ಚಾಮರಾಜನಗರ: ನದಿಗೆ ಹಾರಿದ್ದ ಗ್ರಾಮ ಲೆಕ್ಕಾಧಿಕಾರಿಯ ಮೃತದೇಹ ಪತ್ತೆ

ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಗ್ರಾಮಲೆಕ್ಕಾಧಿಕಾರಿಯ ಶವ ಮೂರು ದಿನಗಳ ಬಳಿಕ ಕೊಳ್ಳೇಗಾಲ ತಾಲೂಕಿನ ಯಡಕುರಿಯಾ ಬಳಿ ರವಿವಾರ ಮಧ್ಯಾಹ್ನ ಪತ್ತೆಯಾಗಿದೆ.
ಕೊಳ್ಳೇಗಾಲ ತಾಲ್ಲೂಕಿನ ಚೆಲುವನಹಳ್ಳಿ ಗ್ರಾಮದ ನಿವಾಸಿ ಹಾಗೂ ಮಂಡ್ಯ ಜಿಲ್ಲೆಯ ಬಿ.ಜಿ.ಪುರ ಗ್ರಾಮ ಆಡಳಿತಾಧಿಕಾರಿಯಾಗಿದ್ದ ನಿರಂಜನ್ ಕುಮಾರ್ ಮೃತ ವ್ಯಕ್ತಿ. ಜೂನ್ 17ರಂದು ಮದ್ಯಾಹ್ನವರೆಗೆ ಕರ್ತವ್ಯ ನಿರ್ವಹಿಸಿ, ಬಳಿಕ ಕಾವೇರಿಪುರದ ಕಾವೇರಿ ಸೇತುವೆ ಬಳಿ ತನ್ನ ಬೈಕ್ ನಿಲ್ಲಿಸಿ ನದಿಗೆ ಹಾರಿದ್ದರು ಎಂದು ಹೇಳಲಾಗಿದೆ.
ಅಗ್ನಿಶಾಮಕ ದಳ ಮತ್ತು ಪೊಲೀಸರ ಶೋಧ ಕಾರ್ಯದ ಬಳಿಕ, ಮೃತದೇಹ ಯಡಕುರಿಯಾ ಬಳಿ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಕೊಳ್ಳೇಗಾಲದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಈ ಕುರಿತು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





