ಗುಂಡ್ಲುಪೇಟೆ | ರಸ್ತೆಯಲ್ಲಿ 25 ಕೋತಿಗಳ ಕಳೇಬರ ಪತ್ತೆ

ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಐದು ಹುಲಿಗಳ ಸಾವಿನ ಪ್ರಕರಣದ ಬೆನ್ನಲ್ಲೇ ಇದೀಗ ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ ಕೊಡಸೋಗೆ ರಸ್ತೆಯಲ್ಲಿ ಕೋತಿಗಳ ಕಳೇಬರ ಪತ್ತೆಯಾಗಿರುವುದಾಗಿ ವರದಿಯಾಗಿದೆ.
ಸುಮಾರು ಇಪ್ಪತ್ತೈದು ಕೋತಿಗಳು ಮೃತಪಟ್ಟಿದ್ದು, ಕೋತಿಗಳಿಗೆ ವಿಷವಿಕ್ಕಿ ಕೊಂದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಬಫರ್ ವಲಯದ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
Next Story