Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಾಮರಾಜನಗರ
  4. ಬಿಜೆಪಿಯು ಜನರನ್ನು ಮತ್ತೆ ಗುಲಾಮಗಿರಿಗೆ...

ಬಿಜೆಪಿಯು ಜನರನ್ನು ಮತ್ತೆ ಗುಲಾಮಗಿರಿಗೆ ತಳ್ಳಲು ಹೊರಟಿದೆ: ಡಾ.ಹೆಚ್ ಸಿ ಮಹದೇವಪ್ಪ

ವಾರ್ತಾಭಾರತಿವಾರ್ತಾಭಾರತಿ29 March 2024 3:30 PM IST
share
ಬಿಜೆಪಿಯು ಜನರನ್ನು ಮತ್ತೆ ಗುಲಾಮಗಿರಿಗೆ ತಳ್ಳಲು ಹೊರಟಿದೆ: ಡಾ.ಹೆಚ್ ಸಿ ಮಹದೇವಪ್ಪ

ಕೊಳ್ಳೇಗಾಲ: ಮಾ.29.ನಮ್ಮ ದೇಶದಲ್ಲಿ ಸಂವಿಧಾನ ಪರವಾಗಿ ಸಂವಿಧಾನದ ಆಶಯಗಳನ್ನು ಈಡೇರಿಸುವಂತಹ ಕೆಲಸ ಮಾಡುತ್ತಿರುವ ರಾಷ್ಟ್ರೀಯ ಪಕ್ಷ ಯಾವುದಾದರೂ ಇದ್ದರೆ ಅದು ನಮ್ಮ ಕಾಂಗ್ರೆಸ್ ಪಕ್ಷ ಎಂದು ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್ ಸಿ ಮಹದೇವಪ್ಪ ಅವರು ಹೇಳಿದ್ದಾರೆ.

ಶುಕ್ರವಾರ ಕೊಳ್ಳೇಗಾಲ ಪಟ್ಟಣದ ನ್ಯಾಷನಲ್ ಸ್ಕೂಲ್ ಮೈದಾನದಲ್ಲಿ ಏರ್ಪಡಿಸಿದ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಚುನಾವಣಾ ಪೂರ್ವಸಭೆಯಲ್ಲಿ ಮಾತನಾಡಿದ ಅವರು, ಈ ಬಾರಿಯ ಲೋಕಸಭಾ ಚುನಾವಣೆಯು ಬಹಳ ಮುಖ್ಯವಾಗಿದೆ. ಬಿಜೆಪಿಯು ಧರ್ಮ ಹಾಗೂ ದೇವರ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದೆ. ದೇವರ ಹೆಸರಿನಲ್ಲಿ ಜನರಿಗೆ ಭಯ ಹುಟ್ಟಿಸುತ್ತಿದೆ. ರಾಷ್ಟ್ರೀಯ ಸಮಸ್ಯೆಗಳ ಬಗ್ಗೆ ತಲೆಕೆಡಿಸಿಕೊಳ್ಳದ ಬಿಜೆಪಿಯವರು ಸಂವಿಧಾನವನ್ನು ಬದಲಾಯಿಸಲು ಹುನ್ನಾರ ನಡೆಸುತ್ತಿದ್ದಾರೆ. ಆದ್ದರಿಂದ ಜನತೆ ಎಚ್ಚೆತ್ತುಕೊಂಡು ಬಿಜೆಪಿ ಪಕ್ಷವು ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬಾರದಂತೆ ನೋಡಿಕೊಳ್ಳಬೇಕೆಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಮುಂದೆ ಮನವಿ ಮಾಡಿದರು.

ಬಿಜೆಪಿ ಪಕ್ಷದವರು ಜನರನ್ನು ಮತ್ತೆ ಗುಲಾಮಗಿರಿಗೆ ತಳ್ಳಲು ಹೊರಟಿದ್ದಾರೆ. ಈ ಕಾರಣಕ್ಕಾಗಿ ಇಂದಿನ ಪ್ರಜ್ಞಾವಂತ ಯುವಕರು ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳನ್ನೂ ಮನೆಮೆನೆಗೆ ತಿಳಿಸುವ ಕೆಲಸ ಮಾಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತವನ್ನು ಜನರಲ್ಲಿ ಮನವರಿಕೆ ಮಾಡುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಲು ಪ್ರತಿಯೊಬ್ಬ ಕಾಂಗ್ರೆಸ್ ಮುಖಂಡರುಗಳು ತಿಳಿಸಬೇಕು ಎಂದು ತಿಳಿಸಿದರು.

ಕರ್ನಾಟಕ ರಾಜ್ಯದ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂವಿಧಾನ ಮತ್ತು ಅದರ ಮಹತ್ವವನ್ನು ಪ್ರತಿಯೊಬ್ಬ ನಾಗರಿಕನಿಗೂ ತಿಳಿಸುವ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅದ್ಭುತವಾದ ಕಾರ್ಯಕ್ರಮವನ್ನು ನೆರವೇರಿಸಿದ್ದೇವೆ.ಬಹುಜನರ ಹಿತ ಶಕ್ತಿ ಕಾಪಾಡುವ ಪಕ್ಷ ನಮ್ಮದು ಆಗಾಗಿ ದೇಶಕ್ಕೆ ಕಾಂಗ್ರೆಸ್ ಪಕ್ಷದ ಅನಿವಾರ್ಯವಿದೆ. ಬಿಜೆಪಿ ಪಕ್ಷದ ನಾಯಕರು ಸಂವಿಧಾನ ಬದಲಾವಣೆ ಮಾಡಲು 400 ಜನರ ಗೆಲುವಿನ ಅವಶ್ಯಕತೆ ಇದೆ ಬಹಿರಂಗವಾಗಿ ಹೇಳುತ್ತಿದ್ದಾರೆ. ಹಾಗಾಗಿ ಮತದಾರರು ಈ ಬಾರಿ ಯೋಚಿಸಿ ಮತನೀಡಿ ಎಂದರು.

ಚಾಮರಾಜನಗರ ಲೋಕಸಭಾ ಕ್ಷೆತ್ರದಿಂದ ಸುನಿಲ್ ಬೋಸ್ ಅವರು ಸ್ಪರ್ಧೆ ಮಾಡುತ್ತಿದ್ದಾರೆ. ಅವರನ್ನು ಬೆಂಬಲಿಸುವ ಜೊತೆಗೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಅವರಿಗೆ ಬಲ ತುಂಬಿ ಎಂದು ಹೇಳುತ್ತಾ ತಮ್ಮ ಪುತ್ರನ ಪರ ಕಾಂಗ್ರೆಸ್ ಪಕ್ಷದ ಎಲ್ಲಾ ಕಾರ್ಯಕರ್ತರು ಮತಯಾಚನೆ ಮಾಡಬೇಕು ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X