Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬಲಿಷ್ಠ ಭಾರತ ನಿರ್ಮಾಣಕ್ಕೆ ಜಾಗೃತ...

ಬಲಿಷ್ಠ ಭಾರತ ನಿರ್ಮಾಣಕ್ಕೆ ಜಾಗೃತ ಯುವಶಕ್ತಿಯ ಅಗತ್ಯವಿದೆ : ಓಂಪ್ರಕಾಶ್ ರೊಟ್ಟೆ

ವಾರ್ತಾಭಾರತಿವಾರ್ತಾಭಾರತಿ4 Jun 2026 7:30 PM IST
share
ಬಲಿಷ್ಠ ಭಾರತ ನಿರ್ಮಾಣಕ್ಕೆ ಜಾಗೃತ ಯುವಶಕ್ತಿಯ ಅಗತ್ಯವಿದೆ : ಓಂಪ್ರಕಾಶ್ ರೊಟ್ಟೆ
ವಿಶ್ವ ಬೈಸಿಕಲ್ ದಿನಾಚರಣೆ ಅಂಗವಾಗಿ ಯುವಕರಿಗೆ ಪರಿಸರ, ಆರೋಗ್ಯ ಜಾಗೃತಿ

ಬೀದರ್ : ಬಲಿಷ್ಠ ಭಾರತ ನಿರ್ಮಾಣಕ್ಕೆ ಆರೋಗ್ಯ, ಪರಿಸರ ಸಂರಕ್ಷಣೆ ಮತ್ತು ಜಾಗೃತ ಯುವಶಕ್ತಿಯ ಅಗತ್ಯವಿದೆ ಎಂದು ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತ ಓಂಪ್ರಕಾಶ್ ರೊಟ್ಟೆ ಅಭಿಪ್ರಾಯಪಟ್ಟರು.

ನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಬೈಸಿಕಲ್ ದಿನಾಚರಣೆ ಅಂಗವಾಗಿ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ಭಾರತ ಸರ್ಕಾರದ ಮೇರಾ ಯುವ ಭಾರತ್ ಯೋಜನೆಯಡಿ ಬುಧವಾರ ಆಯೋಜಿಸಲಾದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಯುವಕರು ದಿನನಿತ್ಯದ ಜೀವನದಲ್ಲಿ ಹಾಗೂ ಶಾಲಾ-ಕಾಲೇಜುಗಳಿಗೆ ತೆರಳುವ ಸಂದರ್ಭದಲ್ಲಿ ಬೈಸಿಕಲ್ ಬಳಸುವುದರಿಂದ ಪರಿಸರ ಸಂರಕ್ಷಣೆಗೆ ಕೊಡುಗೆ ನೀಡುವುದರ ಜೊತೆಗೆ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬಹುದು ಎಂದರು.

ದೇಶದ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಮಹತ್ವದ್ದಾಗಿದ್ದು, ಯುವಕರು ಸಾಮಾಜಿಕ ಮತ್ತು ರಾಷ್ಟ್ರೀಯ ವಿಚಾರಗಳಲ್ಲಿ ಜಾಗೃತರಾಗಬೇಕು ಎಂದು ಅವರು ಕರೆ ನೀಡಿದರು.

ಡಾ. ಪ್ರಭುಲಿಂಗ್ ಬಿರಾದರ್ ಅವರು ಮಾತನಾಡಿ, ಆರೋಗ್ಯವಂತ ಯುವ ಸಮುದಾಯವೇ ಬಲಿಷ್ಠ ರಾಷ್ಟ್ರ ನಿರ್ಮಾಣದ ಆಧಾರವಾಗಿದ್ದು, ಪ್ರತಿಯೊಬ್ಬ ಯುವಕನು ತನ್ನ ಆರೋಗ್ಯದ ಕಡೆ ವಿಶೇಷ ಗಮನ ಹರಿಸಬೇಕು ಎಂದು ಹೇಳಿದರು.

ಪ್ರಾಂಶುಪಾಲ ದೇವೇಂದ್ರ ಹಂಚೆ ಅವರು ಮಾತನಾಡಿ, ಯುವಕರಲ್ಲಿ ಜಾಗೃತಿ ಮೂಡಿಸುವ ಕೇಂದ್ರ ಸರ್ಕಾರದ ಕಾರ್ಯಕ್ರಮಗಳಿಗೆ ಕಾಲೇಜಿನಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಇಂಜಿನಿಯರಿಂಗ್ ಕಾಲೇಜಿನ ಎನ್‌ಎಸ್‌ಎಸ್ ಘಟಕದ ಮುಖ್ಯಸ್ಥ ಹಾಗೂ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ನಿಖಿಲ್ ಕುಮಾರ್ ಅವರು ತಮ್ಮ ಇಲಾಖೆಯಿಂದ ಹಮ್ಮಿಕೊಳ್ಳಲಾಗುತ್ತಿರುವ ವಿವಿಧ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಸತೀಶ್ ಬೆಳೆಟೆ, ಫಯಾಝ್ ಶೇಖ್, ಎಚ್ಒಡಿ ವಿಜಯಕುಮಾರ್, ಶಿವಲಿಂಗ್ ಮಠ್, ಮಂಜುನಾಥ್ ಹಾಗೂ ಸೋಮನಾಥ್ ಪೂಜಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.





Tags

World Bicycle DayBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X