Gundlupete | ಜಮೀನಿನಲ್ಲಿ ಹುಲಿ ಕಳೇಬರ ಪತ್ತೆ

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ಜಮೀನೊಂದರಲ್ಲಿ ಹುಲಿಯ ಕಳೇಬರ ಪತ್ತೆಯಾಗಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ರೈತರೊಬ್ಬರ ಸೂರ್ಯಕಾಂತಿ ಜಮೀನಿನಲ್ಲಿ ಹುಲಿಯ ಕಳೇಬರ ಪತ್ತೆಯಾಗಿದ್ದು, ಫಸಲು ಕಟಾವಿಗೆ ಹೋದ ಸಂದರ್ಭದಲ್ಲಿ ಬೆಳಕಿಗೆ ಬಂದಿದೆ.
ಸ್ಥಳೀಯ ರೈತರು ಅರಣ್ಯ ಇಲಾಖೆಗೆ ತಿಳಿಸಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಬಫರ್ ವಲಯದ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಬಫರ್ ವಲಯದ ಅರಣ್ಯಾಧಿಕಾರಿ ಶಿವಕುಮಾರ್ ಪ್ರತಿಕ್ರಿಯಿಸಿ, ಹುಲಿ ಸಾವಿನ ಬಗ್ಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅರಣ್ಯ ಪಶುವೈದ್ಯಾಧಿಕಾರಿಗಳು ಭೇಟಿ ನೀಡಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕಾರಣ ತಿಳಿದು ಬರಲಿದೆ ಎಂದು ಹೇಳಿದರು.
Next Story




