Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಾಮರಾಜನಗರ
  4. ಚಾಮರಾಜನಗರ: ಹುಲಿ ಹತ್ಯೆ ಬಗ್ಗೆ...

ಚಾಮರಾಜನಗರ: ಹುಲಿ ಹತ್ಯೆ ಬಗ್ಗೆ ಪಿಸಿಸಿಎಫ್ ತನಿಖೆಗೆ ಈಶ್ವರ ಖಂಡ್ರೆ ಆದೇಶ

ವಾರ್ತಾಭಾರತಿವಾರ್ತಾಭಾರತಿ3 Oct 2025 10:30 AM IST
share
ಚಾಮರಾಜನಗರ: ಹುಲಿ ಹತ್ಯೆ ಬಗ್ಗೆ ಪಿಸಿಸಿಎಫ್ ತನಿಖೆಗೆ ಈಶ್ವರ ಖಂಡ್ರೆ ಆದೇಶ
'ಮಲೆಮಹದೇಶ್ವರ ಬೆಟ್ಟದ ವನ್ಯಜೀವಿ ಧಾಮದಲ್ಲಿ ವನ್ಯಜೀವಿಗಳ ಕಳ್ಳಬೇಟೆ ತಡೆಗೆ ಕಠಿಣ ಕ್ರಮ'

ಬೆಂಗಳೂರು, ಅ.3: ವನ್ಯಜೀವಿ ಸಪ್ತಾಹದ ಆರಂಭದ ದಿನವೇ ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟ ಕಾನನದ ಹನೂರು ವಲಯದಲ್ಲಿ ಮತ್ತೊಂದು ಹುಲಿ ಹತ್ಯೆ ಆಗಿರುವ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ, ಈ ಬಗ್ಗೆ ಪಿಸಿಸಿಎಫ್ ನೇತೃತ್ವದ ತಂಡದಿಂದ ತನಿಖೆಗೆ ಆದೇಶ ನೀಡಿದ್ದಾರೆ.

ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಗೆ ಲಿಖಿತ ಆದೇಶ ನೀಡಿರುವ ಅರಣ್ಯ ಸಚಿವರು, ಮಲೆಮಹದೇಶ್ವರ ಬೆಟ್ಟದ ಕಾನನದ ಹನೂರು ವಲಯದ, ಹನೂರು ಗಸ್ತಿನಲ್ಲಿರುವ ಪಚ್ಚೆದೊಡ್ಡಿ ಗ್ರಾಮದ ಬಳಿ ಗುರುವಾರ ಹುಲಿಯ ಅರ್ಧ ಕಳೇಬರ ಪತ್ತೆಯಾಗಿರುವ ಬಗ್ಗೆ ಪಿಸಿಸಿಎಫ್ ಸ್ಮಿತಾ ಬಿಜ್ಜೂರು ನೇತೃತ್ವದಲ್ಲಿ ತಂಡವೊಂದನ್ನು ರಚಿಸಬೇಕು. ತನಿಖಾ ತಂಡ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಲು ಆದೇಶಿಸುವಂತೆ ಸೂಚಿಸಿದ್ದಾರೆ.

ಈ ಕಾನನದಲ್ಲಿ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಕಳ್ಳಬೇಟೆ ಪ್ರಕರಣಗಳ ಬಗ್ಗೆಯೂ ಗಮನಹರಿಸಿ, ಹಿಂದಿನ ತನಿಖಾ ವರದಿಗಳನ್ನೂ ಪರಾಮರ್ಶಿಸಿ ಮುಂದೆ ಈ ಭಾಗದಲ್ಲಿ ಇಂತಹ ಘಟನೆ ಮರುಕಳಿಸದಂತೆ ಕ್ರಮ ವಹಿಸಲು, ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಹಾಗೂ ಕಳ್ಳಬೇಟೆಗಾರರ ವಿರುದ್ಧ ಸೂಕ್ತ ಕ್ರಮದ ಶಿಫಾರಸಿನೊಂದಿಗೆ ಎಂಟು ದಿನಗಳಲ್ಲಿ ವರದಿ ಸಲ್ಲಿಸಲು ಮತ್ತು ಹುಲಿ ಹಂತಕರನ್ನು ಪತ್ತೆ ಮಾಡಿ ಅವರಿಗೆ ಕಾನೂನು ರೀತ್ಯ ದಂಡನೆ ಕೊಡಿಸಲು ತುರ್ತು ಕ್ರಮ ವಹಿಸಲು ಆದೇಶ ಹೊರಡಿಸುವಂತೆ ಈಶ್ವರ ಖಂಡ್ರೆ ಸೂಚಿಸಿದ್ದಾರೆ.

ಈ ಘಟನೆ ಮಲೆಮಹದೇಶ್ವರ ಬೆಟ್ಟದ ವನ್ಯಜೀವಿ ಧಾಮದಲ್ಲಿ ನಿರಂತರವಾಗಿ ವನ್ಯಜೀವಿಗಳ ಕಳ್ಳಬೇಟೆ ನಡೆಯುತ್ತಿರುವುದನ್ನು ದೃಢಪಡಿಸುತ್ತಿದ್ದು, ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಇನ್ನು ಮುಂದೆ ಇಂತಹ ಘಟನೆ ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಲು ಸಚಿವರು ಸೂಚಿಸಿದ್ದಾರೆ.

Tags

tiger deadbody foundTiger death caseinvestigationEshwar Khandre
share
ವಾರ್ತಾಭಾರತಿ
ವಾರ್ತಾಭಾರತಿ
Next Story
X