, ನ್ಯಾಯ ದೊರೆಯುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು.

ಈ ವೇಳೆ ಬಸವರಾಜ್ ಪವಾರ್ ಪ್ರಾಸ್ತಾವಿಕ ಮಾತನಾಡಿದರು. ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಮಣಿಕಂಠ್ ರಾಠೋಡ್, ಲಿಂಬಾ ನಾಯಕ್ ಅಣ್ಣಾರಾವ್ ರಾಠೋಡ್, ತಾನಾಜಿ ರಾಠೋಡ್, ರಾಮಶೆಟ್ಟಿ ಪನ್ನಾಳೆ, ಗುರುನಾಥ್ ರಾಜಗೀರೆ, ಶಿವಾಜಿರಾವ್ ಪಾಟೀಲ್ ಮುಂಗನಾಳ್, ಸಚಿನ್ ರಾಠೋಡ್, ಸುಜಿತ್ ರಾಠೋಡ್, ಪ್ರದೀಪ್ ಪವಾರ್, ಗೋಪಾಲಸಿಂಗ್ ರಾಠೋಡ್, ವೀರಶೆಟ್ಟಿ ರಾಠೋಡ್ ಹಾಗೂ ಮಾಣಿಕ್ ಪವಾರ್ ಸೇರಿದಂತೆ ಸಮಾಜದ ಅನೇಕ ಮಹಿಳೆಯರು ಉಪಸ್ಥಿತರಿದ್ದರು. ಭಗುಸಿಂಗ್ ಜಾಧವ್ ನಿರೂಪಿಸಿದರು. ಶಿವಲೀಲಾ ಚಿದ್ರೆ ದೇಶಭಕ್ತಿ ಗೀತೆ ಹಾಡಿದರು.

Tags

Prabhu Chavan
share
ವಾರ್ತಾಭಾರತಿ
ವಾರ್ತಾಭಾರತಿ
Next Story
X