Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಾಮರಾಜನಗರ
  4. ಚಾಮರಾಜನಗರ: ಮಧ್ಯಾಹ್ನದ ಬಿಸಿಯೂಟ ಸೇವಿಸಿ...

ಚಾಮರಾಜನಗರ: ಮಧ್ಯಾಹ್ನದ ಬಿಸಿಯೂಟ ಸೇವಿಸಿ ಅಸ್ವಸ್ಥಗೊಂಡ 31 ಮಂದಿ ವಿದ್ಯಾರ್ಥಿಗಳು; ಆಸ್ಪತ್ರೆಗೆ ದಾಖಲು

ವಾರ್ತಾಭಾರತಿವಾರ್ತಾಭಾರತಿ16 March 2024 3:19 PM IST
share
ಚಾಮರಾಜನಗರ: ಮಧ್ಯಾಹ್ನದ ಬಿಸಿಯೂಟ ಸೇವಿಸಿ ಅಸ್ವಸ್ಥಗೊಂಡ 31 ಮಂದಿ ವಿದ್ಯಾರ್ಥಿಗಳು; ಆಸ್ಪತ್ರೆಗೆ ದಾಖಲು

ಚಾಮರಾಜನಗರ, ಮಾರ್ಚ್, 15: ಮಧ್ಯಾಹ್ನದ ಬಿಸಿಯೂಟ ಸೇವಿಸಿ ಸುಮಾರು 31 ಮಕ್ಕಳು ಅಸ್ವಸ್ಥರಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಚಿರಕನಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದಿರುವ ಬಗ್ಗೆ ವರದಿಯಾಗಿದೆ.

ಚಿರಕನಹಳ್ಳಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1ರಿಂದ 7ನೇ ತರಗತಿಯಲ್ಲಿ ಒಟ್ಟು 35 ಮಂದಿ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ಇದರಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕೆ ತಯಾರಿಸಿದ್ದ ಮೊಳಕೆಯೊಡೆದ ಹುರುಳಿ ಕಾಳಿನ ಸಾಂಬರ್ ಸೇವಿಸಿ 14 ಮಂದಿ ಮಕ್ಕಳಿಗೆ ವಾಂತಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಕೂಡಲೇ ವಿದ್ಯಾರ್ಥಿಗಳನ್ನು ಬೊಮ್ಮನಹಳ್ಳಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಮಕ್ಕಳು ಅಪಾಯಾದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಉಳಿದ 17 ಮಂದಿ ವಿದ್ಯಾರ್ಥಿಗಳಿಗೆ ಮಾತ್ರೆ ನೀಡಿ ಮನೆಗೆ ಕಳುಹಿಸಲಾಗಿದ್ದು, ನಂತರ ಪೋಷಕರ ಒತ್ತಾಯದ ಮೇರೆಗೆ ಅಸ್ವಸ್ಥಗೊಂಡಿದ್ದ 14 ಮಕ್ಕಳು ಹಾಗೂ ಮನೆಗೆ ತೆರಳಿದ್ದ 17 ಮಂದಿ ಸೇರಿದಂತೆ ಒಟ್ಟು 31 ಮಕ್ಕಳನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ವಾಸನೆ ಬರುತ್ತಿದ್ದ ಸಾಂಬರ್: ಮಧ್ಯಾಹ್ನದ ಬಿಸಿಯೂಟಕ್ಕೆ ತಯಾರಿಸಿದ್ದ ಹುರುಳಿ ಕಾಳನ್ನು ನಾಲ್ಕೈದು ದಿನಗಳ ಹಿಂದೆಯೇ ಮೊಳಕೆಗೆ ಕಟ್ಟಿ ಇಡಲಾಗಿತ್ತು. ಇದರಿಂದ ಮೊಳಕೆ ಕಾಳು ವಾಸನೆ ಬರುತ್ತಿತ್ತು. ಅದನ್ನೇ ಹಾಕಿ ಸಾಂಬರ್ ಮಾಡಿದ ನಂತರವೂ ಹೆಚ್ಚಿನ ವಾಸನೇ ಸೂಸುತ್ತಿತ್ತು. ಹೀಗಿದ್ದರೂ ಕೂಡ ಅಡುಗೆಯವರು ಸಾಂಬರ್ ಮಾಡಿ ಬಡಿಸಿದ ಕಾರಣ ಮಕ್ಕಳು ಅದನ್ನು ಸೇವನೆ ಮಾಡಿದ್ದಾರೆ. ವಾಸನೆ ಬರುತ್ತಿರುವ ಕುರಿತು ಮಕ್ಕಳೇ ನಮಗೆ ಹೇಳಿದ್ದಾರೆ ಎಂದು ಪೋಷಕರಾದ ಸುರೇಶ್ ಎಂಬವರು ಆರೋಪಿಸಿದ್ದಾರೆ.

ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ: ಚಿರಕನಹಳ್ಳಿ ಶಾಲೆಯಲ್ಲಿ ಮಕ್ಕಳು ಬಿಸಿಯೂಟ ಸೇವಿಸಿ ಅಸ್ವಸ್ಥಗೊಂಡ ಮಾಹಿತಿ ತಿಳಿದ ಕ್ಷೇತ್ರ ಶಿಕ್ಷಣಾಧಿಕಾರಿ ರಾಜಶೇಖರ್ ಶಾಲೆಗೆ ಭೇಟಿ ನೀಡಿ, ಮಕ್ಕಳು ಸೇವಿಸಿರುವ ಅಡುಗೆಯ ಸ್ಯಾಂಪಲ್ ಪಡೆದು ಪರೀಕ್ಷೆಗೆ ಕಳುಹಿಸಿದ್ದಾರೆ. ಜೊತೆಗೆ ಮಕ್ಕಳ ಆರೋಗ್ಯ ವಿಚಾರಣೆ ನಡೆಸಿ ಸೂಕ್ತ ಚಿಕಿತ್ಸೆ ಕೊಡಿಸಲು ಮುಂದಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X