ಚಾಮರಾಜನಗರ : ಶಾರ್ಟ್ ಸರ್ಕ್ಯೂಟ್‌ನಿಂದ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ; ಅಪಾರ ಹಾನಿ

ಅಗ್ನಿಗಾಹುತಿಯಾದ ಕಂಪ್ಯೂಟರ್, ಕಡತಗಳು
ಚಾಮರಾಜನಗರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿಗೆ ಬೆಂಕಿ ಕಾಣಿಸಿಕೊಂಡು ಕಂಪ್ಯೂಟರ್ ಹಾಗೂ ಯುಪಿಎಸ್ ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ಕೊಳ್ಳೇಗಾಲ ಪಟ್ಟಣದಲ್ಲಿ ನಡೆದಿದೆ.
ಮಂಗಳವಾರ ಬೆಳಗ್ಗೆ ಸುಮಾರು 7.30ರ ವೇಳೆಗೆ ಕೊಳ್ಳೇಗಾಲ ಪಟ್ಟಣದಲ್ಲಿರುವ ಪೊಲೀಸ್ ಇನ್ಸ್ಪೆಕ್ಟರ್ ಕಚೇರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಮಾಹಿತಿ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದರು. ಆದರೆ ಅಷ್ಟರಲ್ಲಿ ಕಚೇರಿಯಲ್ಲಿದ್ದ ಸೇರಿದಂತೆ ಇತರ ಕಚೇರಿ ಪರಿಕರಗಳು ಸುಟ್ಟು ಕರಕಲಾಗಿವೆ.
ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ಧರ್ಮೇಂದ್ರ ಹಾಗೂ ವೃತ್ತ ನಿರೀಕ್ಷಕ ಶಿವಮಾದಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Next Story





