Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಾಮರಾಜನಗರ
  4. Hanur | ಮನೆ ಬೀಗ ಮುರಿದು 8 ಲಕ್ಷ ರೂ....

Hanur | ಮನೆ ಬೀಗ ಮುರಿದು 8 ಲಕ್ಷ ರೂ. ನಗದು, 140 ಗ್ರಾಂ ಚಿನ್ನಾಭರಣ ಕಳವು

ವಾರ್ತಾಭಾರತಿವಾರ್ತಾಭಾರತಿ13 Nov 2026 10:12 AM IST
share
Hanur | ಮನೆ ಬೀಗ ಮುರಿದು 8 ಲಕ್ಷ ರೂ. ನಗದು, 140 ಗ್ರಾಂ ಚಿನ್ನಾಭರಣ ಕಳವು

ಹನೂರು: ಕ್ಷೇತ್ರ ವ್ಯಾಪ್ತಿಯ ಕಾಮಗೆರೆ ಗ್ರಾಮದಲ್ಲಿ ಮನೆಯ ಬೀಗ ಮುರಿದು ಒಳನುಗ್ಗಿದ ದುಷ್ಕರ್ಮಿಗಳು ಸುಮಾರು 8 ಲಕ್ಷ ರೂ. ನಗದು ಹಾಗೂ 140 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಕಾಮಗೆರೆ ಗ್ರಾಮದ ನಿವಾಸಿ, ಪ್ರಸ್ತುತ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಹೊಮ್ಮರಗಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಯೋಗೀಶ್‌ಬಾಬು ಅವರಿಗೆ ಸೇರಿದ ಮನೆಯಲ್ಲಿ ಕಳ್ಳತನ ನಡೆದಿದೆ.

ಯೋಗೀಶ್‌ಬಾಬು ಅವರ ತಂದೆ-ತಾಯಿ ಕಾಮಗೆರೆಯಲ್ಲಿರುವ ತಮ್ಮ ಮನೆಯಲ್ಲಿ ವಾಸವಾಗಿದ್ದರು. ತಂದೆಯ ಅನಾರೋಗ್ಯದ ಹಿನ್ನೆಲೆಯಲ್ಲಿ ನವೆಂಬರ್ 1ರಂದು ತಾಯಿ ಮನೆಗೆ ಬೀಗ ಹಾಕಿಕೊಂಡು ಮೈಸೂರಿನಲ್ಲಿರುವ ಮಗನ ಮನೆಗೆ ತೆರಳಿದ್ದರು. ಅಂದಿನಿಂದ ಮನೆಗೆ ಬೀಗ ಹಾಕಲಾಗಿತ್ತು. ನವೆಂಬರ್ 12ರಂದು ಬೆಳಿಗ್ಗೆ ಪಕ್ಕದ ಮನೆಯ ಕೃಷ್ಣಪ್ಪ ಅವರು ದೂರವಾಣಿ ಕರೆ ಮಾಡಿ ಮನೆಯ ಬಾಗಿಲು ತೆರೆದಿರುವುದಾಗಿ ಮಾಹಿತಿ ನೀಡಿದ್ದಾರೆ. ತಕ್ಷಣ ಯೋಗೀಶ್‌ಬಾಬು ಅವರು ತಮ್ಮ ಸಹೋದರ ಹಾಗೂ ತಂದೆ-ತಾಯಿಯೊಂದಿಗೆ ಕಾಮಗೆರೆಗೆ ಆಗಮಿಸಿ ಪರಿಶೀಲಿಸಿದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

ದುಷ್ಕರ್ಮಿಗಳು ಮನೆಯ ಮುಂಬಾಗಿಲಿನ ಬೀಗದ ಚಿಲಕ ಹಾಗೂ ಬಾಗಿಲನ್ನು ಯಾವುದೋ ಆಯುಧದಿಂದ ಮೀಟಿ ಮುರಿದು ಒಳನುಗ್ಗಿದ್ದಾರೆ. ಮನೆಯ ಹಾಲ್‌ನಲ್ಲಿದ್ದ ನಾಲ್ಕು ಗಾಡ್ರೇಜ್ ಬೀರುಗಳು ಹಾಗೂ ಮರದ ಬೀರುಗಳನ್ನು ತೆರೆದಿದ್ದಾರೆ. ಬಳಿಕ ತಂದೆ ಮಲಗುವ ಕೊಠಡಿಯ ಬಾಗಿಲಿನ ಚಿಲಕವನ್ನೂ ಮುರಿದು ಒಳನುಗ್ಗಿ, ಅಲ್ಲಿದ್ದ ಬೀರುವನ್ನು ಒಡೆದು ಲಾಕರ್‌ನಲ್ಲಿಟ್ಟಿದ್ದ ಹಣ ಹಾಗೂ ಚಿನ್ನಾಭರಣಗಳನ್ನು ದೋಚಿದ್ದಾರೆ ಎಂದು ತಿಳಿದು ಬಂದಿದೆ.

8 ಲಕ್ಷ ರೂ. ನಗದು, 140 ಗ್ರಾಂ ಚಿನ್ನಾಭರಣ ನಾಪತ್ತೆ :

ದೂರುದಾರರ ಪ್ರಕಾರ, 500 ರೂ. ಮುಖಬೆಲೆಯ ನೋಟುಗಳ ನಾಲ್ಕು ಕಟ್ಟುಗಳು, 100 ರೂ. ಮುಖಬೆಲೆಯ ಎರಡು ಕಟ್ಟುಗಳು ಹಾಗೂ ಚಿಲ್ಲರೆ ಹಣ ಸೇರಿದಂತೆ ಒಟ್ಟು 8 ಲಕ್ಷ ರೂ. ನಗದು ಕಳುವಾಗಿದೆ. ಎರಡು ಎಳೆಸರ, ಒಂದು ಎಳೆಸರ, ಬಳೆ ಹಾಗೂ ಪೆಂಡೆಂಟ್ ಸೇರಿದಂತೆ ಒಟ್ಟು 140 ಗ್ರಾಂ ಚಿನ್ನಾಭರಣವನ್ನೂ ಕಳ್ಳರು ದೋಚಿದ್ದಾರೆ. ಮನೆಯಲ್ಲಿದ್ದ ಸುಮಾರು ಎರಡು ಕೆ.ಜಿ. ಬೆಳ್ಳಿ ಸಾಮಗ್ರಿಗಳನ್ನು ಮುಟ್ಟದೆ ಸ್ಥಳದಲ್ಲಿಯೇ ಬಿಟ್ಟು ಹೋಗಿದ್ದಾರೆ ಎನ್ನಲಾಗಿದೆ.

ಕಳ್ಳರನ್ನು ಪತ್ತೆಹಚ್ಚಿ ಕಳುವಾಗಿರುವ ನಗದು ಹಾಗೂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳುವಂತೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಗ್ರಾಮದಲ್ಲಿ ನಡೆದಿರುವ ಈ ಕಳ್ಳತನ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಕೂಡಲೇ ಕಳ್ಳರನ್ನು ಪತ್ತೆಹಚ್ಚಿ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಹನೂರು ಪಟ್ಟಣ ಪಂಚಾಯಿತಿಯ ಮಾಜಿ ಉಪಾಧ್ಯಕ್ಷ ಗಿರೀಶ್ ಒತ್ತಾಯಿಸಿದ್ದಾರೆ.

Tags

lock brokenHousesHanur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X