Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಶೇಡಿಗುರಿ- ಸ್ಟೇಟ್ ಬ್ಯಾಂಕ್ ನಡುವೆ...

ಶೇಡಿಗುರಿ- ಸ್ಟೇಟ್ ಬ್ಯಾಂಕ್ ನಡುವೆ ವೇಳಾಪಟ್ಟಿಯಂತೆ ಸಂಚರಿಸದ ಬಸ್ಸುಗಳು: ಸ್ಥಳೀಯರಿಂದ ದೂರು

ವಾರ್ತಾಭಾರತಿವಾರ್ತಾಭಾರತಿ4 Oct 2023 2:58 PM IST
share
ಶೇಡಿಗುರಿ- ಸ್ಟೇಟ್ ಬ್ಯಾಂಕ್ ನಡುವೆ ವೇಳಾಪಟ್ಟಿಯಂತೆ ಸಂಚರಿಸದ ಬಸ್ಸುಗಳು: ಸ್ಥಳೀಯರಿಂದ ದೂರು

ಮಂಗಳೂರು, ಅ.4: ಪಾಲಿಕೆ ವ್ಯಾಪ್ತಿಯ ಶೇಡಿಗುರಿಯಿಂದ ಸ್ಟೇಟ್ ಬ್ಯಾಂಕ್ ನಡುವೆ ಸಂಚರಿಸುವ ಕೆಲ ಬಸ್ಸುಗಳು ನಿಗದಿತ ವೇಳಾಪಟ್ಟಿಯಂತೆ ಸಂಚರಿಸದಿರುವ ಕಾರಣ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.

ಪ್ರೆಸ್ಕ್ಲಬ್ನಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಈ ಆರೋಪ ಮಾಡಿದ ಸ್ಥಳೀಯರಾದ ಬಿಎಸ್ಎನ್ಎಲ್ನ ನಿವೃತ್ತ ನೌಕರ ಬಿ. ಶ್ರೀನಿವಾಸ್, ಈ ರೂಟ್ ನಲ್ಲಿ ಸಂಚರಿಸುವ 31(3), 31ಎ (3), 31ಬಿ (1) ಖಾಸಗಿ ಬಸ್ಸುಗಳಿಂದ ಪ್ರಯಾಣಿಕರಿಂದ ತೊಂದರೆಯಾಗುತ್ತಿದೆ ಎಂದರು.

ಬಸ್ಸುಗಳಲ್ಲಿ ಚಾಲಕರು ಹಾಗೂ ನಿರ್ವಾಹಕರು ಕೂಡಾ ಪ್ರಯಾಣಿಕರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವುದಲ್ಲದೆ, ಟಿಕೆಟ್ ಕೂಡಾ ನೀಡುವುದಿಲ್ಲ. ಚಿಲ್ಲರೆ ಹಿಂತಿರುಗಿಸುವಲ್ಲಿಯೂ ಸತಾಯಿಸುತ್ತಾರೆ. ಬಸ್ಸಿನಲ್ಲಿ ಕರ್ಕಶ ಹಾರ್ನ್, ಮ್ಯೂಜಿಕ್ ಹಾಕುವುದು, ಕರ್ಕಶ ವಿಸಿಲ್ ನಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಸರಕಾರಿ ರಜಾ ದಿನಗಳಲ್ಲಿ ಮತ್ತು ರವಿವಾರ ನಾಲ್ಕು ಬಸ್ಸುಗಳು ಮಾತ್ರ ಸಂಚರಿಸುತ್ತವೆ. ಒಂದು ಬಸ್ಸು ಕೆಟ್ಟು ನಿಂತರೆ ಪ್ರಯಾಣಿಕರು ಕಾಯಬೇಕಾಗುತ್ತದೆ. 31 ಎ ಮತ್ತು 31ಬಿ ಉರ್ವ ಮಾರ್ಕೆಟ್ನಿಂದ ನೇರವಾಗಿ ಬತ್ತೇರಿ ಕ್ರಾಸ್ ಆಗಿ ಮಾರಿಗುಡಿಯಿಂದ ಶೇಡಿಗುರಿಗೆ ಬರುವ ಬದಲು ಉರ್ವ ಮಾರ್ಕೆಟ್ ನಿಂದ ನೇರವಾಗಿ ಮಾರಿಗುಡಿಗೆ ಬಂದು ಶೇಡಿಗುರಿಗೆ ಬರುವುದರಿಂದ ಬತ್ತೇರಿ ಪ್ರದೇಶದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ರೂಟ್ ನಂ. 15 ಕೆ ದಂಬೇಲ್ನಿಂದ ಉರ್ವಾ ಮಾರ್ಕೆಟ್ ಹೋಗಿ ಮಂಗಳಾದೇವಿಗೆ ಮತ್ತು 15 ಜೆ ದಂಬೇಲ್ ನಿಂದ ಉರ್ವಸ್ಟೋರ್ ಆಗಿ ಮಂಗಳಾದೇವಿಗೆ ಯಾವಾಗ ಸಂಚರಿಸುತ್ತದೆ ಎಂದು ತಿಳಿಯುವುದಿಲ್ಲ. ಈ ಎಲ್ಲಾ ಅಂಶಗಳ ಈ ಬಗ್ಗೆ ಈಗಾಗಲೇ ಸ್ಥಳೀಯ ಸಂಘ ಸಂಸ್ಥೆಗಳವರು ಸಾಕಷ್ಟು ಬಾರಿ ಸಂಬಂಧಪಟ್ಟವರಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ ಎಂದು ಅವರು ದೂರಿದರು.

ಶೇಡಿಗುರಿಯಲ್ಲಿ ಸಂಚಾರಿ ಪೊಲೀಸರ ನಿಯೋಜನೆ ಅಗತ್ಯವಿದೆ ಎಂದು ಉರ್ವ ಫ್ರೆಂಡ್ಸ್ ಸರ್ಕಲ್ ವಿನಾಯಕ ಅವರು ಆಗ್ರಹಿಸಿದರು.

ಗೋಷ್ಟಿಯಲ್ಲಿ ಉರ್ವ ಫೆಂಡ್ಸ್ ಸರ್ಕಲ್ ನ ಉಪಾಧ್ಯಕ್ಷ ಕನಕದಾಸ ಪೂಜಾರಿ, ದಂಬೇಲ್ ಫ್ರೆಂಡ್ಸ್ನ ಅಧ್ಯಕ್ಷ ರವಿರಾಜ್ ಪೂಜಾರಿ, ಅಶೋಕನಗರ ಯುವಕ ಸಂಘದ ವಸಂತ ಕುಮಾರ್, ನಿರಂಜನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X