ಚಾಮರಾಜನಗರ : ಬೆಂಕಿ ಆಕಸ್ಮಿಕ; ಸುಟ್ಟು ಕರಕಲಾದ ಮೂರು ಬೈಕ್‌ಗಳು

ಚಾಮರಾಜನಗರ : ಮೂರು ಬೈಕುಗಳು ಬೆಂಕಿಗೆ ಆಹುತಿಯಾಗಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ಮಹದೇಶ್ವರಬೆಟ್ಟದಲ್ಲಿ ಸೋಮವಾರ ನಡೆದಿದೆ.
ರಾಜ್ಯದ ವಿವಿಧ ಭಾಗಗಳಿಂದ ಮಹದೇಶ್ವರ ಬೆಟ್ಟಕ್ಕೆ ಬಂದ ಭಕ್ತರು, ಕ್ಷೇತ್ರದ ಸಂಕಮ್ಮ ದೇವಾಲಯದ ಬಳಿ ಬೈಕುಗಳನ್ನು ನಿಲ್ಲಿಸಿ ರಾತ್ರಿ ವಾಸ್ತವ್ಯ ಹೂಡಿದ್ದರು. ಸೋಮವಾರ ಮುಂಜಾನೆ ಸುಮಾರು 4 ಗಂಟೆಯ ವೇಳೆಗೆ ಮೂರು ಬೈಕುಗಳು ಬೆಂಕಿಗೆ ಆಹುತಿಯಾಗಿರುವುದನ್ನು ಗಮನಿಸಿದ ಸ್ಥಳೀಯರು ಬೆಂಕಿಯನ್ನು ನಂದಿಸಿದ್ದರೂ ಕೂಡ ಬೈಕ್ ಗಳು ಸಂಪೂರ್ಣ ಸುಟ್ಟು ಕರಕಲಾಗಿವೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
Next Story





