ಚಾಮರಾಜನಗರ: ವ್ಯಕ್ತಿಯೋರ್ವನ ಮೇಲೆ ಹುಲಿ ದಾಳಿ

ಚಾಮರಾಜನಗರ: ಬಿಳಿಗಿರಿ ರಂಗನಾಥ ಹುಲಿ ಸಂರಕ್ಷಿತ ಪ್ರದೇಶದ ಬೇಡಗುಳಿ ಸಮೀಪದ ರಾಮಯ್ಯನ ಪೋಡಿ ಎಂಬಲ್ಲಿ ಹುಲಿಯೊಂದು ವ್ಯಕ್ತಿಯೊಬ್ಬನ ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ.
ಚಾಮರಾಜನಗರ ತಾಲೂಕಿನ ಪುಣಜನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಡಗುಳಿಯ ರಾಮಯ್ಯನ ಪೋಡಿಯಲ್ಲಿ ಸೋಮವಾರ ಮುಸ್ಸಂಜೆ ವೇಳೆ ರವಿ(34) ಎಂಬವರ ಮೇಲೆ ಹುಲಿ ದಾಳಿ ನಡೆಸಿದೆ., ಇದರಿಂದ ರವಿಯವರ ತಲೆ, ಕೈ ಹಾಗೂ ಕಾಲುಗಳಿಗೆ ತೀವ್ರತರದ ಗಾಯಗಳಾಗಿವೆ.
ವಿಷಯ ತಿಳಿದ ರಣ್ಯ ಇಲಾಖೆಯ ಚಾಮರಾಜನಗರ ವೃತ್ತ ಅರಣ್ಯಾಧಿಕಾರಿ ಹಿರಲಾಲ್, ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಪತಿ ಸ್ಥಳಕ್ಕಾ ಆಗಮಿಸಿ ರವಿಯನ್ನು ಚಾಮರಾಜನಗರ ಸರಕಾರಿ ಭೋದನಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳು ಚೇತರಿಸಿಕೊಳ್ಳುತ್ತಿದ್ದಾರೆ.
ಸದ್ಯ ಹುಲಿ ದಾಳಿಯ ಸ್ಥಳದ ಸುತ್ತ ಮುತ್ತಲು ಸಾರ್ವಜನಿಕರು ತಿರುಗಾಡುವುದನ್ನು ನಿಷೇಧಿಸಲಾಗಿದೆ. ಇಲ್ಲಿ ವಾಸ ಮಾಡುವ ಕುಟುಂಬಗಳಿಗೆ ದಾಳಿ ಮಾಡಿದ ಹುಲಿ ಸೆರೆಯಾಗುವ ತನಕ ತಾತ್ಕಾಲಿಕವಾಗಿ ಆಶ್ರಮ ಶಾಲೆಯಲ್ಲಿ ಆಶ್ರಯ ನೀಡುವಂತೆ ನಿವಾಸಿಗಳು ಮನವಿ ಮಾಡಿದ್ದಾರೆ.
ಹುಲಿ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆಯನ್ನು ಆರಂಭಿಸಿದೆ.
ಹುಲಿ ದಾಳಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರವಿಯವರನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿ ಎಚ್.ಎಸ್. ಬಿಂದ್ಯಾ ಬೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಬೇಡಗುಳಿಯ ರಾಮಯ್ಯನ ಪೋಡಿನಲ್ಲಿ ಸೋಮವಾರ ಮುಸ್ಸಂಜೆ ಹುಲಿ ದಾಳಿಯಿಂದ ರವಿ ಎಂಬವರು ತೀವ್ರ ಸ್ವರೂಪದ ಗಾಯಗೊಂಡಿದ್ದಾರೆ. ಹುಲಿ ದಾಳಿ ನಡೆಸಿದ ಸ್ಥಳದಲ್ಲಿ ಮೂರು ಕುಟುಂಬಗಳಿದ್ದು, ಅವರನ್ನು ಸಮೀಪದ ಆಶ್ರಮ ಶಾಲೆಯಲ್ಲಿ ಆಶ್ರಯ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಹಾಗೂ ಕೆಲ ದಿನಗಳ ತನಕ ಆಶ್ರಮ ಶಾಲೆಯಲ್ಲಿ ವ್ಯಾಸಾಂಗ ಮಾಡುವ ಮಕ್ಕಳು ಮತ್ತು ಶಿಕ್ಷಕ ಸಿಬ್ಬಂದಿ ಆಶ್ರಮ ಶಾಲೆಯಿಂದ ಹೊರ ಬರದಂತೆ ಸೂಚನೆ ನೀಡಲಾಗಿದೆ.
-ಎಚ್.ಎಸ್.ಬಿಂದ್ಯಾ
ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು
ಚಾಮರಾಜನಗರ