Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಾಮರಾಜನಗರ
  4. ಚಾಮರಾಜನಗರ: ಭಿಕ್ಷೆ ಬೇಡುತ್ತಿದ್ದ...

ಚಾಮರಾಜನಗರ: ಭಿಕ್ಷೆ ಬೇಡುತ್ತಿದ್ದ ಮಹಿಳೆಯ ಮಗು ಅಪಹರಿಸಿದ ಮತ್ತೊಬ್ಬ ಭಿಕ್ಷುಕಿ

ವಾರ್ತಾಭಾರತಿವಾರ್ತಾಭಾರತಿ17 Nov 2024 2:46 PM IST
share
ಚಾಮರಾಜನಗರ: ಭಿಕ್ಷೆ ಬೇಡುತ್ತಿದ್ದ ಮಹಿಳೆಯ ಮಗು ಅಪಹರಿಸಿದ  ಮತ್ತೊಬ್ಬ ಭಿಕ್ಷುಕಿ

ಚಾಮರಾಜನಗರ : ಹಾಡ ಹಗಲೇ ಭಿಕ್ಷಾಟನೆ ಮಾಡುವ ಮಹಿಳೆಯೊಬ್ಬಳು ತನ್ನೊಂದಿಗೆ ಭಿಕ್ಷೆ ಬೇಡಲು ಬಂದಿದ್ದ ಮತ್ತೊಬ್ಬ ಮಹಿಳೆಯ ಮಗುವನ್ನೇ ಅಪಹರಣ ಮಾಡಿದ ಘಟನೆ ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ನಡೆದಿದೆ.

ಚಾಮರಾಜನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಭಿಕ್ಷೆ ಬೇಡಲು ಬಂದಿದ್ದ ರಾಮನಗರದ ಪಾದರಾಯನಪುರದ ಅನಿತಾ ಎಂಬಾಕೆಯ 3 ವರ್ಷದ ಹೆಣ್ಣು ಮಗುವನ್ನು ಜತೆಗೆ ಬಂದಿದ್ದ ಮತ್ತೊಬ್ಬ ಮಹಿಳೆ ಹೊತ್ತೊಯ್ದಿದ್ದಾಳೆ. ಅವಳ ಹೆಸರು, ವಿಳಾಸ ಪತ್ತೆಯಾಗಿಲ್ಲ. ಈ ಕುರಿತು ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಅನಿತಾ ಶುಕ್ರವಾರ ದೂರು ನೀಡಿದ್ದಾಳೆ.

ಪೊಲೀಸರು ಹೇಳುವ ಪ್ರಕಾರ, ಅನಿತಾ ತುಸು ಮಂದ ಬುದ್ದಿಯ ಮಹಿಳೆ ಎನ್ನಲಾಗಿದೆ. ಈಕೆ ಕಳೆದ ವಾರ ತನ್ನ ಮಗುವಿನೊಂದಿಗೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರಬೆಟ್ಟಕ್ಕೆ ಬಂದಿದ್ದಳು. ಇಲ್ಲಿ ಈಕೆಗೆ ಮಹಿಳೆಯೊಬ್ಬಳ ಪರಿಚಯವಾಗಿದೆ. ಅನಿತಾಳ ಮಗುವನ್ನು ಮಹಿಳೆ ಬಳಸಿಕೊಂಡು ದೇವಸ್ಥಾನದ ಸುತ್ತಮುತ್ತ ಭಿಕ್ಷಾಟನೆ ನಡೆಸಿದ್ದಾಳೆ. ಭಿಕ್ಷೆಯಲ್ಲಿ ಸಿಕ್ಕ ಹಣದಲ್ಲಿ ಅನಿತಾಳಿಗೂ ಸ್ವಲ್ಪ ಹಣ ಕೊಟ್ಟಿದ್ದಾಳೆ.

ಮಹದೇಶ್ವರಬೆಟ್ಟದಲ್ಲಿ ನಾಲೈದು ದಿನ ಇದ್ದು, ಬಳಿಕ ಅನಿತಾ ಮತ್ತು ಮಗುವನ್ನು ಮಹಿಳೆ ಕೊಳ್ಳೇಗಾಲ ಬಸ್ ನಿಲ್ದಾಣಕ್ಕೆ ಕರೆದುಕೊಂಡು ಹೋಗಿ ಇಲ್ಲಿಯೂ ಭಿಕ್ಷೆ ಕೇಳುತ್ತಾ ಕಾಸು ಮಾಡಿದ್ದಾಳೆ. ನಂತರ ಮೈಸೂರಿಗೆ ಹೋಗಿ ಭಿಕ್ಷಾಟನೆ ನಡೆಸಿದ್ದಾಳೆ. ಇಲ್ಲಿಂದ ನಂಜನಗೂಡು ದೇವಸ್ಥಾನಕ್ಕೆ ಹೋಗಿ ಭಿಕ್ಷೆ ಬೇಡಿದ್ದಾಳೆ. ಗುರುವಾರ ಚಾಮರಾಜನಗರ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಅನಿತಾಳನ್ನು ಕರೆದುಕೊಂಡು ಬಂದು ಈಕೆಯಿಂದ ಮಗುವನ್ನು ಪಡೆದು ಅಂಗಡಿಗಳ ಬಳಿ ಭಿಕ್ಷೆ ಬೇಡುತ್ತಾ ನಾಪತ್ತೆಯಾಗಿದ್ದಾಳೆ. ಈ ವಿಷಯ ಪೊಲೀಸರಿಗೆ ಗೊತ್ತಾಗಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಅನಿತಾಳಿಂದ ದೂರು ಪಡೆದುಕೊಂಡು ಮಗು ಎತ್ತಿಕೊಂಡು ಹೋಗಿರುವ ಮಹಿಳೆಯ ಹುಡುಕಾಟ ಆರಂಭಿಸಿದ್ದಾರೆ.

ಅನಿತಾಳ ಮಗುವನ್ನು ಮಹಿಳೆ ಎತ್ತಿಕೊಂಡು ಭಿಕ್ಷೆ ಕೇಳುತ್ತಿರುವ ವಿಡಿಯೋವನ್ನು ಶೇರ್ ಮಾಡಿ, 'ಈ ಮಹಿಳೆ ಚಾಮರಾಜನಗರದ ಬಸ್ ನಿಲ್ದಾಣದಲ್ಲಿ ಮಗು ಎತ್ತಿಕೊಂಡು ಹೋಗಿದ್ದಾಳೆ. ಇವಳ ಮಾಹಿತಿ ಸಿಕ್ಕರೆ ತಿಳಿಸಿ' ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪೊಲೀಸರು ಪರಿಶೀಲನೆ ನಡೆಸಿದ ವೇಳೆ ಸಿಸಿಟಿವಿ ಕ್ಯಾಮರಾ ದೃಶ್ಯಾವಳಿಗಳು ಲಭ್ಯವಾಗಿವೆ. ಅನಿತಾಳಿಂದ ಮಗು ಪಡೆದುಕೊಂಡ ಮಹಿಳೆ ಅಂಗಡಿಯಲ್ಲಿ ಭಿಕ್ಷೆ ಕೇಳುತ್ತಾ ಮರೆಯಾಗುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ಮಗು ಅಪಹರಿಸಿದ ಮಹಿಳೆ ಚಾಮರಾಜೇಶ್ವರ ದೇವಸ್ಥಾನದ ಬಳಿಗೆ ಆಗಮಿಸಿದ್ದಾಳೆ. ಬಳಿಕ ಅಲ್ಲಿ ಆಟೋ ಹತ್ತಿ ರೈಲು ನಿಲ್ದಾಣಕ್ಕೆ ಹೋಗಿದ್ದಾಳೆ. ಅಲ್ಲಿ ಸಿಸಿಟಿವಿ ಕ್ಯಾಮರಾ ಇಲ್ಲದ ಕಾರಣ ಎಲ್ಲಿಗೆ ಹೋಗಿದ್ದಾಳೆ ಎನ್ನುವುದು ಗೊತ್ತಾಗಿಲ್ಲ. ಪೊಲೀಸರ ತಂಡ ಮಲೆ ಮಹದೇಶ್ವರ ಬೆಟ್ಟ, ಕೊಳ್ಳೇಗಾಲ, ಮೈಸೂರು, ನಂಜನಗೂಡಿನಲ್ಲಿ ಮಹಿಳೆ ಪತ್ತೆಗೆ ತೆರಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X