ಗುಂಡ್ಲುಪೇಟೆ: ವ್ಯಕ್ತಿಯೊಬ್ಬರ ಅನುಮಾನಾಸ್ಪದ ಸಾವು

ಚಾಮರಾಜನಗರ, ಜು.2: ವ್ಯಕ್ತಿಯೊಬ್ಬರ ಮೃತದೇಹ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿಯಲ್ಲಿ ನಡೆದಿದೆ.
ಮೃತರನ್ನು ನಾಗಯ್ಯ (53) ಎಂದು ಗುರುತಿಸಲಾಗಿದೆ. ಚೌಡಹಳ್ಳಿ ಗ್ರಾಮದ ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಸಾವಿನ ಬಗ್ಗೆ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಗುಂಡ್ಲುಪೇಟೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Next Story





