Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಪ್ರತಿಯೊಬ್ಬ ಮತದಾರನ ಹಕ್ಕು ಉಳಿಸಲು...

ಪ್ರತಿಯೊಬ್ಬ ಮತದಾರನ ಹಕ್ಕು ಉಳಿಸಲು ಶ್ರಮಿಸಿ : ಸಂಸದ ಸಾಗರ್ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ24 Jun 2026 8:26 PM IST
share
ಪ್ರತಿಯೊಬ್ಬ ಮತದಾರನ ಹಕ್ಕು ಉಳಿಸಲು ಶ್ರಮಿಸಿ : ಸಂಸದ ಸಾಗರ್ ಖಂಡ್ರೆ

ಔರಾದ್: ರಾಜ್ಯದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ಆರಂಭವಾಗಿದ್ದು, ಪ್ರತಿಯೊಂದು ಮತವೂ ಅಮೂಲ್ಯವಾಗಿದೆ. ಪಕ್ಷದ ಕಾರ್ಯಕರ್ತರು ಹದ್ದಿನ ಕಣ್ಣಿನಂತೆ ಎಚ್ಚರಿಕೆ ವಹಿಸಿ ಪ್ರತಿಯೊಬ್ಬ ಮತದಾರನ ಹಕ್ಕನ್ನು ಉಳಿಸುವ ಮೂಲಕ ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸಬೇಕು ಎಂದು ಸಂಸದ ಸಾಗರ್ ಖಂಡ್ರೆ ಕರೆ ನೀಡಿದರು.

ಪಟ್ಟಣದ ಸಾಯಿ ಕಲ್ಯಾಣ ಮಂಟಪದಲ್ಲಿ ಬುಧವಾರ ಆಯೋಜಿಸಿದ್ದ ಔರಾದ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಪಕ್ಷದ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮತದಾನವಿಲ್ಲದೆ ದೇಶದ ಪ್ರಜಾಪ್ರಭುತ್ವ ಉಳಿಯಲು ಸಾಧ್ಯವಿಲ್ಲ. ಆದ್ದರಿಂದ ಜೂನ್ 30ರಿಂದ ಜುಲೈ 29ರವರೆಗೆ ನಡೆಯುವ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಯಾವುದೇ ಕಾರಣಕ್ಕೂ ಲಘುವಾಗಿ ಪರಿಗಣಿಸಬಾರದು ಎಂದು ಅವರು ತಿಳಿಸಿದರು.

ಮತಗಟ್ಟೆ ಏಜೆಂಟರು ಮನೆ ಮನೆಗೆ ಭೇಟಿ ನೀಡಿ ಮತದಾರರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ಅಗತ್ಯ ನೆರವು ನೀಡಬೇಕು. ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ವಿಶೇಷ ನಿಗಾವಹಿಸಬೇಕು ಎಂದು ಅವರು ಸೂಚಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಡಾ.ಭೀಮಸೇನರಾವ್ ಶಿಂಧೆ, ಭಾಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಣಮಂತರಾವ್ ಚವ್ಹಾಣ, ಆನಂದ್ ಚವ್ಹಾಣ, ರಾಮಣ್ಣ, ಔರಾದ ತಾಲ್ಲೂಕಾಧ್ಯಕ್ಷ ರಾಜಕುಮಾರ್ ಹಲಬರ್ಗೆ, ಡಾ. ಫಯಾಜ್, ಬಸವರಾಜ್ ನಿಟ್ಟುರೆ, ಚನ್ನಬಸಪ್ಪ ಉಪ್ಪೆ, ಸುಧಾಕರ್ ಕೊಳ್ಳುರ್, ರಾಜಕುಮಾರ್ ಕಂದಗೊಳೆ ಹಾಗೂ ಸಚಿನ್ ಕತ್ತೆ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Tags

Sagar Khandre
share
ವಾರ್ತಾಭಾರತಿ
ವಾರ್ತಾಭಾರತಿ
Next Story
X