ಬಂಡೀಪುರ | ಮತ್ತೊಂದು ಹುಲಿಯ ಮೃತದೇಹ ಪತ್ತೆ

ಚಾಮರಾಜನಗರ : ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಸಮೀಪದ ಐದು ಹುಲಿಗಳ ಹತ್ಯಾಕಾಂಡ ಮಾಸುವ ಮುನ್ನವೇ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಗುಂಡ್ರೆ ವಲಯದಲ್ಲಿ ಹೆಣ್ಣು ಹುಲಿಯೊಂದು ಸಹಜ ಸಾವನ್ನಪ್ಪಿದೆ.
ಚಾಮರಾಜನಗರ ಜಿಲ್ಲೆಯ ಬಂಡೀಪುರ ಅರಣ್ಯ ಪ್ರದೇಶದ ಗುಂಡ್ರೆ ಅರಣ್ಯ ವ್ಯಾಪ್ತಿಯಲ್ಲಿ ಸುಮಾರು 4 ರಿಂದ 5 ವರ್ಷದ ಹೆಣ್ಣು ಹುಲಿಯೊಂದು ಮೃತಪಟ್ಟಿದೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಗುಂಡ್ರೆ ಅರಣ್ಯ ಪ್ರದೇಶದಲ್ಲಿ ಗುರುವಾರ ಸಂಜೆ ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿಗಳಿಗೆ ಹುಲಿ ಮೃತಪಟ್ಟಿರುವುದು ಕಂಡು ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ವಲಯ ಅರಣ್ಯಾಧಿಕಾರಿ ಪರಿಶೀಲನೆ ನಡೆಸಿದ್ದಾರೆ. ಹುಲಿ ಸಹಜವಾಗಿ ಮೃತಪಟ್ಟಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.
ಹಿರಿಯ ಅರಣ್ಯಾಧಿಕಾರಿಗಳ ಸಮ್ಮುಖದಲ್ಲಿ ಹುಲಿಯ ಮರಣೋತ್ತರ ಪರಿಕ್ಷೆ ನಡೆದಿದೆ ಎಂದು ಅರಣ್ಯ ಸಿಬ್ಬಂದಿ ತಿಳಿಸಿದ್ದಾರೆ.
Next Story