ಚಾಮರಾಜನಗರ: ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಚಿರತೆ ಸೆರೆ

ಚಾಮರಾಜನಗರ : ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಇಂಡಿಗನತ್ತ ಸಮೀಪ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆಯೊಂದು ಸೆರೆ ಸಿಕ್ಕಿದೆ. ಕಳೆದ 15 ದಿನಗಳಿಂದ ಅರಣ್ಯ ಸಿಬ್ಬಂದಿ ನಡೆಸುತ್ತಿದ್ದ ಕಾರ್ಯಾಚರಣೆ ಇದೀಗ ಯಶಸ್ವಿಯಾಗಿದೆ.
ಕೆಲವು ದಿನಗಳ ಹಿಂದೆ ನಾಗಮಲೆ ಪ್ರದೇಶಕ್ಕೆ ತೆರಳುತ್ತಿದ್ದ ವೇಳೆ ಬೆಂಗಳೂರಿನ ಮೂಲದ ಬಾಲಕನನ್ನು ಎಳೆದೊಯ್ದು ಕೊಂದಿದ್ದ ಚಿರತೆ ಇದೇ ಎಂಬ ಶಂಕೆ ವ್ಯಕ್ತವಾಗಿತ್ತು. ಅಲ್ಲದೆ, ಸ್ಥಳೀಯ ಗ್ರಾಮಗಳಲ್ಲಿ ಮೇಕೆಗಳ ಮೇಲೂ ದಾಳಿ ನಡೆಸಿದ್ದರಿಂದ ಗ್ರಾಮಸ್ಥರಲ್ಲಿ ಭೀತಿ ಹೆಚ್ಚಾಗಿತ್ತು.
ಮೊದಲ ದಿನವೇ ಕ್ಯಾಮೆರಾ ಟ್ರ್ಯಾಪ್‌ನಲ್ಲಿ ಚಿರತೆ ಕಾಣಿಸಿಕೊಂಡಿದ್ದರೂ, ಬಳಿಕ ಬೋನಿಗೆ ಬೀಳದೆ ತಪ್ಪಿಸಿಕೊಳ್ಳುತ್ತಿತ್ತು. ಆದರೆ ಇದೀಗ ರಾತ್ರೋರಾತ್ರಿ ಬೋನಿಗೆ ಸೆರೆ ಸಿಕ್ಕಿದೆ.
Next Story




