Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಾಮರಾಜನಗರ
  4. Chamarajanagar | ಕಾವೇರಿಗಾಗಿ...

Chamarajanagar | ಕಾವೇರಿಗಾಗಿ ರಸ್ತೆಗಿಳಿದ ಕನ್ನಡ ಪರ ಸಂಘಟನೆಗಳು

ವಾರ್ತಾಭಾರತಿವಾರ್ತಾಭಾರತಿ13 Aug 2026 5:46 PM IST
share
Chamarajanagar | ಕಾವೇರಿಗಾಗಿ ರಸ್ತೆಗಿಳಿದ ಕನ್ನಡ ಪರ ಸಂಘಟನೆಗಳು

ಚಾಮರಾಜನಗರ: ರಾಜ್ಯದ ಕಾವೇರಿ ನದಿ ಪಾತ್ರದಿಂದ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶಿಸಿರುವ ಕ್ರಮ ಖಂಡಿಸಿ ವಿವಿಧ ಕನ್ನಡಪರ ಸಂಘಟನೆಗಳಿಂದ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಯಿತು.

ಚಾಮರಾಜನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆಯಲ್ಲಿ ಪಚ್ಚಪ್ಪ ವೃತ್ತಕ್ಕೆ ತೆರಳಿ ಹೆದ್ದಾರಿ ತಡೆದು ಕಡ್ಲೆಪುರಿ, ಅರಿಶಿಣ, ಕುಂಕುಮ ಹಾಗೂ ಹೂವುಗಳನ್ನು ಎರಚಿ ಕೆಲಕಾಲ ಪ್ರತಿಭಟನೆ ನಡೆಸಿದರು. ಕಾವೇರಿ ನೀರು ನಿಯಂತ್ರಣ ಸಮಿತಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡಪರ ಸಂಘಟನೆಯ ಪರವಾಗಿ ಕರ್ನಾಟಕ ಸೇನಾ ಪಡೆಯ ರಾಜ್ಯಾಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಕರ್ನಾಟಕದ ವಾಸ್ತವ ಸ್ಥಿತಿಯನ್ನು ಅರಿಯದೆ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ನೀಡಿರುವುದು ಖಂಡನೀಯ. ಇದರಿಂದ ರಾಜ್ಯದ ಜನತೆಗೆ ಅನ್ಯಾಯವಾಗುತ್ತಿದೆ. ನಮ್ಮ ಪಾಲಿಗೆ ಕಾವೇರಿ ನೀರು ನಿಯಂತ್ರಣ ಸಮಿತಿ ಸತ್ತು ಹೋಗಿದೆ ಎಂದು ಆಕ್ರೋಶ ಹೊರಹಾಕಿದರು.

ರಾಜ್ಯದಲ್ಲಿ ಬರದ ಛಾಯೆ ಆವರಿಸಿದ್ದು, ನೀರಿನ ಕೊರತೆ ಕಾಡುತ್ತಿದೆ. ಆದರೆ, ಇದನ್ನು ತಿಳಿಯದ ಸಮಿತಿ ದೆಹಲಿಯಲ್ಲಿ ಕುಳಿತು ಇಲ್ಲಿನ ವಾಸ್ತವವನ್ನು ಪರಿಶೀಲನೆ ನಡೆಸದೇ ತಮಿಳುನಾಡಿಗೆ ನೀರು ಬಿಡಿ ಎಂದು ಆದೇಶ ಹೊರಡಿಸುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

ಪ್ರತಿಭಟನೆಯಲ್ಲಿ ಕನ್ನಡಪರ ಸಂಘಟನೆಯ ಸೋಮನಾಯಕ, ಪರಶಿವಮೂರ್ತಿ, ಶಿವರಾಜು, ಪಣ್ಯದಹುಂಡಿ ರಾಜು, ನಿಜಧ್ವನಿ ಗೋವಿಂದರಾಜು, ರಾಚಪ್ಪ, ಆಟೋ ಲಿಂಗರಾಜು, ಲೋಕೇಶ್, ಮಹೇಶ್ ಗೌಡ, ರಮೇಶ್ ಗೌಡ, ಮಹದೇವನಾಯಕ, ತಾಂಡವಮೂರ್ತಿ, ಮಂಜು, ವೀರಭದ್ರ ಸೇರಿದಂತೆ ಇತರರು ಭಾಗವಹಿಸಿದ್ದರು.

Tags

Chamarajanagar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X