ಚಾಮರಾಜನಗರ | ಲಾರಿ-ಬೈಕ್ ಢಿಕ್ಕಿ : ಸವಾರ ಸ್ಥಳದಲ್ಲಿ ಮೃತ್ಯು

ಚಾಮರಾಜನಗರ : ಲಾರಿ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಸವಾರರೊಬ್ಬರು ಸ್ಥಳದಲ್ಲಿ ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ಸಮೀಪದ ಆರ್.ಎಸ್ ದೊಡ್ಡಿ ಬಳಿಯ ಅಗ್ನಿಶಾಮಕ ಠಾಣೆಯ ಬಳಿ ನಡೆದಿದೆ.
ಮೃತರನ್ನು ಬೆಂಗಳೂರಿನ ಲಗ್ಗೆರೆ ನಿವಾಸಿ ಗಣೇಶ (30) ಎಂದು ಗುರುತಿಸಲಾಗಿದೆ.
ಗಣೇಶ ಅವರು ಸ್ನೇಹಿತ ನಾಗರಾಜು ಅವರೊಂದಿಗೆ ಬೈಕ್‌ನಲ್ಲಿ ರಾತ್ರಿ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ವೇಳೆ, ಅಗ್ನಿಶಾಮಕ ಠಾಣೆ ಸಮೀಪ ಎದುರು ದಿಕ್ಕಿನಿಂದ ಬಂದ ಲಾರಿ ಬೈಕ್‌ಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಗಣೇಶ ಸ್ಥಳದಲ್ಲೇ ಮೃತಪಟ್ಟಿದ್ದು, ನಾಗರಾಜು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಗಾಯಾಳು ನಾಗರಾಜು ಅವರನ್ನು ಕೊಳ್ಳೇಗಾಲ ಸರ್ಕಾರಿ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.
Next Story





