Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ಮೌನವಾಗಿರಲು...

ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ಮೌನವಾಗಿರಲು ಬಿ.ವೈ.ವಿಜಯೇಂದ್ರ 150 ಕೋಟಿ ರೂ. ಆಮಿಷವೊಡ್ಡಿರುವ ಅನ್ವರ್ ಮಾಣಿಪ್ಪಾಡಿ ಆರೋಪದ ಸಿಬಿಐ ತನಿಖೆಯಾಗಲಿ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ14 Dec 2024 4:06 PM IST
share
siddaramayyah

ಬೆಂಗಳೂರು: ವಕ್ಫ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿ.ವೈ.ವಿಜಯೇಂದ್ರ ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ ನರೇಂದ್ರ ಮೋದಿಗೆ ನೇರವಾಗಿ ಪತ್ರ ಬರೆದಿರುವುದು ಬಯಲಾಗಿದೆ. ಪ್ರಧಾನಮಂತ್ರಿಯವರು ಈ ಆರೋಪವನ್ನು ಗಂಭೀರವಾಗಿ ಸ್ವೀಕರಿಸಿ ತಕ್ಷಣ ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

''ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಿಜಯೇಂದ್ರ ನಮ್ಮ ಮನೆಗೆ ಬಂದು ವಕ್ಫ್ ಆಸ್ತಿ ಕಬಳಿಕೆಯ ತನಿಖೆ ನಡೆಸಿ ನೀಡಿರುವ ವರದಿ ಬಗ್ಗೆ ಮೌನ ವಹಿಸುವಂತೆ ಕೇಳಿಕೊಂಡಿದ್ದು ಮಾತ್ರವಲ್ಲ, ಇದಕ್ಕಾಗಿ 150 ಕೋಟಿ ರೂಪಾಯಿಗಳ ಆಮಿಷವೊಡ್ಡಿದ್ದರು. ನಾನು ಅವರಿಗೆ ಗದರಿಸಿ ಮನೆಯಿಂದ ಓಡಿಸಿದ್ದೆ. ಅದರ ನಂತರ ಈ ಎಲ್ಲ ಘಟನೆಗಳನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿದ್ದೆ'' ಎಂದು ಅನ್ವರ್ ಮಾಣಿಪ್ಪಾಡಿಯವರೇ ಮಾಧ್ಯಮದ ಮುಂದೆ ಹೇಳಿಕೊಂಡಿದ್ದರು. 'ನಾ ಖಾವೂಂಗಾ, ನಾ ಖಾನೆ ದೂಂಗಾ' ಎಂದು ಊರೆಲ್ಲ ಡಂಗೂರ ಹೊಡ್ಕೊಂಡು ತಿರುಗಾಡುವ ನರೇಂದ್ರ ಮೋದಿಯವರು ಈ ಆರೋಪದ ಬಗ್ಗೆ ಮೌನವಾಗಿರುವುದು ಸಂಶಯವನ್ನು ಮಾತ್ರವಲ್ಲ ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಸಿದ್ದರಾಮಯ್ಯ ಹೇಳಿಕೆಯಲ್ಲಿ ಟೀಕಿಸಿದ್ದಾರೆ.

ವಕ್ಫ್ ಆಸ್ತಿ ವಿಚಾರದಲ್ಲಿ ವಿಜಯೇಂದ್ರ ವಹಿಸುತ್ತಿರುವ ಆಸಕ್ತಿಯನ್ನ ನೋಡಿದರೆ ಅವರು ಮತ್ತು ಅವರ ಕುಟುಂಬ ವರ್ಗ ವಕ್ಫ್ ಆಸ್ತಿ ಕಬಳಿಕೆಯಲ್ಲಿ ನೇರವಾಗಿ ಶಾಮೀಲಾಗಿರುವಂತೆ ಕಾಣುತ್ತಿದೆ. ಅವರ ಜೊತೆ ಪಕ್ಷದ ಮಹಾಮಹಿಮರೆಲ್ಲರೂ ಶಾಮೀಲಾಗಿರುವ ಸಂಶಯ ಇದೆ. ಬಿ.ಎಸ್.ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಗರಿಷ್ಠ ಸಂಖ್ಯೆತಯಲ್ಲಿ ನೋಟಿಸ್ ನೀಡಿರುವುದನ್ನು ಈಗಾಗಲೇ ಮಾಧ್ಯಮಗಳು ವ್ಯಾಪಕವಾಗಿ ವರದಿ ಮಾಡಿವೆ. ಮಾಣಿಪ್ಪಾಡಿಯವರ ಬಾಯಿಮುಚ್ಚಿಸುವ ಷಡ್ಯಂತ್ರದಲ್ಲಿ ಯಾರೆಲ್ಲ ಶಾಮೀಲಾಗಿದ್ದಾರೆ? ವಕ್ಫ್ ಆಸ್ತಿ ಲೂಟಿಯಲ್ಲಿ ಬೇರೆ ಯಾರೆಲ್ಲ ಪಾಲುದಾರರಿದ್ದಾರೆ? ಎನ್ನುವ ಬಗ್ಗೆಯೂ ತನಿಖೆಯಾಗಬೇಕಾಗಿದೆ ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಆಶ್ಚರ್ಯದ ಸಂಗತಿಯೆಂದರೆ, ಒಂದೆಡೆ ಇಂತಹ ಗಂಭೀರ ಆರೋಪ ಹೊತ್ತುಕೊಂಡಿರುವ ವಿಜಯೇಂದ್ರ ಬಿಜೆಪಿಯ ರಾಜ್ಯಾಧ್ಯಕ್ಷರಾಗುತ್ತಾರೆ, ಇನ್ನೊಂದೆಡೆ ಪಕ್ಷದ ಹೈಕಮಾಂಡ್ ಗೆ ಎರಡು ಸಾವಿರ ಕೋಟಿ ರೂಪಾಯಿ ಸಂದಾಯ ಮಾಡಿ ವಿಜಯೇಂದ್ರ ತಮ್ಮ ತಂದೆ ಯಡಿಯೂರಪ್ಪರನ್ನು ಮುಖ್ಯಮಂತ್ರಿ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸುತ್ತಾರೆ. ಈ ಎಲ್ಲ ಬೆಳವಣಿಗೆಗಳನ್ನು ಒಂದು ಕ್ರಮದಲ್ಲಿ ಜೋಡಿಸಿ ನೋಡಿದರೆ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಕರ್ನಾಟಕವನ್ನು ಎಟಿಎಂ ಮಾಡಿತ್ತು ಎಂದು ಆರೋಪಿಸಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರೇ, ಕೋವಿಡ್ ಸಲಕರಣೆಗಳ ಖರೀದಿ ಭ್ರಷ್ಟಾಚಾರದಿಂದ ಹಿಡಿದು ವಕ್ಪ್ ಆಸ್ತಿ ಕಬಳಿಕೆಯಲ್ಲಿನ ಲೂಟಿ ವರೆಗೆ ರಾಜ್ಯ ಬಿಜೆಪಿಯ ಕಪಾಟಿನಿಂದ ಒಂದೊಂದೇ ಅಸ್ತಿ ಪಂಜರಗಳು ಉರುಳಿಬೀಳುತ್ತಲೇ ಇದೆ. ಈ ಹಗರಣಗಳಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದಲೇ ರಾಜ್ಯದ ಬಿಜೆಪಿ ನಾಯಕರು ನಮ್ಮ ಪಕ್ಷ ಮತ್ತು ನಾಯಕರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಜನರ ಗಮನ ಬೇರೆ ಕಡೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X