ಚಾಮರಾಜನಗರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ

ಚಾಮರಾಜನಗರ: ಆಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಹನೂರು ತಾಲ್ಲೂಕಿನ ಬಂಡಳ್ಳಿ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.
ಬಂಡಳ್ಳಿ ಗ್ರಾಮದ ಜಯಲಕ್ಷ್ಮಿ ಅವರಿಗೆ ಸೇರಿದ ಮನೆಯಲ್ಲಿ ಶನಿವಾರ ಬೆಳಗ್ಗೆ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಮನೆಯಲ್ಲಿದ್ದ ಬಹುತೇಕ ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿಯಾಗಿವೆ.
ಅದೃಷ್ಟವಶಾತ್ ಮನೆಯಲ್ಲಿದ್ದ 8 ತಿಂಗಳ ಮಗು ಯಾವುದೇ ಅಪಾಯವಿಲ್ಲದೆ ಪಾರಾಗಿದೆ. ಮನೆಗೆ ಬೆಂಕಿ ಕಾಣಿಸಿಕೊಂಡ ತಕ್ಷಣವೇ ನೆರೆಹೊರೆಯವರು ಬೆಂಕಿ ನಂದಿಸಲು ಪ್ರಯತ್ನಿಸಿದರೂ, ಬೆಂಕಿಯ ತೀವ್ರತೆಯಿಂದ ಮನೆ ಸಂಪೂರ್ಣವಾಗಿ ಹಾನಿಗೊಳಗಾಗಿದೆ.
Next Story





