ಚಾಮರಾಜನಗರ | ಹೃದಯಾಘಾತದಿಂದ 4ನೇ ತರಗತಿಯ ವಿದ್ಯಾರ್ಥಿ ಮೃತ್ಯು

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಕುರುಬಗೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 4ನೇ ತರಗತಿಯ ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.
ಗುಂಡ್ಲುಪೇಟೆ ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಾಲ್ಕನೇ ತರಗತಿ ವಿದ್ಯಾರ್ಥಿ ಮನೋಜ್ ಕುಮಾರ್ (10) ಹೃದಯಘಾತದಿಂದ ಮೃತಪಟ್ಟ ವಿದ್ಯಾರ್ಥಿ.
ಮನೋಜ್ ಕುಮಾರ್ ಶಾಲೆಯಲ್ಲಿ ಪಾಠ ಕೇಳುತ್ತಿದ್ದ ಸಮಯದಲ್ಲಿ ಕುಸಿದು ಬಿದ್ದಿದ್ದಾನೆ ಎನ್ನಲಾಗಿದೆ. ಕೂಡಲೇ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ವಿದ್ಯಾರ್ಥಿಗೆ ಹೃದಯ ಸಂಬಂಧಿ ಕಾಯಿಲೆ ಇದ್ದು, ಮೈಸೂರಿನ ಜಯದೇವ ಹಾಗೂ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದರು ಎನ್ನಲಾಗಿದೆ.
Next Story





