Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಾಮರಾಜನಗರ
  4. ಚಾಮರಾಜನಗರ: ಅಡುಗೆ ಸಿಬ್ಬಂದಿಯಾಗಿ ದಲಿತ...

ಚಾಮರಾಜನಗರ: ಅಡುಗೆ ಸಿಬ್ಬಂದಿಯಾಗಿ ದಲಿತ ಮಹಿಳೆ ನೇಮಕ; ಶಾಲೆ ತೊರೆದ ವಿದ್ಯಾರ್ಥಿಗಳು

ಒಬ್ಬ ವಿದ್ಯಾರ್ಥಿ ಮಾತ್ರ ಬಾಕಿ

ವಾರ್ತಾಭಾರತಿವಾರ್ತಾಭಾರತಿ25 Jun 2025 11:25 AM IST
share
ಚಾಮರಾಜನಗರ: ಅಡುಗೆ ಸಿಬ್ಬಂದಿಯಾಗಿ ದಲಿತ ಮಹಿಳೆ ನೇಮಕ; ಶಾಲೆ ತೊರೆದ ವಿದ್ಯಾರ್ಥಿಗಳು

ಚಾಮರಾಜನಗರ: ಸರ್ಕಾರಿ ಶಾಲೆಯಲ್ಲಿ ಮುಖ್ಯ ಅಡುಗೆ ಸಿಬ್ಬಂದಿಯಾಗಿ ದಲಿತ ಮಹಿಳೆ ನೇಮಕಕ್ಕೆ ಅಸಮಾಧಾನ ವ್ಯಕ್ತವಾಗಿದ್ದು, ಶಾಲೆಗೆ ದಾಖಲಾಗಿದ್ದ ಮಕ್ಕಳು ಬೇರೆ ಕಡೆ ವ್ಯಾಸಾಂಗ ಮಾಡಲು ವರ್ಗಾವಣೆ ಪತ್ರ ಪಡೆದು ತೆರಳುತ್ತಿರುವ ಘಟನೆ ಆಲೂರು ಹೊಮ್ಮ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

2024-25 ನೇ ಸಾಲಿನಲ್ಲಿ ಶಾಲೆಯಲ್ಲಿ 22 ವಿದ್ಯಾರ್ಥಿಗಳಿದ್ದರು. ಈಗಾಗಲೇ 12 ಮಕ್ಕಳು ಟಿಸಿ ಪಡೆದಿದ್ದಾರೆ. ಉಳಿದವರಿಂದಲೂ ವರ್ಗಾವಣೆ ಪತ್ರ ಪಡೆಯಲು ಅರ್ಜಿ ಸಲ್ಲಿಕೆಯಾಗಿದೆ. ಪೋಷಕರು ತಮ್ಮ ಮಕ್ಕಳ ವರ್ಗಾವಣೆ ಪತ್ರ ಪಡೆದು ಬೇರೆ ಬೇರೆ ಶಾಲೆಗಳಿಗೆ ಸೇರಿಸುತ್ತಿರುವ ಪರಿಣಾಮ ಶಾಲೆ ಮುಚ್ಚುವ ಹಂತಕ್ಕೆ ತಲುಪಿದೆ.

ಶಾಲೆಯಲ್ಲಿನ ಅಕ್ಷರ ದಾಸೋಹದ ಅಡುಗೆ ಸಿಬ್ಬಂದಿ ದಲಿತ ಮಹಿಳೆ ಎಂಬ ಕಾರಣಕ್ಕೆ ಮಕ್ಕಳ ವರ್ಗಾವಣೆ ಪತ್ರ ಪಡೆದು ಬೇರೆಡೆ ಸೇರಿಸುತ್ತಿದ್ದಾರೆಂದು ಸ್ಥಳೀಯರು ಆರೋಪಿಸಿದ್ದಾರೆ. ಆದರೆ, ಈ ಬಗ್ಗೆ ಪ್ರತಿಕ್ರಿಯಿಸಲು ಮಕ್ಕಳ ಪೋಷಕರು ನಿರಾಕರಿಸಿದ್ದಾರೆ. ಈ ಶಾಲೆಯಲ್ಲೀಗ ಕೇವಲ ಒಬ್ಬ ವಿದ್ಯಾರ್ಥಿ, ಇಬ್ಬರು ಶಿಕ್ಷಕರು ಇದ್ದಾರೆ. ಆ ಒಬ್ಬ ವಿದ್ಯಾರ್ಥಿಯನ್ನೂ ಬೇರೆಡೆ ಸೇರಿಸಲು ಪೋಷಕರು ವರ್ಗಾವಣೆ ಪತ್ರ ಕೇಳಿದ್ದಾರೆಎಂದು ತಿಳಿದು ಬಂದಿದೆ.

ಹಿಂದೆ ಶಾಲೆಯಲ್ಲಿನ ಶಿಕ್ಷಕರು ಸರಿಯಾಗಿ ಪಾಠ ಪ್ರವಚನ ಮಾಡುತ್ತಿಲ್ಲ ಎಂದು ಪೋಷಕರು ಪ್ರತಿಭಟಿಸಿದ್ದರು. ಆ ವೇಳೆ ಶಿಕ್ಷಣ ಇಲಾಖೆಯು ಶಿಕ್ಷಕರನ್ನು ಬೇರೆಡೆಗೆ ಸ್ಥಳಾಂತರಿಸಿತ್ತು. ಇದೀಗ ಶಾಲೆಯಲ್ಲಿ ಮತ್ತೊಂದು ಸಮಸ್ಯೆ ಉದ್ಭವವಾಗಿದ್ದು, ಶಿಕ್ಷಣ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ.

ಚಾಮರಾಜನಗರ ತಾಲ್ಲೂಕಿನ ಹೊಮ್ಮ ಸರ್ಕಾರಿ ಶಾಲೆಯಲ್ಲಿ ಕಳೆದ ವರ್ಷ 22 ಮಕ್ಕಳಿದ್ದರು. ಈಗ ಎಸ್ಎಟಿಎಸ್ ನಲ್ಲಿ ಮಕ್ಕಳ ಸಂಖ್ಯೆ ಐದಕ್ಕೆ ಇಳಿದಿದೆ. ಗ್ರಾಮಸ್ಥರನ್ನು ಕೇಳಿದರೆ ನಿಮ್ಮ ಶಿಕ್ಷಕರು ನಮ್ಮ ಮಕ್ಕಳಿಗೆ ಸರಿಯಾಗಿ ಪಾಠ ಮಾಡುತ್ತಿಲ್ಲ. ಹೀಗಾಗಿ ಟಿಸಿ ತೆಗೆದುಕೊಂಡು ಹೋಗುತ್ತಿದ್ದೇವೆ ಎಂದು ಹೇಳುತ್ತಾರೆ. ಇದಲ್ಲದೇ ಆಂತರಿಕವಾಗಿ ಬೇರೆ ಬೇರೆ ಕಾರಣಗಳಿವೆ ಎನ್ನುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಲೆಗೆ ಪೊಲೀಸರು, ಬಿಇಒ, ಬಿಆರ್‌ಸಿ ಹೋಗಿದ್ದಾರೆ. ಪಾಲಕರ ಸಭೆ ಬಳಿಕ ಮಾಹಿತಿ ತಿಳಿದು ಕ್ರಮ ವಹಿಸಲಾಗುವುದು. ಜಾತಿ ವಿಚಾರ ಇದ್ದರೆ ಇದನ್ನು ನಾವು ಸಹಿಸುವುದೂ ಇಲ್ಲ, ಇದಕ್ಕೆ ಅವಕಾಶವನ್ನೂ ಕೊಡುವುದಿಲ್ಲ.

ರಾಮಚಂದ್ರರಾಜೇ ಅರಸ್, ಡಿಡಿಪಿಐ, ಚಾಮರಾಜನಗರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X