ಹನೂರು: ಜಾಗೇರಿ ಬಳಿ ಕಳ್ಳಬೇಟೆ ತಡೆ ಶಿಬಿರ ದ್ವಂಸ; ಅರಣ್ಯ ಪ್ರದೇಶಕ್ಕೂ ಬೆಂಕಿ

ಚಾಮರಾಜನಗರ : ಸ್ವಾತಂತ್ರ್ಯ ದಿನಾಚರಣೆಯಂದು ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶಾಗ್ಯ ಗ್ರಾಮದ ಸಮೀಪದ ಮರಿಯಮಂಗಲ ಬೀಟ್‌ನಲ್ಲಿ ಅರಣ್ಯಾಧಿಕಾರಿಗಳ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ ಘಟನೆಯ ಹಿನ್ನೆಲೆಯಲ್ಲಿ ಕಳ್ಳಬೇಟೆ ತಡೆ ಶಿಬಿರಗಳ ಧ್ವಂಸ ಮುಂದುವರಿದಿರುವ ಬಗ್ಗೆ ವರದಿಯಾಗಿದೆ.
ಚಾಮರಾಜನಗರ ಜಿಲ್ಲೆಯ ಜಾಗೇರಿ ಸಮೀಪದ ಕಳ್ಳಬೇಟೆ ತಡೆ ಶಿಬಿರವನ್ನು ರೊಚ್ಚಿಗೆದ್ದ ಸಾರ್ವಜನಿಕರು ಧ್ವಂಸ ಮಾಡಿದ್ದಾರೆ. ಅಲ್ಲದೆ, ಬುಧವಾರ ರಾತ್ರಿ ಶಿಲಭೇಪುರದ ಸಮೀಪದ ಕಾಡಿಗೆ ಬೆಂಕಿ ಹಚ್ಚಲಾಗಿದೆ ಎನ್ನಲಾಗಿದೆ.
ರೊಚ್ಚಿಗೆದ್ದ ಜನರಿಂದ ಕಾಡಿಗೆ ಬೆಂಕಿ ತಗುಲಿದ ಪರಿಣಾಮ ಸುಮಾರು ನಾಲ್ಕೈದು ಹೆಕ್ಟೇರ್ ಅರಣ್ಯ ಪ್ರದೇಶ ಸುಟ್ಟುಹೋಗಿದೆ ಎಂದು ತಿಳಿದುಬಂದಿದೆ.
Next Story




