ಹನೂರು | ಅರಣ್ಯ ಪ್ರದೇಶದಲ್ಲಿ 2 ಹುಲಿ ಮರಿಗಳ ಕಳೇಬರ ಪತ್ತೆ

ಹನೂರು : ತಾಲೂಕಿನ ಕಾವೇರಿ ವನ್ಯಧಾಮ ವ್ಯಾಪ್ತಿಯ ಶಾಗ್ಯ ಶಾಖೆಯ ಹೊಳೆಮೂರ್ದಟ್ಟಿ ಗಸ್ತಿನ ಕಿರಬನಕಲ್ಲುಗುಡ್ಡ ಅರಣ್ಯ ಪ್ರದೇಶದಲ್ಲಿ ಎರಡು ಹುಲಿ ಮರಿಗಳು ಸಾವನ್ನಪ್ಪಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಸುಮಾರು 15 ದಿನಗಳ ಹಿಂದೆ ಹುಟ್ಟಿದ್ದ ಹೆಣ್ಣು ಮತ್ತು ಗಂಡು ಮರಿಗಳು, ತಾಯಿ ಹುಲಿಯಿಂದ ಬೇರ್ಪಟ್ಟು ಸಾವನ್ನಪ್ಪಿದ್ದಾಗಿ ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ಗಸ್ತಿನ ವೇಳೆ ಈ ವಿಷಯ ಅರಣ್ಯ ಇಲಾಖೆಗೆ ತಿಳಿದುಬಂದಿದ್ದು, ಕೂಡಲೇ ಡಿಸಿಎಫ್ ಸುರೇಂದ್ರ, ಎಸಿಎಫ್ ಮರಿಸ್ವಾಮಿ, ಆರ್‌ಎಫ್‌ಒ ನಿರಂಜನ್ ಸೇರಿದಂತೆ ಎಸ್‌ಓಪಿ ಸಮಿತಿಯ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಹುಲಿ ಮರಿಗಳು ತಾಯಿ ಹುಲಿಯಿಂದ ಕಳೆದ 10–15 ದಿನಗಳಿಂದ ಬೇರ್ಪಟ್ಟು ಎರಡು-ಮೂರು ದಿನಗಳ ವ್ಯತ್ಯಾಸದಲ್ಲಿ ಸಾವನ್ನಪ್ಪಿರುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.
Next Story





