ಚಾಮರಾಜನಗರ : ಹಾವು ಕಚ್ಚಿ ಶಾಲಾ ಬಾಲಕಿ ಮೃತ್ಯು

ಚಾಮರಾಜನಗರ : ಹಾವು ಕಚ್ಚಿ 10ವರ್ಷದ ಬಾಲಕಿಯೋರ್ವಳು ಮೃತಪಟ್ಟ ಘಟನೆ ಹನೂರು ತಾಲೂಕಿನ ಬಿದರಹಳ್ಳಿ ಗ್ರಾಮದಲ್ಲಿ ರವಿವಾರ ನಡೆದಿದೆ.
ಹನೂರು ತಾಲೂಕಿನ ಕೀರನಹೊಲ ಗ್ರಾಮದ ನಾಗ ಅವರ ಪುತ್ರಿ ಐಶ್ವರ್ಯಾ(10) ಮೃತ ಬಾಲಕಿ. ಶಾಲೆಗೆ ರಜೆ ಇದ್ದ ಕಾರಣ ಬಾಲಕಿ ಬಿದರಹಳ್ಳಿ ಗ್ರಾಮದ ಅಜ್ಜಿ ಮನೆಗೆ ಹೋಗಿದ್ದಳು. ಸಾರ್ವಜನಿಕ ನಳ್ಳಿಯ ಬಳಿ ನೀರು ತರಲು ಹೋಗಿದ್ದ ವೇಳೆ ಹಾವು ಕಚ್ಚಿದೆ. ಇದರಿಂದ ಅಸ್ವಸ್ಥಗೊಂಡ ಬಾಲಕಿಯನ್ನು ಕುಟುಂಬಸ್ಥರು ಸಮೀಪದ ಸುಳವಾಡಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಬಳಿಕ ಕಾಮಗೆರೆ ಖಾಸಗಿ ಆಸ್ಪತ್ರೆಗೆ ಕರೆ ತರುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.
ತಡರಾತ್ರಿ ಮೃತದೇಹವನ್ನು ಹನೂರಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಂದ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಲಾಯಿತು. ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Next Story