Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಾಮರಾಜನಗರ
  4. ಸಹಕಾರ ಸಂಘದ ನೇಮಕಾತಿಗಳಲ್ಲಿ ಸಹಕಾರ ಪದವಿ...

ಸಹಕಾರ ಸಂಘದ ನೇಮಕಾತಿಗಳಲ್ಲಿ ಸಹಕಾರ ಪದವಿ ಪಡೆದವರಿಗೆ ಆದ್ಯತೆ : ಸಿಎಂ ಸಿದ್ದರಾಮಯ್ಯ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ20 Nov 2025 3:47 PM IST
share
ಸಹಕಾರ ಸಂಘದ ನೇಮಕಾತಿಗಳಲ್ಲಿ ಸಹಕಾರ ಪದವಿ ಪಡೆದವರಿಗೆ ಆದ್ಯತೆ : ಸಿಎಂ ಸಿದ್ದರಾಮಯ್ಯ ಘೋಷಣೆ
ʼ72ನೇ ಅಖಿಲ ಭಾರತ ಸಹಕಾರ ಸಪ್ತಾಹʼ

ಚಾಮರಾಜನಗರ : ಗ್ರಾಮೀಣ ಭಾರತದ ಆರ್ಥಿಕ ಅಭಿವೃದ್ಧಿಗೆ ಪ್ರತೀ ಗ್ರಾಮದಲ್ಲಿ ಒಂದು ಶಾಲೆ, ಒಂದು ಗ್ರಾಮ ಪಂಚಾಯ್ತಿ, ಒಂದು ಸಹಕಾರ ಸಂಘ ಅತ್ಯಗತ್ಯ ಎನ್ನುವುದು ನೆಹರೂ ಅವರ ದೃಷ್ಟಿಯಾಗಿತ್ತು. ಇವರ ಈ ದೂರದೃಷ್ಟಿಯ ಕಾರಣಕ್ಕೆ ದೇಶದಲ್ಲಿ ಸಹಕಾರ ಚಳವಳಿ ಗಟ್ಟಿಯಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಉದ್ಘಾಟಿಸಿ, ಸಮಾರೋಪ ಮಾತುಗಳನ್ನಾಡಿದರು.

ನೆಹರೂ ಅವರ ಈ ದೂರದೃಷ್ಟಿ ಕಾರಣಕ್ಕೆ ಅವರ ಜನ್ಮ ದಿನದಂದೇ ಪ್ರತೀ ವರ್ಷ ಸಹಕಾರ ಸಪ್ತಾಹ ಉದ್ಘಾಟನೆಯಾಗುತ್ತದೆ ಎಂದರು.

ಇಂದು ರಾಜ್ಯದಲ್ಲಿ ಕೃಷಿ, ಹೈನುಗಾರಿಕೆ, ಕೈಗಾರಿಕೆ, ಬ್ಯಾಂಕಿಂಗ್ ಸೇರಿ ಹಲವಾರು ಕ್ಷೇತ್ರಗಳಲ್ಲಿ ಸಹಕಾರಿ ಚಳವಳಿ, ಸಹಕಾರಿ ಸಂಘಗಳು ಬೆಳೆಯುತ್ತಲೇ ಇವೆ. ಇದು ಆರೋಗ್ಯಕಾರಿ ಬೆಳವಣಿಗೆ ಎಂದರು.

ನಾನು ಪಶು ಸಂಗೋಪನಾ ಸಚಿವನಾಗಿದ್ದಾಗ ಹಾಲು ಉತ್ಪಾದಕರ ಸಹಕಾರ ಸಂಘಗಳ ಸ್ವಾಯತ್ತತೆ ಮತ್ತು ಸ್ವಾವಲಂಭನೆಗೆ ಪೂರ್ಣ ಸಹಕಾರ ನೀಡಿದ್ದೆ. ಈಗ ಒಂದು ದಿನಕ್ಕೆ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ನಾನು ಹಾಲು ಉತ್ಪಾದಕರ ಅನುಕೂಲಕ್ಕಾಗಿ ಲೀಟರ್ ಗೆ 5ರೂ ನಂತೆ ಒಂದು ದಿನಕ್ಕೆ 5 ಕೋಟಿ ರೂಪಾಯಿ ಸಹಾಯ ಧನವನ್ನು ರೈತರಿಗೆ ನಮ್ಮ ಸರಕಾರದಿಂದ ನೀಡಲಾಗುತ್ತಿದೆ. ನಾವು ಎರಡು ಬಾರಿ ಹಾಲಿನ ದರವನ್ನು ಹೆಚ್ಚಿಸಿದರೂ ಆ ಹೆಚ್ಚುವರಿ ಹಣ ಹಾಲು ಉತ್ಪಾದಕರಿಗೇ ಹೋಗಬೇಕು ಎಂದು ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದರು.

ನಾನು ಮುಖ್ಯಮಂತ್ರಿ ಆದಾಗಿನಿಂದ ಎಲ್ಲಾ ಜಾತಿ, ಎಲ್ಲಾ ಧರ್ಮದ ಜನರ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡುತ್ತಿದ್ದೇವೆ‌. ಚಾಮರಾಜನಗರ ಜಿಲ್ಲೆಯ ಎಲ್ಲಾ ಜಾತಿಯ, ಎಲ್ಲಾ ಧರ್ಮದವರೂ ನನಗೆ ಸಹಕಾರ ಕೊಟ್ಟಿದ್ದಾರೆ. ಹೀಗಾಗಿ ಚಾಮರಾಜನಗರ ಜಿಲ್ಲೆಯನ್ನು ನಾನು ಯಾವತ್ತೂ ಮರೆಯುವುದಿಲ್ಲ ಎಂದರು.

ಚಾಮರಾಜನಗರಕ್ಕೆ ಅನೇಕ ಸಾರಿ ಬಂದಿದ್ದೀನಿ. ಈ ಜಿಲ್ಲೆಗೆ ಬಂದ್ರೆ ಮಂತ್ರಿ ಸ್ಥಾನ ಹೋಗ್ತದೆ ಅನ್ನೋ ಕೆಟ್ಟ ಮೌಡ್ಯ ಇದೆ. ಆದರೆ ಇಲ್ಲಿಗೆ ಬಂದು ಹೋದಷ್ಟೂ ನನ್ನ ಸ್ಥಾನ ಮಾತ್ರವಲ್ಲ, ನಮ್ಮ ಪಕ್ಷದ ಅಧಿಕಾರವೂ ಮತ್ತೆ ಮತ್ತೆ ಗಟ್ಟಿ ಆಗಿದೆ ಎಂದರು.

ಸಹಕಾರ ಪದವಿ ಪಡೆದವರಿಗೆ ಆದ್ಯತೆ :

ಸಹಕಾರ ಸಂಘದ ನೇಮಕಾತಿಗಳಲ್ಲಿ ಸಹಕಾರ ಡಿಪ್ಲೋಮಾ, ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು ಪಠ್ಯಗಳಲ್ಲಿ ಸಹಕಾರಿ ತತ್ವದ ಮಹತ್ವವನ್ನು ಅಳವಡಿಸಲಾಗುವುದು ಎಂದು ಘೋಷಿಸಿದರು.

ನಾನು ಜೆಡಿಎಸ್ ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗುತ್ತಿರಲಿಲ್ಲ :

ನಾನು ಜೆಡಿಎಸ್ ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗುತ್ತಿರಲಿಲ್ಲ. ದೇವೇಗೌಡರು ಮತ್ತು ಅವರ ಮಕ್ಕಳು ನನ್ನನ್ನು ಮುಖ್ಯಮಂತ್ರಿ ಮಾಡಲು ಬಿಡುತ್ತಿರಲಿಲ್ಲ ಎಂದರು.

ಸಹಕಾರಿ ಚಳವಳಿಯಲ್ಲಿದ್ದ ಜಿ.ಟಿ.ದೇವೇಗೌಡರು ಈಗಲೂ ಜೆಡಿಎಸ್ ನಲ್ಲಿ ಇದ್ದಾರೆ. ಆದರೆ ನನ್ನ ಪರವಾಗಿಯೇ ಇದ್ದಾರೆ. ಜಿ.ಟಿ.ದೇವೇಗೌಡರು 2006ರ ವರೆಗೂ ನನ್ನ ಜೊತೆಗೇ ಇದ್ದರು‌. ಜೆಡಿಎಸ್ ನಿಂದ ನನ್ನನ್ನು ಉಚ್ಚಾಟಿಸಿದ ಮೇಲೆ ಜಿ.ಟಿ.ದೇವೇಗೌಡರು ಅಲ್ಲೇ ಉಳಿದು ಬಿಟ್ಟರು. ಈಗ ಮತ್ತೆ ಒಂದು ರೀತಿಯಲ್ಲಿ ನಮ್ಮ ಜೊತೆಗೇ ಇದ್ದಾರೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X