Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಒತ್ತಡದ ಬದುಕಿಗೆ ಯೋಗವೇ ಸಂಜೀವಿನಿ :...

ಒತ್ತಡದ ಬದುಕಿಗೆ ಯೋಗವೇ ಸಂಜೀವಿನಿ : ಸಂತೋಷ್ ಬಿ.ಜಿ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ18 Oct 2026 7:02 PM IST
share
ಒತ್ತಡದ ಬದುಕಿಗೆ ಯೋಗವೇ ಸಂಜೀವಿನಿ : ಸಂತೋಷ್ ಬಿ.ಜಿ ಪಾಟೀಲ್

ಭಾಲ್ಕಿ : ದೈಹಿಕ ಆರೋಗ್ಯ, ಮಾನಸಿಕ ನೆಮ್ಮದಿ ಹಾಗೂ ಸಾತ್ವಿಕ ಜೀವನಕ್ಕೆ ಯೋಗವು ಪರಿಣಾಮಕಾರಿ ಮಾರ್ಗವಾಗಿದೆ. ಇಂದಿನ ಒತ್ತಡದ ಬದುಕಿನಲ್ಲಿ ನಿಯಮಿತ ಯೋಗಾಭ್ಯಾಸ ಆರೋಗ್ಯಕರ ಜೀವನಕ್ಕೆ ಸಂಜೀವಿನಿಯಂತೆ ನೆರವಾಗುತ್ತದೆ ಎಂದು ಜೈ ಗುರುದೇವ ಯೋಗ ಟ್ರಸ್ಟ್‌ನ ಅಧ್ಯಕ್ಷ ಸಂತೋಷ್‌ ಬಿ.ಜಿ. ಪಾಟೀಲ್‌ ಹೇಳಿದರು.

ಪಟ್ಟಣದ ದೇವಿನಗರದ ದೇವಿ ಮಂದಿರದಲ್ಲಿ ರವಿವಾರ ನಸುಕಿನ ಜಾವ 5 ಗಂಟೆಗೆ ನವರಾತ್ರಿ ಉತ್ಸವದ ಅಂಗವಾಗಿ ಪತಂಜಲಿ ಯೋಗ ಸಮಿತಿ, ಜೈ ಗುರುದೇವ ಯೋಗ ಟ್ರಸ್ಟ್ ಹಾಗೂ ನವರಾತ್ರಿ ಉತ್ಸವ ಸಮಿತಿಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಯೋಗ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ನಿತ್ಯ ಯೋಗಾಭ್ಯಾಸ ಮಾಡುವುದರಿಂದ ದೇಹ ಮತ್ತು ಮನಸ್ಸಿನ ಆರೋಗ್ಯ ಕಾಪಾಡಿಕೊಳ್ಳುವುದರೊಂದಿಗೆ ಸಾತ್ವಿಕ ಚಿಂತನೆ ಬೆಳೆಸಿಕೊಳ್ಳಬಹುದು ಎಂದರು.

ಪತಂಜಲಿ ಯೋಗ ಸಮಿತಿಯ ತಾಲೂಕು ಸಂಚಾಲಕ ಹರಿದೇವ ರುದ್ರಮುನಿ ಅವರು ಮಾತನಾಡಿ, ಪ್ರತಿದಿನ ಕನಿಷ್ಠ ಒಂದು ಗಂಟೆ ಆರೋಗ್ಯಕ್ಕಾಗಿ ಮೀಸಲಿಡಬೇಕು. ನಿಯಮಿತ ಯೋಗಾಭ್ಯಾಸ ದೇಹವನ್ನು ಸದೃಢವಾಗಿಸುವುದರ ಜೊತೆಗೆ ದಿನನಿತ್ಯದ ಕೆಲಸಗಳನ್ನು ಉತ್ಸಾಹದಿಂದ ನಿರ್ವಹಿಸಲು ಸಹಕಾರಿಯಾಗಿದೆ ಎಂದು ತಿಳಿಸಿದರು.

ದೇವಸ್ಥಾನದ ಅಧ್ಯಕ್ಷ ದಿಲೀಪ್‌ ಢವಳೆ ಅವರು ಮಾತನಾಡಿ, ನವರಾತ್ರಿ ಉತ್ಸವದ ಅಂಗವಾಗಿ ಪ್ರತಿವರ್ಷ ಧಾರ್ಮಿಕ, ಸಾಮಾಜಿಕ ಹಾಗೂ ಆರೋಗ್ಯಪರ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ಉದ್ದೇಶದಿಂದ ಯೋಗ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ನುಡಿದರು.

ಶಿಬಿರದಲ್ಲಿ ಯೋಗ ಶಿಕ್ಷಕ ಪಂಡಿತ್‌ ಪಾಟೀಲ್‌, ಚಂದ್ರಕಾಂತ್‌ ಹೈಬತಪುರೇ, ಮಂಗಲಾ ಕಾಡಾದೆ, ರಮೇಶ್‌ ಬರ್ಮಾ ಹಾಗೂ ಸಿಂಧೂ ಹರಿದೇವ್‌ ಅವರು ವಿವಿಧ ಯೋಗಾಸನ, ಪ್ರಾಣಾಯಾಮ ಮತ್ತು ಆರೋಗ್ಯಕರ ಜೀವನಶೈಲಿಯ ಕುರಿತು ಪ್ರಾಯೋಗಿಕವಾಗಿ ತರಬೇತಿ ನೀಡಿದರು. ನೂರಾರು ಜನರು ಶಿಬಿರದಲ್ಲಿ ಭಾಗವಹಿಸಿ ಯೋಗಾಭ್ಯಾಸದ ಪ್ರಯೋಜನ ಪಡೆದುಕೊಂಡರು.

ಈ ಸಂದರ್ಭದಲ್ಲಿ ಸೂರ್ಯಕಾಂತ್‌ ಬಿರಾದಾರ್‌, ನೀಲಕಂಠ್‌ ಬಿರಾದಾರ್, ಸುರೇಶ್ ಕಾಳೆ, ಕಲ್ಲಪ್ಪ ಪಂಡರಗೆರೆ, ಸೋಮನಾಥ್‌ ಪಾಟೀಲ್‌, ನಿರಂಜಪ್ಪ ಪಾತ್ರೆ, ಶಿವಾನಂದ್‌ ಗಂದಗೆ, ರಾಜಶೇಖರ್‌ ಪಾಟೀಲ್‌, ಈಶ್ವರ್‌ ಪಾಟೋದೆ, ಮುರಳಿಧರ್‌ ತೋರಖಡೇ, ಧನರಾಜ್‌ ಹಾಗೂ ಆರತಿ ಮೇತ್ರೆ ಸೇರಿದಂತೆ ಯೋಗ ಸಮಿತಿ ಹಾಗೂ ನವರಾತ್ರಿ ಉತ್ಸವ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Tags

YogaSantosh B.G. Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X