ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿಗೂ ಬಾಂಬ್ ಬೆದರಿಕೆ ಸಂದೇಶ

ಚಾಮರಾಜನಗರ: ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಜಿಲ್ಲಾಡಳಿತ ಭವನಕ್ಕೆ ಇಂದು ಮುಂಜಾವ ಬಾಂಬ್ ಬೆದರಿಕೆ ಸಂದೇಶ ಬಂದಿದೆ.
ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿಯ ಅಧಿಕೃತ ಇ ಮೇಲ್ ಗೆ ಬೆಳಗಿನ ಜಾವ 2:40ಕ್ಕೆ ಬಂದಿರುವ ಇ ಮೇಲ್ ನಲ್ಲಿ ಬೆದರಿಕೆ ಹಾಕಿದ್ದಾರೆ. ಜಿಲ್ಲಾಡಳಿತಕ್ಕೆ ಬಾಂಬ್ ಬೆದರಿಕೆ ಹಾಕಿರುವ ಹಿನ್ನಲೆಯಲ್ಲಿ ಜಿಲ್ಲಾಡಳಿತ ಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಆತಂಕಿತರಾಗಿ ಕಚೇರಿಗಳಿಂದ ಹೊರಗೆ ಬಂದು ನಿಂತಿದ್ದರು.
ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ಮಾತನಾಡಿ, ಬಾಂಬ್ ಬೆದರಿಕೆ ಬಂದಿರುವ ಬಗ್ಗೆ ಖಚಿತಪಡಿಸಿ, ಜಿಲ್ಲಾಡಳಿತ ಭವನದಲ್ಲಿ ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ ಮಾಡಿಸಲಾಗಿದೆ. ಕಿಡಿಗೇಡಿಯ ಐಪಿ ವಿಳಾಸ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
Next Story