ಚಾಮರಾಜನಗರ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ

ಕಾಡಾನೆ ದಾಳಿಯಿಂದ ಗಾಯಗೊಂಡ ರೈತ
ಚಾಮರಾಜನಗರ: ಕಾಡಾನೆ ದಾಳಿಯಿಂದ ರೈತನೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ಬೆಳಗಿನ ಜಾವ ಹನೂರು ತಾಲೂಕಿನ ಕೂಡ್ಲೂರು ಗ್ರಾಮದಲ್ಲಿ ನಡೆದಿದೆ.
ಬೆಳಿಗ್ಗೆ ಸುಮಾರು 4 ಗಂಟೆ ವೇಳೆಗೆ ಮಾದಪ್ಪ ಎಂಬ ರೈತ ತಮ್ಮ ಜಮೀನಿನಲ್ಲಿ ನೀರು ಕಟ್ಟುವ ಕೆಲಸದಲ್ಲಿ ನಿರತರಾಗಿದ್ದಾಗ, ಏಕಾಏಕಿ ಮಲೆಮಹದೇಶ್ವರ ವನ್ಯಧಾಮದಿಂದ ಹೊರಬಂದ ಕಾಡಾನೆ ದಾಳಿ ನಡೆಸಿದೆ. ದಾಳಿಯ ಪರಿಣಾಮ ಮಾದಪ್ಪ ಅವರ ಕಾಲು ಮುರಿದು ತೀವ್ರ ಗಾಯಗೊಂಡಿದ್ದಾರೆ.
ಗಾಯಾಳು ರೈತನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಈ ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಕಾಡಾನೆ ದಾಳಿಯಿಂದ ಗಾಯಗೊಂಡ ರೈತನಿಗೆ ಸರ್ಕಾರದಿಂದ ಸೂಕ್ತ ಚಿಕಿತ್ಸೆ ಹಾಗೂ ತಕ್ಷಣ ಪರಿಹಾರ ಒದಗಿಸಬೇಕೆಂದು ಸ್ಥಳೀಯರು ಹಾಗೂ ರೈತ ಸಂಘಟನೆ ಅಧ್ಯಕ್ಷ ಅಮ್ಜದ್ ಖಾನ್ ಆಗ್ರಹಿಸಿದ್ದಾರೆ.
Next Story





