Chamarajanagar | ಜೂಜಾಟ ಅಡ್ಡೆ ಮೇಲೆ ಪೊಲೀಸರ ದಾಳಿ : 12 ಮಂದಿಯ ಬಂಧನ

ಸಾಂದರ್ಭಿಕ ಚಿತ್ರ | PC : Gemini AI
ಚಾಮರಾಜನಗರ : ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಜೂಜಾಟ ಅಡ್ಡೆ ಮೇಲೆ ದಾಳಿ ನಡೆಸಿರುವ ಪೊಲೀಸರು 12 ಮಂದಿಯನ್ನು ಬಂಧಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಗುಂಬಳ್ಳಿ ಗ್ರಾಮದ ಬಳಿ ಜೂಜಾಟ ನಡೆಯುತ್ತಿರುವ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು ಈ ವೇಳೆ ಜೂಜಾಟದಲ್ಲಿ ತೊಡಗಿದ್ದ ಏಳು ಮಂದಿಯನ್ನು ವಶಕ್ಕೆ ಪಡೆದು, ಪಣವಾಗಿ ಇಟ್ಟಿದ್ದ 10,330 ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಯಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ತಾಲೂಕಿನ ಹೊನ್ನೂರು ಗ್ರಾಮದ ಕೆರೆಯ ಸಮೀಪ ಜೂಜಾಟ ನಡೆಸುತ್ತಿದ್ದ ಐವರು ವ್ಯಕ್ತಿಗಳ ಮೇಲೆ ದಾಳಿ ನಡೆಸಿ, ಅವರನ್ನು ವಶಕ್ಕೆ ಪಡೆದು, ಪಣವಾಗಿ ಇಟ್ಟಿದ್ದ 69,750 ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಯಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




