ಹನೂರು| ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪ: ಓರ್ವ ಬಂಧನ

ಹನೂರು: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ ವ್ಯಕ್ತಿಯೋರ್ವನನ್ನು ಬಂಧಿಸುವಲ್ಲಿ ಹನೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ತಾಲೂಕಿನ ಹುತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರಿಯಂಬಲ ಗ್ರಾಮದ ಪಂದೇಶ್ 52 ಬಂಧಿತ ಆರೋಪಿಯಾಗಿದ್ದಾನೆ.
ಘಟನೆಯ ವಿವರ: ಹಿರಿಯಂಬಲ ಗ್ರಾಮದ ಪಂದೇಶ್ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿರುವ ಖಚಿತ ಮಾಹಿತಿ ಮೇರೆಗೆ ಕೊಳ್ಳೇಗಾಲ ಉಪ ವಿಭಾಗ ಡಿವೈಎಸ್ಪಿ ಸೋಮೇಗೌಡ ಮಾರ್ಗದರ್ಶನದಲ್ಲಿ ಹನೂರು ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಶಶಿಕುಮಾರ್ ಉಪನಿರೀಕ್ಷಕ ಅಶ್ವಥ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಜಮೀನಿನಲ್ಲಿ ಬೆಳೆಯಲಾಗಿದ್ದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ದಾಳಿಯಲ್ಲಿ ಪೇದೆಗಳಾದ ರಾಘವೇಂದ್ರ, ದೊಡ್ಡವೀರ ಶೆಟ್ಟಿ, ಶಿವು, ರಾಜು, ಮಂಜುನಾಥ್, ಲೊಕನಹಳ್ಳಿ ವೈದ್ಯಾಧಿಕಾರಿ ಡಾ. ಪ್ರಸಾದ್, ಪಾಲ್ಗೊಂಡಿದ್ದರು.
Next Story





