Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಾಮರಾಜನಗರ
  4. 5 ಹುಲಿಗಳ ಸಾವು ಪ್ರಕರಣ: ಎಸಿಎಫ್,...

5 ಹುಲಿಗಳ ಸಾವು ಪ್ರಕರಣ: ಎಸಿಎಫ್, ಆರ್.ಎಫ್.ಓ. ಅಮಾನತು

ಡಿಸಿಎಫ್ ಚಕ್ರಪಾಣಿ ಅಮಾನತಿಗೆ ಅರಣ್ಯ ಸಚಿವರ ಶಿಫಾರಸು

ವಾರ್ತಾಭಾರತಿವಾರ್ತಾಭಾರತಿ5 July 2025 8:55 AM IST
share
5 ಹುಲಿಗಳ ಸಾವು ಪ್ರಕರಣ: ಎಸಿಎಫ್, ಆರ್.ಎಫ್.ಓ. ಅಮಾನತು

ಚಾಮರಾನಗರ: ಮಲೆ ಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಬಳಿ 5 ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಎಸಿಎಫ್ ಗಜಾನನ ಹೆಗಡೆ ಮತ್ತು ಆರ್.ಎಫ್.ಓ. ಮಾದೇಶ ಅವರನ್ನು ಅಮಾನತು ಮಾಡಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ, ಡಿಸಿಎಫ್ ಚಕ್ರಪಾಣಿ ಅಮಾನತಿಗೂ ಶಿಫಾರಸು ಮಾಡಿದ್ದಾರೆ.

ಉನ್ನತ ಮಟ್ಟದ ವಿಚಾರಣಾ ಸಮಿತಿಯ ಪ್ರಾಥಮಿಕ ವರದಿ ಸ್ವೀಕರಿಸಿ, ಪರಾಮರ್ಶಿಸಿದ ಸಚಿವರು, ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಮೇಲ್ನೋಟಕ್ಕೆ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಕರ್ತವ್ಯಲೋಪ ಕಂಡುಬಂದಿರುವ ಹಿನ್ನೆಲೆಯಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ವಲಯ ಅರಣ್ಯಾಧಿಕಾರಿ ಅಮಾನತು ಮಾಡಿ, ಡಿಸಿಎಫ್ ಚಕ್ರಪಾಣಿ ಭಾರತೀಯ ಅರಣ್ಯ ಸೇವೆಗೆ ಸೇರಿದ ಅಧಿಕಾರಿಯಾಗಿರುವುದರಿಂದ ಸಿಬ್ಬಂದಿ ಮತ್ತು ಆಡಳಿತ ಇಲಾಖೆಗೆ ಅಮಾನತು ಮಾಡಲು ಪ್ರಸ್ತಾವನೆ ಕಳುಹಿಸಲಾಗಿದೆ. ಐ.ಎಫ್.ಎಸ್. ಅಧಿಕಾರಿ ಚಕ್ರಪಾಣಿ ಅಮಾನತಿಗೆ ಶಿಫಾರಸು ಮಾಡಿದ್ದಾರೆ.

ವೇತನ ಪಾವತಿಸದಿರುವುದೂ ಕರ್ತವ್ಯಲೋಪ: ಹೊರಗುತ್ತಿಗೆ ಸಿಬ್ಬಂದಿಗೆ ವೇತನ ಪಾವತಿ ಮಾಡಲು ಏಪ್ರಿಲ್ ತಿಂಗಳಾಂತ್ಯಕ್ಕೇ ಹಣ ಬಿಡುಗಡೆಯಾಗಿದ್ದರೂ, ಜೂನ್ ತಿಂಗಳವರೆಗೆ ವೇತನ ಪಾವತಿಸದಿರುವುದು ಉಪ ಅರಣ್ಯ ಸಂರಕ್ಷಣಾಧಿಕಾರಿ ಚಕ್ರಪಾಣಿ ವೈ ಅವರ ಮೂಲಭೂತ ಕರ್ತವ್ಯ ಲೋಪವಾಗಿದ್ದು, ಇದು ಗಸ್ತು ಕಾರ್ಯಕ್ಕೆ ಹಿನ್ನಡೆ ಉಂಟು ಮಾಡಿದೆ ಈ ಸಂಬಂಧ ಉಪ ಅರಣ್ಯ ಸಂರಕ್ಷಣಾಧಿಕಾರಿ ಚಕ್ರಪಾಣಿ ವೈ ಅಮಾನತಿಗೆ ಶಿಫಾರಸು ಮಾಡಿ, ಇಲಾಖಾ ವಿಚಾರಣೆ ಮಾಡಲು ಶಿಫಾರಸು ಮಾಡಿದ್ದಾರೆ.

ಹೊರಗುತ್ತಿಗೆ ಸಿಬ್ಬಂದಿ ಮಾರ್ಚ್ ನಿಂದ 3 ತಿಂಗಳ ವೇತನ ಪಾವತಿ ಆಗಿಲ್ಲ ಎಂದು ಜೂನ್ 23ರಂದು ಪ್ರತಿಭಟನೆ ನಡೆಸಿದ್ದರು. ಸಕಾಲದಲ್ಲಿ ವೇತನ ಸಿಗದೆ ಮುಂಚೂಣಿಯ ಸಿಬ್ಬಂದಿ ಕರ್ತವ್ಯ ವಿಮುಖರಾಗಲು ಕಾರಣವಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ.

ಸುಮಾರು 11 ವರ್ಷದ ತಾಯಿ ಹುಲಿ ಮತ್ತು 10-11 ತಿಂಗಳ 4 ಮರಿ ಹುಲಿಗಳ ಸಾವಿಗೆ ಹುಲಿ ದಾಳಿ ಮಾಡಿ ಕೊಂದ ಹಸುವಿನ ಮೃತದೇಹದ ಒಳಗೆ ಸೇಡು ತೀರಿಸಿಕೊಳ್ಳಲು ಸಿಂಪಡಿಸಲಾದ ರಾಸಾಯನಿಕ ಸಂಯುಕ್ತ ಕಾರಣ ಎಂಬುದು ಪ್ರಾಥಮಿಕ ತನಿಖಾ ವರದಿಯಿಂದ ತಿಳಿದುಬಂದಿದೆ.

ಗಸ್ತು ಸಿಬ್ಬಂದಿಯ ಕಾರ್ಯಕ್ಷಮತೆಯ ಮೇಲೆ ಸಂಬಂಧಿತ ವಲಯದ ಎ.ಸಿ.ಎಫ್, ಮತ್ತು ಆರ್.ಎಫ್.ಓ. ನಿಗಾ ಇಡುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಅರಣ್ಯ ರಕ್ಷಣೆಯ ತಮ್ಮ ಮೂಲಭೂತ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿರುತ್ತಾರೆ ಎಂದು ತಿಳಿಸಿರುವ ಈಶ್ವರ ಖಂಡ್ರೆ, ಎ.ಸಿ.ಎಫ್, ಮತ್ತು ಆರ್.ಎಫ್.ಓ. ಅಮಾನತು ಮಾಡಿ, ಇಲಾಖಾ ವಿಚಾರಣೆ ನಡೆಸಲು ಸೂಚನೆ ನೀಡಿದ್ದಾರೆ.

ಪ್ರಾಥಮಿಕ ತನಿಖಾ ವರದಿ ಸಲ್ಲಿಸಿರುವ ಅಪರ ಮುಖ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಕುಮಾರ್ ಪುಶ್ಕರ್ ನೇತೃತ್ವದ ಉನ್ನತ ಮಟ್ಟದ ಸಮಿತಿಯಲ್ಲಿ ವನ್ಯಜೀವಿ ವಿಭಾಗದ ಎಪಿಸಿಸಿಎಫ್ ಶ್ರೀನಿವಾಸುಲು, ಚಾಮರಾಜನಗರ ಸಿಸಿಎಫ್ ಹೀರಾಲಾಲ್, ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಎ.ಐ.ಜಿ ಹರಿಣಿ ವೇಣುಗೋಪಾಲ್, ವನ್ಯಜೀವಿ ತಜ್ಞ ಡಾ. ಸಂಜಯ್ ಗುಬ್ಬಿ ಮತ್ತು ಮೈಸೂರು ಮೃಗಾಲಯದ ಸಹಾಯಕ ನಿರ್ದೇಶಕ ಡಾ. ಶಶಿಧರ್ ಸದಸ್ಯರಾಗಿದ್ದರು.

ಈ ಸಮಿತಿಗೆ ಅಂತಿಮ ವರದಿಯನ್ನು ಇದೇ ತಿಂಗಳ 10ರೊಳಗೆ ಸಲ್ಲಿಸುವಂತೆಯೂ ಅರಣ್ಯ ಸಚಿವರು ಸೂಚಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X