Gundlupete | ಕಾಡಾನೆ ದಾಳಿ; ತೀವ್ರವಾಗಿ ಗಾಯಗೊಂಡಿದ್ದ ರೈತ ಮೃತ್ಯು

ಸಾಂದರ್ಭಿಕ ಚಿತ್ರ | PC : AI
ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಕೋಟೆಕೆರೆ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ಕಾಡಾನೆ ದಾಳಿ ನಡೆಸಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ರೈತ ಸಾವನ್ನಪ್ಪಿದ ಘಟನೆ ನಡೆದಿದೆ.
ಕೋಟೆಕೆರೆ ಗ್ರಾಮದ ಜೇನೂರು ನಾಯಕ ಅವರು ಸೋಮವಾರ ಬೆಳಗಿನ ಜಾವ ಆನೆ ದಾಳಿಗೆ ಒಳಗಾಗಿ ಗಂಭೀರವಾಗಿ ಗಾಯಗೊಂಡು, ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಕಾಡಂಚಿನ ಗ್ರಾಮಗಳಲ್ಲಿ ಮಾನವ–ವನ್ಯಜೀವಿ ಸಂಘರ್ಷ ಪದೇಪದೇ ನಡೆಯುತ್ತಿರುವ ಹಿನ್ನೆಲೆಯಲ್ಲಿ, ರೈತರು ಮತ್ತು ಗ್ರಾಮಸ್ಥರ ಸುರಕ್ಷತೆಗೆ ಸರಕಾರ ಹಾಗೂ ಅರಣ್ಯ ಇಲಾಖೆ ಇನ್ನಷ್ಟು ಪರಿಣಾಮಕಾರಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
Next Story




