ಚಾಮರಾಜನಗರ : ಸಿಡಿಮದ್ದು ಸ್ಫೋಟ; ವ್ಯಕ್ತಿಗೆ ಗಂಭೀರ ಗಾಯ

ಚಾಮರಾಜನಗರ : ಸಿಡಿಮದ್ದು ಸ್ಫೋಟಗೊಂಡು ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಾಲ್ಲೂಕಿನ ಹರದನಹಳ್ಳಿ ಹೋಬಳಿಯ ಅಮಚವಾಡಿ ಗ್ರಾಮದಲ್ಲಿ ನಡೆದಿದೆ.
ಗಾಯಗೊಂಡವರನ್ನು ಪ್ರದೀಪ್ ಕುಮಾರ್ ಅಲಿಯಾಸ್ ಪದ್ದಿ (35) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಘಟನೆಯ ಕುರಿತು ಸಂಬಂಧಪಟ್ಟ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Next Story





